ಕಾಫಿನಾಡು ಚಿಕ್ಕಮಗಳೂರಲ್ಲಿ ಡೆಂಘೀಗೆ ಮೊದಲ ಬಲಿ
ಕಾಫಿನಾಡು ಚಿಕ್ಕಮಗಳೂರು ನಗರದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ. ಚಿಕ್ಕಮಗಳೂರು ನಗರದ ಮೊಹ್ಮದ್ ಖಾನ್ ಗಲ್ಲಿ ನಿವಾಸಿಯಾಗಿರುವ ಸುಹನಾ ಬಾನು ಡೆಂಘೀಗೆ ಬಲಿಯಾಗಿದ್ದಾಳೆ. ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಡೆಂಗ್ಯೂ ಜ್ವರವು ಈಡಿಸ್ ಎಂಬ ಸೊಳ್ಳೆ ಕಡಿತದಿಂದ ಹರಡುವಂತಹ ಗಂಭೀರ ಕಾಯಿಲೆಯಾಗಿದೆ. ಈಡಿಸ್ ಸೊಳ್ಳೆ ಡೆಂಗ್ಯೂ ವೈರಸ್ ಅನ್ನು ಒಬ್ಬರಿಂದ ಇನ್ನೊಬ್ಬರಿಗೆ ವರ್ಗಾಯಿಸುತ್ತದೆ.
ಚಿಕ್ಕಮಗಳೂರು, ಫೆ.08: ಕಾಫಿನಾಡು ಚಿಕ್ಕಮಗಳೂರಲ್ಲಿ ಡೆಂಘೀಗೆ (Dengue) ಮೊದಲ ಬಲಿಯಾಗಿದೆ. ಡೆಂಘೀಗೆ ಕಾಲೇಜು ವಿದ್ಯಾರ್ಥಿನಿ ಸುಹನಾ ಬಾನು(18) ಮೃತಪಟ್ಟಿದ್ದಾರೆ (Death). ಚಿಕ್ಕಮಗಳೂರು ನಗರದ ಮೊಹ್ಮದ್ ಖಾನ್ ಗಲ್ಲಿ ನಿವಾಸಿಯಾಗಿರುವ ಸುಹನಾ ಬಾನುಳನ್ನು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ.
ಡೆಂಗ್ಯೂ ಜ್ವರವು ಈಡಿಸ್ ಎಂಬ ಸೊಳ್ಳೆ ಕಡಿತದಿಂದ ಹರಡುವಂತಹ ಗಂಭೀರ ಕಾಯಿಲೆಯಾಗಿದೆ. ಈಡಿಸ್ ಸೊಳ್ಳೆ ಡೆಂಗ್ಯೂ ವೈರಸ್ ಅನ್ನು ಒಬ್ಬರಿಂದ ಇನ್ನೊಬ್ಬರಿಗೆ ವರ್ಗಾಯಿಸುತ್ತದೆ.
ಡೆಂಗ್ಯೂ ರೋಗದ ಲಕ್ಷಣಗಳು
ಕೀಲು ನೋವು, ಸ್ನಾಯು ನೋವು, ಕೆಳಹೊಟ್ಟೆಯಲ್ಲಿ ನೋವು, ವಾಂತಿ ಅಥವಾ ಮಲದಲ್ಲಿ ರಕ್ತ, ತ್ವಚೆಯ ಮೇಲೆ ಸಣ್ಣ ಕೆಂಪು ಚುಕ್ಕೆಗಳು, ಪದೇ ಪದೇ ಜ್ವರ ಮರುಕಳಿಸುವುದು, ಜ್ವರದ ತಾಪಮಾನವು 104 ಡಿಗ್ರಿವರೆಗೆ ಏರುವುದು, ಮೈ-ಕೈ ನೋವು ಮತ್ತು ಸ್ನಾಯುಗಳ ಸೆಳೆತ ಎಲ್ಲವೂ ಡೆಂಗ್ಯೂ ರೋಗದ ಲಕ್ಷಣಗಳು. ಇನ್ನು ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಇದನ್ನೂ ಓದಿ: ಚಿಕ್ಕಮಗಳೂರು: ಮಹಿಳೆಗೆ ವಕ್ಕರಿಸಿದ ಮಂಗನ ಕಾಯಿಲೆ; 9ಕ್ಕೆ ಏರಿದ ಪ್ರಕರಣಗಳ ಸಂಖ್ಯೆ
ಚಿಕ್ಕಮಗಳೂರಿಗೆ ಮಂಗನ ಕಾಯಿಲೆ ಕಾಟ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗಿವೆ. ಅತಿ ಹೆಚ್ಚು ಮಂಗನ ಕಾಯಿಲೆ ಪ್ರಕರಣಗಳು ಒಎಲ್‌ವಿ ಎಸ್ಟೇಟ್ ಭಾಗದಲ್ಲಿ ಪತ್ತೆಯಾಗಿದೆ. ಈ ಒಎಲ್‌ವಿ ಎಸ್ಟೇಟ್ ಕೊಪ್ಪ ತಾಲೂಕಿನಲ್ಲಿ ಇದೆ. ಹೀಗಾಗಿ ಆರೋಗ್ಯ ಇಲಾಖೆಯು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಫ್ಡಿ ವಾರ್ಡ್ ತೆರೆದಿದೆ.
ಕೆಎಫ್ಡಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ಮೂರು ತಾಲೂಕುಗಳಲ್ಲಿ ಆತಂಕ ಸೃಷ್ಟಿಸಿದೆ. ಶಿವಮೊಗ್ಗ-ಉತ್ತರಕನ್ನಡಕ್ಕೆ ಹೊಂದಿಕೊಂಡಂತಿರುವ ಕಾಫಿನಾಡ ಮಲೆನಾಡು ಭಾಗದಲ್ಲಿ ಪ್ರತಿ ವರ್ಷ KFD ಸೋಂಕಿನ ಆತಂಕ ಇದ್ದೇ ಇರುತ್ತದೆ.
ಮಂಗನ ಕಾಯಿಲೆ ಹೆಚ್ಚುತ್ತಿರುವ ಹಾಗೂ ಸೋಂಕಿಗೆ ವೃದ್ಧ ಬಲಿಯಾದ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾದ್ಯಂತ ಆರೋಗ್ಯ ಇಲಾಖೆ (Health Departmnet) ಹೈಅಲರ್ಟ್ ಆಗಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಅಧಿಕಾರಿಗಳು KFD (Kyasanur Forest Disease) ವಾರ್ಡ್ ತೆರೆದಿದೆ. ಅರಣ್ಯದಲ್ಲಿ ಕೆಎಫ್ಡಿ ಸೋಂಕು ಹರಡದಂತೆ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಆರೋಗ್ಯ ಸಿಬ್ಬಂದಿ ಮನೆ ಮನೆಗೆ ತೆರಳಿ ಔಷಧಿ ವಿತರಣೆ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಮೃತಪಟ್ಟಿರುವ ಮಂಗಗಳ ರಕ್ತದ ಮಾದರಿಯನ್ನು ಸಂಗ್ರಹಿಸುತ್ತಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ