ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಹಾವಳಿ, ನೂರು ದಾಟಿದ ಪ್ರಕರಣಗಳ ಸಂಖ್ಯೆ: ಹೈ ಅಲರ್ಟ್
ಜಿಲ್ಲೆಯಾದ್ಯಂತ ಡೆಂಗಿ ಹಾಗೂ ವಿಷಮ ಶೀತ ಜ್ವರ ಹೆಚ್ಚುತ್ತಿದ್ದು ಆರೋಗ್ಯ ಇಲಾಖೆ ಜಿಲ್ಲೆಯಾದ್ಯಂತ ಅರಿವು ಮೂಡಿಸಲು ಮುಂದಾಗಿದ್ದು, ಸಾರ್ವಜನಿಕರು ಮುಜಾಗ್ರತೆಯಿಂದ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ. ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಮೇ 18: ಕಾಫಿನಾಡು ಚಿಕ್ಕಮಗಳೂರಿನ (Chikkamagalur) ಮಲೆನಾಡಿನಾದ್ಯಂತ ಮುಂಗಾರು ಪೂರ್ವ ಮಳೆ ಅರ್ಭಟಿಸುತ್ತಿದೆ. ಮತ್ತೊಂದೆಡೆ ಸಂಕ್ರಾಮಿಕ ರೋಗಗಳು ಉಲ್ಬಣಗೊಳ್ಳುತ್ತಿವೆ. ಡೆಂಗಿ / ಡೆಂಗ್ಯೂ (Dengue) ಹಾಗೂ ವಿಷಮ ಶೀತ ಜ್ವರ ರಣಕೇಕೆ ಹಾಕಲಾರಂಭಿಸಿದ್ದು ಜನ ಅನಾರೋಗ್ಯದಿಂದ ಆಸ್ಪತ್ರೆ ಸೇರುತ್ತಿದ್ದಾರೆ. ರೋಗಿಗಳಿಂದ ಆಸ್ಪತ್ರೆಗಳು ತುಂಬಿ ಹೋಗಿದ್ದು, ಅರೋಗ್ಯ ಇಲಾಖೆಯ ಚಿಕ್ಕಮಗಳೂರು ಘಟಕ ಹೈ ಅಲರ್ಟ್ ಘೋಷಣೆ ಮಾಡಿದೆ.
ಈಗಾಗಲೇ ಮಲೆನಾಡಲ್ಲಿ ವೈರಲ್ ಜ್ವರದಿಂದಾಗಿ ಆಸ್ಪತ್ರೆಗೆ ಹೋಗುವವರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಮಲೆನಾಡು ಪ್ರದೇಶದಲ್ಲಿ ವಿಷಮ ಶೀತ ಜ್ವರ ಹಾಗೂ ಡೆಂಗ್ಯೂ ಜ್ವರದ ಪ್ರಮಾಣ ಕೂಡಾ ಅಷ್ಟೇ ಪ್ರಮಾಣದಲ್ಲಿ ಕ್ಷಿಪ್ರಗತಿಯಲ್ಲಿ ಹೆಚ್ಚಾಗತೊಡಗಿದೆ. ಜಿಲ್ಲೆಯಲ್ಲಿ ಈಗಗಲೇ ಡೆಂಗ್ಯೂ ಪ್ರಕರಣಗಳು ನೂರರ ಗಡಿ ದಾಟಿದೆ. ಜನವರಿಯಿಂದ ಇದುವರೆಗೆ 116 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಅಷ್ಟೇ ಅಲ್ಲದೆ ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳು ಆಸ್ಪತ್ರೆಗೆ ಬರ್ಯ್ವ ಹೊರ ರೋಗಿಗಳ ಸಂಖ್ಯೆ ಕೂಡಾ ಗಣನೀಯವಾಗಿ ಏರಿಕೆಯಾಗಿರೋದು ಜಿಲ್ಲೆಯ ಜನರನ್ನ ಆತಂಕಕ್ಕೆ ದೂಡಿದೆ.
ಜಿಲ್ಲೆಯಾದ್ಯಂತ ಡೆಂಗಿ ಹಾಗೂ ವಿಷಮ ಶೀತ ಜ್ವರ ಹೆಚ್ಚುತ್ತಿದ್ದು ಆರೋಗ್ಯ ಇಲಾಖೆ ಜಿಲ್ಲೆಯಾದ್ಯಂತ ಅರಿವು ಮೂಡಿಸಲು ಮುಂದಾಗಿದ್ದು, ಸಾರ್ವಜನಿಕರು ಮುಜಾಗ್ರತೆಯಿಂದ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ. ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಆಸ್ಪತ್ರೆಗೆ ಸಾಖಲಾಗುವ ಪ್ರಕರಣಗಳಲ್ಲಿ ಜ್ವರ ಪ್ರಕರಣಗಳೇ ಹೆಚ್ಚಾಗಿ ಕಂಡು ಬರುತ್ತಿವೆ.
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ 150 ಶಂಕಿತ ರೋಗಿಗಳು ದಾಖಲಾಗಿದ್ದು, 75 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಯಾವುದೇ ಸಾವು ಸಂಭವಿಸದೇ ಇರೋದು ಸ್ವಲ್ಪ ಮಟ್ಟಿಗೆ ಸಮಾಧನ ತರಿಸಿದೆ. ಆದರೂ ಆರೋಗ್ಯ ಇಲ್ಲಾಖೆ ಕಟ್ಟೆಚ್ಚರ ವಹಿಸಿದೆ.
ಇದನ್ನೂ ಓದಿ: ಕೇರಳದಲ್ಲಿ ಹೆಚ್ಚುತ್ತಿದೆ ವೆಸ್ಟ್ ನೈಲ್ ಜ್ವರ, ಮೈಸೂರಿನಲ್ಲಿ ಹೆಚ್ಚಿದ ಆತಂಕ
ಹವಾಮಾನ ವೈಪರಿತ್ಯದಿಂದಾಗಿ ಜ್ವರ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ತಿದ್ದು ಎಲ್ಲ ಜ್ವರವನ್ನೂ ಡೆಂಗ್ಯೂ ಎಂದು ಭಯ ಸೃಷ್ಟಿಸಬಾರದು. ಜ್ವರ ಬಂದಾಕ್ಷಣ ಅನಗತ್ಯವಾಗಿ ಟೆಸ್ಟ್ ಮಾಡಿಸುವ ಬದಲಾಗಿ ಅಗತ್ಯವಿದ್ದವರು ಮಾತ್ರ ಟೆಸ್ಟ್ ಮಾಡಿಸಲು ಮುಂದಾಗಬೇಕು ಎಂದು ಜಿಲ್ಲಾಡಳಿತ ಮಾಹಿತಿ ರವಾನೆ ಮಾಡಿದೆ. ಅದರ ಜೊತೆಗೆ ಜಿಲ್ಲಾ ಆರೋಗ್ಯ ಡೆಂಗ್ಯೂ ಹಾಗೂ ಸಾಂಕ್ರಾಮಿಕ ರೋಗಗಳನ್ನ ಎದುರಿಸಲು ಸನ್ನದ್ಧವಾಗಿದೆ. ಜಿಲ್ಲೆಯ ಜನ ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಧೈರ್ಯ ನೀಡುವ ಕೆಲಸದಲ್ಲಿ ನಿರತವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ