ಸಿದ್ದರಾಮಯ್ಯ ತಿಥಿ ಕಾರ್ಡ್ ಪೋಸ್ಟ್: ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

| Updated By: Rakesh Nayak Manchi

Updated on: Aug 11, 2023 | 6:50 PM

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಚಿಕ್ಕಮಗಳೂರಿನಲ್ಲಿ ದೂರು ದಾಖಲಾಗಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ತಿಥಿ ಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣ ಇದಾಗಿದೆ.

ಸಿದ್ದರಾಮಯ್ಯ ತಿಥಿ ಕಾರ್ಡ್ ಪೋಸ್ಟ್: ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು
ಸಿದ್ದರಾಮಯ್ಯ ತಿಥಿ ಕಾರ್ಡ್ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯರ್ತನ ವಿರುದ್ಧ ಪ್ರಕರಣ ದಾಖಲು
Follow us on

ಚಿಕ್ಕಮಗಳೂರು, ಆಗಸ್ಟ್ 11: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ತಿಥಿ ಕಾರ್ಡ್ ರಚಿಸಿ ಹಿಂದೂ ಸಾಮ್ರಾಜ್ಯ ಮೂಡಿಗೆರೆ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ಸಿದ್ದರಾಮಯ್ಯ ಅವರ ಅಭಿಮಾನಿಗಳು ನೀಡಿದ ದೂರಿನ ಅನ್ವಯ ಪ್ರಜ್ವಲ್ ವಿರುದ್ಧ ಚಿಕ್ಕಮಗಳೂರು (Chikkamagaluru) ಸೆನ್ ಪೊಲೀಸ್ ಠಾಣೆ ಹಾಗೂ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದರಾಮಯ್ಯ ಅವರ ತಿಥಿ ಕಾರ್ಡ್ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟ್ ರಚಿಸಿ ಫೇಸ್​ಬುಕ್ ಮತ್ತು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಮೂಡಿಗೆರೆ ಪಟ್ಟಣದ ಪ್ರಜ್ವಲ್ ಹಂಚಿಕೊಂಡಿದ್ದನು. ಇದನ್ನು ಗಮನಿಸಿದ ಸಿದ್ದರಾಮಯ್ಯ ಅಭಿಮಾನಿಗಳ ಬಳಗವು ಪ್ರಜ್ವಲ್ ವಿರುದ್ಧ ಸೆನ್ ಪೊಲೀಸ್ ಠಾಣೆ ಮತ್ತು ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದೆ.

ಇದನ್ನೂ ಓದಿ: ಸಮಿತಿ ವರದಿ ಬಂದ ನಂತರವೇ ಬಾಕಿ ಬಿಲ್ ಪಾವತಿ: ಸಿಎಂ ಸಿದ್ದರಾಮಯ್ಯ

ಫೇಸ್​ಬುಕ್ ಮತ್ತು ಇನ್​ಸ್ಟಾಗ್ರಾಮ್ ಪೇಜ್​ಗಳಲ್ಲಿ ಮುಖ್ಯಮಂತ್ರಿ ಅವರಿಗೆ ಅವಹೇಳನ ಆಗುವ ರೀತಿ ಮತ್ತು ಸಮಾಜದ ಸ್ವಾಸ್ತ್ಯವನ್ನು ಹಾಳುಮಾಡುವ ರೀತಿ ಬಿಂಬಿಸುತ್ತಿದ್ದು, ಈ ವಿಚಾರಕ್ಕೆ ಕಾರಣರಾದವರ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕಾಗಿ ಕೇಳಿಕೊಳ್ಳುತ್ತಿದ್ದೇವೆ ಎಂದು ಚಿಕ್ಕಮಗಳೂರು ಜಿಲ್ಲಾ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ದೂರಿನಲ್ಲಿ ಮನವಿ ಮಾಡಿಕೊಂಡಿದೆ.

ಹಿಂದೂ ಸಾಮ್ರಾಜ್ಯ ಮೂಡಿಗೆರೆ ಫೇಸ್​ಬುಕ್ ಪೇಜ್​ನಲ್ಲಿ ಅವಹೇಳನಕಾರಿ ಪೋಸ್ಟ್ ಸಂಬಂಧ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ