AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಚಾರ್ಮಾಡಿ ಘಾಟ್​ನಲ್ಲಿ ರಾತ್ರಿ 10 ಗಂಟೆಯವರೆಗೂ ವಾಹನ ಸಂಚಾರಕ್ಕೆ ಅವಕಾಶ

ಇದ್ದಕ್ಕಿದ್ದಂತೆ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದರಿಂದ ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರ ಸಮೀಪ ವಾಹನಗಳು ಸಾಲಗಟ್ಟಿದ್ದವು.

ಚಿಕ್ಕಮಗಳೂರು: ಚಾರ್ಮಾಡಿ ಘಾಟ್​ನಲ್ಲಿ ರಾತ್ರಿ 10 ಗಂಟೆಯವರೆಗೂ ವಾಹನ ಸಂಚಾರಕ್ಕೆ ಅವಕಾಶ
ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರದಲ್ಲಿ ಶುಕ್ರವಾರ ರಾತ್ರಿ ಸಾಲುಗಟ್ಟಿದ್ದ ವಾಹನಗಳು
TV9 Web
| Edited By: |

Updated on: Jul 23, 2021 | 9:05 PM

Share

ಚಿಕ್ಕಮಗಳೂರು: ಪಶ್ಚಿಮ ಘಟ್ಟವನ್ನು ಕರಾವಳಿ ಜಿಲ್ಲೆಗಳೊಂದಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗ ಚಾರ್ಮಾಡಿ ಘಾಟ್​ನಲ್ಲಿ ರಾತ್ರಿ 10 ಗಂಟೆಯವರೆಗೆ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಇದ್ದಕ್ಕಿದ್ದಂತೆ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದರಿಂದ ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರ ಸಮೀಪ ವಾಹನಗಳು ಸಾಲಗಟ್ಟಿದ್ದವು. ಈ ಕುರಿತು ಟಿವಿ9 ವರದಿ ಮಾಡಿತ್ತು.

ಇದೀಗ ರಾತ್ರಿ 10 ಗಂಟೆಯವರೆಗೂ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭೂಕುಸಿತ ಸಾಧ್ಯತೆ ಇರುವುದರಿಂದ ಸಂಜೆ 7ರಿಂದ ಬೆಳಿಗ್ಗೆ 6 ಗಂಟೆಯವರೆಗೂ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದರು.

ಜಿಲ್ಲಾಧಿಕಾರಿ ಆದೇಶ ಪ್ರಕಟಗೊಂಡ ನಂತರ ಪೊಲೀಸರು ಕೊಟ್ಟಿಗೆಹಾರದ ಬಳಿಯೇ ವಾಹನಗಳನ್ನು ತಡೆದು ನಿಲ್ಲಿಸಿದ್ದರು. ಜನರ ಪರದಾಟದ ಬಗ್ಗೆ ಟಿವಿ9ನಲ್ಲಿ ವರದಿ ಪ್ರಕಟವಾಗಿತ್ತು. ಜನರ ಸಂಕಷ್ಟವನ್ನು ಗಮನಕ್ಕೆ ತೆಗೆದುಕೊಂಡ ಜಿಲ್ಲಾಡಳಿತ ನಂತರ ರಾತ್ರಿ 10 ಗಂಟೆಯವರೆಗೂ ವಾಹನ ಸಂಚಾರಕ್ಕೆ ಅವಕಾಶ ನೀಡಿತು.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ. ನರಸಿಂಹರಾಜಪುರ ತಾಲ್ಲೂಕಿನ ಮಾಗುಂಡಿ ಬಳಿಯ ಮಹಲ್ ಗೋಡು ಸೇತುವೆ ಮುಳುಗಡೆಯಾಗಿದೆ. ಇದರಿಂದ ಬಾಳೆಹೊನ್ನೂರು-ಕಳಸ-ಹೊರನಾಡು ಸಂಪರ್ಕ ಕಡಿತಗೊಂಡಿದೆ.

(District Administration allows vehicle movement for up to 10 pm in Charmadi Ghat)

ಇದನ್ನೂ ಓದಿ: Charmady Ghat: ಪ್ರಯಾಣಿಕರೇ ಗಮನಿಸಿ: ರಾತ್ರಿ ಸಂಚಾರಕ್ಕೆ ಚಾರ್ಮಾಡಿ ಘಾಟ್ ಬಂದ್: ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ

ಇದನ್ನೂ ಓದಿ: Shiradi Ghat: ಭೂಕುಸಿತವಾಗಿ ಮಂಗಳೂರು- ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟ್ ಬಂದ್; ಬದಲಿ ಮಾರ್ಗ ಇಲ್ಲಿದೆ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ