ಚಿಕ್ಕಮಗಳೂರು: ಪಶ್ಚಿಮ ಘಟ್ಟವನ್ನು ಕರಾವಳಿ ಜಿಲ್ಲೆಗಳೊಂದಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗ ಚಾರ್ಮಾಡಿ ಘಾಟ್ನಲ್ಲಿ ರಾತ್ರಿ 10 ಗಂಟೆಯವರೆಗೆ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಇದ್ದಕ್ಕಿದ್ದಂತೆ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದರಿಂದ ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರ ಸಮೀಪ ವಾಹನಗಳು ಸಾಲಗಟ್ಟಿದ್ದವು. ಈ ಕುರಿತು ಟಿವಿ9 ವರದಿ ಮಾಡಿತ್ತು.
ಇದೀಗ ರಾತ್ರಿ 10 ಗಂಟೆಯವರೆಗೂ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭೂಕುಸಿತ ಸಾಧ್ಯತೆ ಇರುವುದರಿಂದ ಸಂಜೆ 7ರಿಂದ ಬೆಳಿಗ್ಗೆ 6 ಗಂಟೆಯವರೆಗೂ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದರು.
ಜಿಲ್ಲಾಧಿಕಾರಿ ಆದೇಶ ಪ್ರಕಟಗೊಂಡ ನಂತರ ಪೊಲೀಸರು ಕೊಟ್ಟಿಗೆಹಾರದ ಬಳಿಯೇ ವಾಹನಗಳನ್ನು ತಡೆದು ನಿಲ್ಲಿಸಿದ್ದರು. ಜನರ ಪರದಾಟದ ಬಗ್ಗೆ ಟಿವಿ9ನಲ್ಲಿ ವರದಿ ಪ್ರಕಟವಾಗಿತ್ತು. ಜನರ ಸಂಕಷ್ಟವನ್ನು ಗಮನಕ್ಕೆ ತೆಗೆದುಕೊಂಡ ಜಿಲ್ಲಾಡಳಿತ ನಂತರ ರಾತ್ರಿ 10 ಗಂಟೆಯವರೆಗೂ ವಾಹನ ಸಂಚಾರಕ್ಕೆ ಅವಕಾಶ ನೀಡಿತು.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ. ನರಸಿಂಹರಾಜಪುರ ತಾಲ್ಲೂಕಿನ ಮಾಗುಂಡಿ ಬಳಿಯ ಮಹಲ್ ಗೋಡು ಸೇತುವೆ ಮುಳುಗಡೆಯಾಗಿದೆ. ಇದರಿಂದ ಬಾಳೆಹೊನ್ನೂರು-ಕಳಸ-ಹೊರನಾಡು ಸಂಪರ್ಕ ಕಡಿತಗೊಂಡಿದೆ.
(District Administration allows vehicle movement for up to 10 pm in Charmadi Ghat)
ಇದನ್ನೂ ಓದಿ: Charmady Ghat: ಪ್ರಯಾಣಿಕರೇ ಗಮನಿಸಿ: ರಾತ್ರಿ ಸಂಚಾರಕ್ಕೆ ಚಾರ್ಮಾಡಿ ಘಾಟ್ ಬಂದ್: ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ
ಇದನ್ನೂ ಓದಿ: Shiradi Ghat: ಭೂಕುಸಿತವಾಗಿ ಮಂಗಳೂರು- ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟ್ ಬಂದ್; ಬದಲಿ ಮಾರ್ಗ ಇಲ್ಲಿದೆ