AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ಮುಳುಗಿ ಮೂವರ ಸಾವು

ಕಾಲುವೆ ನೀರಿನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ.

ಚಿಕ್ಕಮಗಳೂರು: ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ಮುಳುಗಿ ಮೂವರ ಸಾವು
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:May 22, 2023 | 11:03 AM

Share

ಚಿಕ್ಕಮಗಳೂರು: ಕಾಲುವೆ ನೀರಿನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ. ರವಿ(31), ಅನನ್ಯ(17), ಶಾಮವೇಣಿ(16) ಮೃತ ದುರ್ದೈವಿಗಳು. ರವಿ ಮೂಲತಃ ಲಕ್ಕವಳ್ಳಿ ನಿವಾಸಿ. ಅನನ್ಯ ಮತ್ತು  ಶಾಮವೇಣಿ ರವಿಯ ಸಹೋದರಿಯರ ಮಕ್ಕಳು. ಅನನ್ಯ ಮೂಲತಃ ಶಿವಮೊಗ್ಗ, ಶಾಮವೇಣಿ ನಂಜನಗೂಡಿನವರು. ರಜೆ ನಿಮಿತ್ತ ಅನನ್ಯ ಮತ್ತ ಶಾಮವೇಣಿ ಲಕ್ಕವಳ್ಳಿ ಸಂಬಂಧಿ ಮನೆಗೆ ಬಂದಾಗ ಘಟನೆ ಸಂಭವಿಸಿದೆ. ರವಿ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಣ ಮಳೆಗೆ ಮೈಸೂರಿನಲ್ಲಿ ಇಬ್ಬರು ಬಲಿ, 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಮೈಸೂರು: ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗಿದ್ದು ಭಾರೀ ಅನಾಹುತಗಳು ಸಂಭವಿಸಿವೆ. ಮೈಸೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಗೆ ಹಲವೆಡೆ ಹಾನಿಯಾಗಿದೆ. ಹಾಗೂ ರಸ್ತೆಯಲ್ಲಿ ಕಡಿದು ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಯುವಕ ಮೃತಪಟ್ಟಿದ್ದಾನೆ. ಮತ್ತೊಂದೆಡೆ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾನೆ. ಹೀಗೆ ಮೈಸೂರಿನಲ್ಲಿ ಮಳೆಯಿಂದ ಭಾರೀ ಅನಾಹುತಗಳು ಸಂಭವಿಸಿವೆ.

ಇದನ್ನೂ ಓದಿ: ಕೆಲವೇ ಗಂಟೆ ಸುರಿದ ಮಳೆಗೆ ಬೆಂಗಳೂರು ತತ್ತರ; ಎಲ್ಲೆಲ್ಲಿ ಎಷ್ಟು ಪ್ರಮಾಣ ಮಳೆ ಸುರಿದಿದೆ? ಇಲ್ಲಿದೆ ವಿವರ

ಮಳೆಗೆ ಇಬ್ಬರು ಬಲಿ

ಪಿರಿಯಾಪಟ್ಟಣ ತಾಲೂಕಿನ ಬಾರಸೆ ಗ್ರಾಮದಲ್ಲಿ ರಸ್ತೆಯಲ್ಲಿ ಕಡಿದು ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಸ್ವಾಮಿ(18) ಎಂಬ ಯುವಕ ಸಾವನ್ನಪ್ಪಿದ್ದು ಹರೀಶ್ ಹಾಗೂ ಸಂಜಯ್‌ ಎಂಬ ಇಬ್ಬರಿಗೆ ಗಾಯಗಳಾಗಿವೆ. ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಮತ್ತೊಂದೆಡೆ ಹುಣಸೂರು ತಾಲೂಕಿನ ಮಂಟಿಕೊಪ್ಪಲು ಗ್ರಾಮದಲ್ಲಿ ಸಿಡಿಲು ಬಡಿದು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತ ಹರೀಶ್ (42) ಮೃತಪಟ್ಟಿದ್ದಾರೆ. ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗಿದ್ದು ಜಮೀನಿನಲ್ಲಿದ್ದ ಗುಡಿಸಲಿನ ಬಳಿ ರೈತ ಹರೀಶ್ ಆಶ್ರಯ ಪಡೆದಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಳೆಗೆ 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಹುಣಸೂರು ತಾಲೂಕಿನಲ್ಲಿ ಗಾಳಿ ಮಳೆಗೆ 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಸಂಭವಿಸಿದೆ. ಗಾಳಿಗೆ ಮನೆಯ ಮೇಲ್ಚಾವಣಿಗೆ ಹಾಕಿದ್ದ ಶೀಟ್​​ಗಳು ಹಾರಿ ಹೋಗಿವೆ. ಗಾಳಿ ಮಳೆಗೆ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಮರಗಳು ಧರೆಗುರುಳಿದ ಪರಿಣಾಮ ವಿದ್ಯುತ್, ರಸ್ತೆ​ ಸಂಪರ್ಕ ಬಂದ್​ ಆಗಿದೆ. ಹನಗೋಡು ವ್ಯಾಪ್ತಿಯ ಬಹುತೇಕ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಹನಗೋಡು ಮುಖ್ಯ ರಸ್ತೆಯಲ್ಲಿ ಮರಗಳು ಬಿದ್ದು ರಸ್ತೆ ಸಂಚಾರ ಬಂದ್​ ಆಗಿದೆ. ಹೊಸಕೋಟೆ ಗೇಟ್ ಬಳಿ ಬೃಹತ್ ಮರ ಉರುಳಿ ಸಂಚಾರ ಬಂದ್ ಆಗಿದೆ. ಹನಗೋಡು-ಕಿರಂಗೂರು ಹರಳಹಳ್ಳಿ ರಸ್ತೆ ಜಲಾವೃತಗೊಂಡಿದ್ದು ಸಂಚಾರ ಸ್ಥಗಿತಗೊಂಡಿದೆ. ಕಿರಂಗೂರಿನಲ್ಲಿ ಮಳೆಯಿಂದಾಗಿ 4 ಎಕರೆಯಲ್ಲಿ ಬೆಳೆದಿದ್ದ ಜೋಳ ನಾಶವಾಗಿದೆ. ಹಿಂಡಗುಡ್ಲುವಿನಲ್ಲಿ ಮನೆಗೆ ನೀರು ನುಗ್ಗಿ ದವಸ, ಧಾನ್ಯ, ವಸ್ತುಗಳು ನಾಶವಾಗಿವೆ. ಚನ್ನಸೋಗೆ ಗ್ರಾಮದಲ್ಲಿ ಮೇಲ್ಚಾವಣಿಗಳು ಹಾರಿಹೋಗಿ ಮನೆಗಳಿಗೆ ಹಾನಿಯಾಗಿದೆ.

ರಾಜ್ಯದ ಮತ್ತಷ್ಟ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 am, Mon, 22 May 23

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!