ಚಿಕ್ಕಮಗಳೂರು: ಮಳೆಗೆ ಮನೆ ಗೋಡೆ ಕುಸಿದು ವೃದ್ಧ ಸಾವು

| Updated By: Rakesh Nayak Manchi

Updated on: Nov 07, 2023 | 10:45 AM

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಚ್ಷೇರಿ ಕೋಡಿಹಳ್ಳಿಯಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು: ಮಳೆಗೆ ಮನೆ ಗೋಡೆ ಕುಸಿದು ವೃದ್ಧ ಸಾವು
ಭಾರೀ ಮಳೆಗೆ ಮನೆ ಗೋಡೆ ಕುಸಿದು ಸಾವನ್ನಪ್ಪಿದ ಲಚ್ಚಾನಾಯ್ಕ್
Follow us on

ಚಿಕ್ಕಮಗಳೂರು, ನ.7: ಜಿಲ್ಲೆಯ ಕಡೂರು ತಾಲೂಕಿನ ಮಚ್ಷೇರಿ ಕೋಡಿಹಳ್ಳಿಯಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಗೆ (Chikkamagaluru Rain) ಮನೆಯ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಲಚ್ಚಾನಾಯ್ಕ್ (80) ಸಾವನ್ನಪ್ಪಿದ ವೃದ್ಧ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅಕಾಲಿಕ ಮಳೆಗೆ ಬೆಳೆ ಹಾನಿ

ರಾಯಚೂರು: ಜಿಲ್ಲೆಯಲ್ಲಿ ನಿನ್ನೆ ಏಕಾಏಕಿಯಾಗಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು. ಲಿಂಗಸುಗೂರು ತಾಲ್ಲೂಕಿನ ಆನೆಹೊಸೂರು, ಜಾಗಿರನಂದಿಹಾಳ, ಈಚನಾಳ, ಚಿತ್ತಾಪುರ ಸೇರಿ ಹಲವೆಡೆ ಮಳೆಯಾಗಿದ್ದು, ಅಕಾಲಿಕ ಮಳೆಗೆ ರೈತರು ಕಷ್ಟಪಟ್ಟು ಬೆಳೆದ ಭತ್ತ, ಮೆಣಸಿನಕಾಯಿ ಬೆಳೆಗಳಿಗೆ ಹಾನಿಯಾಗಿವೆ.

ಇದನ್ನೂ ಓದಿ: ಚಿಕ್ಕಮಗಳೂರು: ಜಿಂಕೆ ಬೇಟೆಯಾಡಲು ಬಂದಿದ್ದವನ ಎದೆ ಸೀಳಿದ ಅರಣ್ಯಾಧಿಕಾರಿಯ ಗುಂಡು; ಸ್ಥಳದಲ್ಲೇ ಮೃತ

ರೈತರು ನಾರಾಯಣಪುರ ಬಲದಂಡೆ ಹಾಗೂ ರಾಂಪೂರ ಏತ ನೀರಾವರಿ ಕಾಲುವೆ ಮೂಲಕ ನೀರು ಹರಿಸಿ ಬೆಳೆ ಬೆಳೆದಿದ್ದರು. ಆದರೆ ರಾತ್ರಿ ಸುರಿದ ಮಳೆಗೆ ಸಂಪೂರ್ಣವಾಗಿ ಬೆಳೆಗಳು ನೆಲಕಚ್ಚಿವೆ. ಬರಗಾಲದ ಮಧ್ಯೆ ಅಲ್ಪಸ್ವಲ್ಪ ಬೆಳೆ ಬೆಳೆದಿದ್ದ ರೈತರಿಗೆ ಸಂಕಷ್ಟ ಎದುರಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ