AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಬೀಟಮ್ಮ ಗ್ಯಾಂಗ್ ಓಡಿಸಲು ಅಖಾಡಕ್ಕಿಳಿದ ಅಭಿಮನ್ಯು ಆ್ಯಂಡ್ ಟೀಮ್

ಚಿಕ್ಕಮಗಳೂರು ನಗರದ ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆ ಆವರಣದಲ್ಲಿ 30 ಕಾಡಾನೆಗಳು ಬೀಡು ಬಿಟ್ಟಿದ್ದವು. ನಿನ್ನೆಯಷ್ಟೇ ಈ ಆನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಶಾಲಾ ಆವರಣದಿಂದ ಓಡಿಸಲಾಗಿದೆ. ಅದಾಗ್ಯೂ, ಈ ಬೀಟಮ್ಮ ಗ್ಯಾಂಗ್ ಉಪಟಳಕ್ಕೆ ಬ್ರೇಕ್ ಹಾಕಲು ಸಾಕಾನೆ ಅಭಿಮನ್ಯು ನೇತೃತ್ವದ ತಂಡ ಅಖಾಡಕ್ಕಿಳಿದಿದೆ.

ಚಿಕ್ಕಮಗಳೂರು: ಬೀಟಮ್ಮ ಗ್ಯಾಂಗ್ ಓಡಿಸಲು ಅಖಾಡಕ್ಕಿಳಿದ ಅಭಿಮನ್ಯು ಆ್ಯಂಡ್ ಟೀಮ್
ಚಿಕ್ಕಮಗಳೂರಿನಲ್ಲಿ ಕಾಡಾನೆ ಬೀಟಮ್ಮ ಗ್ಯಾಂಗ್ ಓಡಿಸಲು ಅಖಾಡಕ್ಕಿಳದ ಅಭಿಮನ್ಯು ಟೀಮ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Jan 30, 2024 | 9:15 AM

Share

ಚಿಕ್ಕಮಗಳೂರು, ಜ.30: ನಗರದ (Chikkamagaluru) ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆ ಆವರಣದಲ್ಲಿ 30 ಕಾಡಾನೆಗಳು (Wild Elephant) ಬೀಡು ಬಿಟ್ಟಿದ್ದವು. ನಿನ್ನೆಯಷ್ಟೇ ಈ ಆನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಶಾಲಾ ಆವರಣದಿಂದ ಓಡಿಸಲಾಗಿದೆ. ಅದಾಗ್ಯೂ, ಈ ಬೀಟಮ್ಮ ಗ್ಯಾಂಗ್ ಉಪಟಳಕ್ಕೆ ಬ್ರೇಕ್ ಹಾಕಲು ಸಾಕಾನೆ ಅಭಿಮನ್ಯು ನೇತೃತ್ವದ ತಂಡ ಅಖಾಡಕ್ಕಿಳಿದಿದೆ.

ಅಭಿಮನ್ಯು ನೇತೃತ್ವದಲ್ಲಿ ಬೀಟಮ್ಮ ಗ್ಯಾಂಗ್ ಕಾರ್ಯಚರಣೆ ನಡೆಯಲಿದೆ. ಅಭಿಮನ್ಯುಗೆ ಮಹೇಂದ್ರ ಸುಗ್ರೀವ, ಭೀಮ, ದುಬಾರೆ ಹಾಗೂ ನಾಗರಹೊಳೆಯಿಂದ ಆಗಮಿಸಿರುವ 8 ಕುಮ್ಕಿ ಆನೆಗಳು ಸಾಥ್ ನೀಡಲಿವೆ. ಸದ್ಯ ಅಭಿಮನ್ಯು ಮತ್ತು ತಂಡ ಮತ್ತಾವರ ಅರಣ್ಯ ಇಲಾಖೆಯ ವಸತಿ ಗೃಹದ ಆವರಣಕ್ಕೆ ಬಂದಿಳಿದಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆ ಬಳಿಕ ಕಾರ್ಯಚರಣೆ ಆರಂಭಗೊಳ್ಳಲಿದ್ದು, ಮಧ್ಯಾಹ್ನದ ಬಳಿಕ ಕಾರ್ಯಚರಣೆ ಆರಂಭಿಸುವ ಸಾಧ್ಯತೆ ಇದೆ. ಸದ್ಯ, ಬೀಟಮ್ಮ ಗ್ಯಾಂಗ್ ಚಲನೆಯ ಮೇಲೆ ನಿಗಾ ಇಟ್ಟಿರುವ ಅರಣ್ಯ ಇಲಾಖೆಯು ಬಂದ ದಾರಿಯಲ್ಲೇ ಅವುಗಳನ್ನು ವಾಪಸ್ ಕಳಿಸಲು ಪ್ಲಾನ್ ಮಾಡಿಕೊಂಡಿದೆ. ಸದ್ಯ, ಕೆಆರ್​ ಪೇಟೆ ಪೇಟೆ ಗ್ರಾಮದ ಶಾಲೆಯ ಹಿಂಭಾಗದ ಪ್ಲಾಂಟೇಶನ್​ನಲ್ಲಿ 30 ಕಾಡಾನೆಗಳೊಂದಿಗೆ ಪ್ಲಾಂಟೇಶನ್​ನಲ್ಲಿ ಬೀಟಮ್ಮ ಬೀಟು ಬಿಟ್ಟಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಶಾಲಾ ಆವರಣದಿಂದ ಹೊರ ಬಂದ ಕಾಡಾನೆ ಹಿಂಡು; 9 ಕ್ಕೂ ಅಧಿಕ ಗ್ರಾಮಗಳಲ್ಲಿ ಹೆಚ್ಚಿದ ಆತಂಕ

ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆಯಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಈ ಆವರಣದಲ್ಲೇ ಬೀಡುಬಿಟ್ಟಿದ್ದ ಕಾಡಾನೆ ಬೀಟಮ್ಮ ಮತ್ತು ಗ್ಯಾಂಗ್ ಜನರನ್ನ ಆತಂಕ್ಕೀಡು ಮಾಡಿತ್ತು. ಮುಂಜಾಗ್ರತಾ ಕ್ರಮ ಕೈಗೊಂಡು ಪಟಾಕಿ ಸಿಡಿಸಿ ಕಾಡಾನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಸತಿ ಶಾಲಾ ಆವರಣದಿಂದ ಹೊರಗೆ ಓಡಿಸಿದ್ದಾರೆ.

ಈ ಹಿನ್ನಲೆ ಕಾಡಾನೆ ಸಂಚಾರ ಮಾಡುವ ರಸ್ತೆಗಳಲ್ಲಿ ಬಿಗಿ ಭದ್ರತೆ ಮಾಡಲಾಗಿದ್ದು, 9 ಕ್ಕೂ ಅಧಿಕ ಗ್ರಾಮಗಳಲ್ಲಿ ಆತಂಕ ಹೆಚ್ಚಿದೆ. ಆದ್ದರಿಂದ ಯಾರೂ ಕೂಡ ಮನೆಗಳಿಂದ ಹೊರ ಬರದಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಬರೊಬ್ಬರಿ 100ಕ್ಕೂ ಹೆಚ್ಚು ಅರಣ್ಯ ಇಲಾಖೆ ಹಾಗೂ ಇಟಿಎಫ್‌ ಸಿಬ್ಬಂದಿಗಳು ಸೇರಿ ಕಾಡಾನೆಗಳ ಹಿಂಡನ್ನು ಮತ್ತೆ ಕಾಡಿಗಟ್ಟಲು ಪಟಾಕಿ ಸಿಡಿಸಿ ಹರಸಾಹಸ ಪಟ್ಟಿದ್ದರು. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 am, Tue, 30 January 24

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ