AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟಿನ್, ಮೋದಿ ಮಧ್ಯೆ ಉತ್ತಮ ಬಾಂಧವ್ಯ ಇದೆ: ಯುದ್ಧ ಶಮನಕ್ಕೆ ಪ್ರಧಾನಿ ಮೋದಿ ಪ್ರಯತ್ನಿಸುತ್ತಿದ್ದಾರೆ -ಶೃಂಗೇರಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ

ವಿಶ್ವದ ಹಲವು ದೇಶಗಳು ಯುದ್ಧ ಬೇಡ ಎನ್ನುತ್ತಿವೆ. ಆದರೆ ರಷ್ಯಾ ಮಾತ್ರ ಯುದ್ಧ ನಿಲ್ಲಿಸಲ್ಲ ಎನ್ನುತ್ತಿದೆ. ಪುಟಿನ್, ಮೋದಿ ಮಧ್ಯೆ ಉತ್ತಮ ಬಾಂಧವ್ಯ ಇದೆ. ಯುದ್ಧ ಶಮನಕ್ಕೆ ಪ್ರಧಾನಿ ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ಶೃಂಗೇರಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ರು.

ಪುಟಿನ್, ಮೋದಿ ಮಧ್ಯೆ ಉತ್ತಮ ಬಾಂಧವ್ಯ ಇದೆ: ಯುದ್ಧ ಶಮನಕ್ಕೆ ಪ್ರಧಾನಿ ಮೋದಿ ಪ್ರಯತ್ನಿಸುತ್ತಿದ್ದಾರೆ -ಶೃಂಗೇರಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ
ಮಾಜಿ ಪ್ರಧಾನಿ ದೇವೇಗೌಡ
TV9 Web
| Edited By: |

Updated on: Feb 25, 2022 | 1:50 PM

Share

ಚಿಕ್ಕಮಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ(HD Deve Gowda) ಶೃಂಗೇರಿಗೆ ಭೇಟಿ ನೀಡಿದ್ದು ಶಾರದಾಂಬೆಯ ದರ್ಶನ ಮಾಡಲಿದ್ದಾರೆ. ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಹೆಲಿಕ್ಯಾಪ್ಟರ್ ಮೂಲಕ ಶೃಂಗೇರಿಗೆ(Sringeri) ಆಗಮಿಸಿದ್ದಾರೆ. ಪುತ್ರ ರೇವಣ್ಣ, ಪುತ್ರಿ ಅನುಸೂಯ ಕೂಡ ಇವರಿಗೆ ಸಾಥ್ ನೀಡಿದ್ದಾರೆ. ಸದ್ಯ ಮೂರು ವರ್ಷದ ನಂತರ ಶೃಂಗೇರಿಗೆ ಆಗಮಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ರಷ್ಯಾ ಮತ್ತು ಉಕ್ರೇನ್(Russia And Ukraine War) ನಡುವಿನ ಯುದ್ಧದ ಬಗ್ಗೆ ಮಾತನಾಡಿದ್ದಾರೆ.

ವಿಶ್ವದ ಹಲವು ದೇಶಗಳು ಯುದ್ಧ ಬೇಡ ಎನ್ನುತ್ತಿವೆ. ಆದರೆ ರಷ್ಯಾ ಮಾತ್ರ ಯುದ್ಧ ನಿಲ್ಲಿಸಲ್ಲ ಎನ್ನುತ್ತಿದೆ. ಪುಟಿನ್, ಮೋದಿ ಮಧ್ಯೆ ಉತ್ತಮ ಬಾಂಧವ್ಯ ಇದೆ. ಯುದ್ಧ ಶಮನಕ್ಕೆ ಪ್ರಧಾನಿ ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ಶೃಂಗೇರಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ರು. ಗುರುಗಳ ದರ್ಶನ ಪಡೆದು, ಶಾರದಾಂಬೆಗೆ ನಮಸ್ಕರಿಸುತ್ತೇನೆ. ಈಶ್ವರ ದೇವಾಲಯಕ್ಕೆ ಪೂಜೆ ಸಲ್ಲಿಸಿ ನಾಳೆ ವಾಪಸ್ ಹೋಗುತ್ತೇನೆ. ಪ್ರತಿದಿನ ಪಕ್ಷ ಸಂಘಟನೆ ಕೆಲಸ ಮಾಡುತ್ತಿದ್ದೇನೆ, ಶಾರದಾಂಬೆ ದರ್ಶನ ಮಾಡಲು ಬಂದಿದ್ದೇನೆ. ಸಡನ್ನಾಗಿ 4 ದಿನದ ಹಿಂದೆ ಯುದ್ಧ ಮಾಡೋದಾಗಿ ರಷ್ಯಾದ ಅಧ್ಯಕ್ಷರು ಹೇಳಿದ್ರು. ಆಗಲೇ ಉಕ್ರೇನ್ ಮೇಲೆ ಯುದ್ಧ ಶುರುಮಾಡಿದ್ದಾರೆ. ಪ್ರಪಂಚದ ಅನೇಕ ರಾಷ್ಟ್ರಗಳು ಯುದ್ಧ ಬೇಡವೆಂದು ಹೇಳುತ್ತಿದೆ. ಆದರೆ ರಷ್ಯಾ ಮಾತ್ರ ನಾನು ನಿಲ್ಲಿಸುವುದಿಲ್ಲ ಅಂತ ಹೇಳುತ್ತಿದೆ. ಯುದ್ಧ ಶಮನ ವಾಗಬೇಕೆಂದು ನಮ್ಮ ಪ್ರಧಾನ ಮಂತ್ರಿಗಳು ಪ್ರಯತ್ನ ಮಾಡುತ್ತಿದ್ದಾರೆ. ರಷ್ಯಾದ ಪುಟಿನ್-ಮೋದಿಯವರು ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂದು ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಮಾಜಿ ಪ್ರಧಾನಿ ಪ್ರತಿಕ್ರಿಯೆ ನೀಡಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಇಂದು ನಾಳೆ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ವಾಪಾಸ್ ಆಗಲಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಕೊವಿಡ್‌ನಿಂದಾಗಿ ಹೆತ್ತವರು, ಪೋಷಕರನ್ನು ಕಳೆದುಕೊಂಡಿದ್ದು 19 ಲಕ್ಷ ಮಕ್ಕಳು

Ukraine Crisis: ರಷ್ಯಾದ ಮಿಲಿಟರಿ ಪಡೆಗಳಲ್ಲಿ 800ಕ್ಕೂ ಹೆಚ್ಚು ಸಾವು-ನೋವುಗಳಾಗಿವೆ: ಉಕ್ರೇನ್ ರಕ್ಷಣಾ ಸಚಿವಾಲಯ ಹೇಳಿಕೆ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್