AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಅನ್ನದಾತನ ಆತ್ಮಹತ್ಯೆ, ಕಳೆದ 40 ದಿನಗಳಲ್ಲಿ ಐವರು ರೈತರು ನೇಣಿಗೆ ಶರಣು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಜೋಡಿ ಲಿಂಗದಹಳ್ಳಿ ಗ್ರಾಮದ ರೈತ ಕೃಷ್ಣನಾಯ್ಕ್ (55) ಸಾಲ ಭಾದೆ ತಾಳಲಾರದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು: ಅನ್ನದಾತನ ಆತ್ಮಹತ್ಯೆ, ಕಳೆದ 40 ದಿನಗಳಲ್ಲಿ ಐವರು ರೈತರು ನೇಣಿಗೆ ಶರಣು
ಮೃತ ಕೃಷ್ಣ ನಾಯ್ಕ್
TV9 Web
| Edited By: ವಿವೇಕ ಬಿರಾದಾರ|

Updated on:Oct 09, 2023 | 9:46 AM

Share

ಚಿಕ್ಕಮಗಳೂರು ಅ.09: ಕಳೆದ ಒಂದವರೆ ವರ್ಷದಲ್ಲಿ ರಾಜ್ಯದಲ್ಲಿ 1,219 ರೈತರು (Farmers) ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷಾದನೀಯ. ಬರದಿಂದ ಬೆಳೆ ನಾಶವಾಗಿದ್ದು, ಸಾಲ ಬಾಧೆ ತಾಳಲಾರದೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರವಿವಾರ ಕಡೂರು (Kaduru) ತಾಲೂಕಿನ ತಂಗಲಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದರು. ಮತ್ತೆ ಇಂದು (ಅ.09) ಇದೇ ತಾಲೂಕಿನ ಜೋಡಿ ಲಿಂಗದಹಳ್ಳಿ ಗ್ರಾಮದ ರೈತ ಕೃಷ್ಣನಾಯ್ಕ್ (55) ಸಾಲ ಭಾದೆ ತಾಳಲಾರದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷ್ಣ ನಾಯ್ಕ್ ಅವರು 3 ಲಕ್ಷ ರೂ. ಸಾಲ ಮಾಡಿ ರಾಗಿ, ಜೋಳ ಬಿತ್ತನೆ ಮಾಡಿದ್ದರು. ಮಳೆ‌‌ ಇಲ್ಲದೆ ಬೆಳೆ‌ ನಾಶವಾದ ಹಿನ್ನೆಲೆಯಲ್ಲಿ ಮನನೊಂದು ರೈತ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 40 ದಿನಗಳಲ್ಲಿ ಕಡೂರು ತಾಲೂಕಿನಲ್ಲಿ ಐದು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಬರಗಾಲಕ್ಕೆ ಮೊದಲ ಬಲಿ, ಬೆಳೆ ನಾಶದಿಂದ ಕಂಗೆಟ್ಟ ರೈತ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಕಡೂರು ಅನ್ನು ಬರಪೀಡಿತ ತಾಲೂಕು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಬರದಿಂದ‌ ಬೆಳೆ‌ ನಾಶವಾದ ಹಿನ್ನೆಲೆ ಈಗಾಗಲೇ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಳೆ ಇಲ್ಲದೆ ತೀವ್ರ ಬರದಿಂದ ಕಡೂರು ತಾಲೂಕಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಆತ್ಮಹತ್ಯೆ ಸಹಾಯವಾಣಿ

ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821

ಗಾಂಜಾ ಮತ್ತಿನಲ್ಲಿ ಗನ್ ಹಿಡಿದು ತಿರುಗುತ್ತಿದ್ದ ಯುವಕನ ಬಂಧನ

ಗಾಂಜಾ ಮತ್ತಿನಲ್ಲಿ ಲೋಡೆಡ್​ ಗನ್ ಹಿಡಿದು ತಿರುಗುತ್ತಿದ್ದ ಯುವಕನನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಬಂಧಿಸಿದ್ದಾರೆ. ಬೀರೂರು ಮೂಲದ ಸಮೀರ್ ಬಂಧಿತ ಆರೋಪಿ. ಸಮೀರ್​​​ ಕಡೂರು ಪಟ್ಟಣದ ಎಪಿಎಂಸಿ ಮಾರುಕಟ್ಟೆ ಬಳಿ ಗನ್ ಹಿಡಿದು ಜನರಿಗೆ ಹೆದರಿಸುತ್ತಿದ್ದನು. ಪೊಲೀಸರು ಸಮೀರ್ ಬಳಿಯಿಂದ ಒಂದು‌ ಲೋಡೆಡ್ ಗನ್, 10 ಜೀವಂತ ಗುಂಡು, ಎರಡು ಚಾಕು, ಡ್ರ್ಯಾಗರ್ ಸೇರಿದಂತೆ 40 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಸಮೀರ್ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮೀರ್ ಸೆಕೆಂಡ್ ಹ್ಯಾಂಡ್ ಕಾರು ,ಬೈಕ್ ವ್ಯಾಪಾರ ಮಾಡುತ್ತಿದ್ದನು. ಈತ ಅಕ್ರಮವಾಗಿ ಗನ್ ಖರೀದಿಸಿ  ಇಟ್ಟುಕೊಂಡಿದ್ದನು. ಕಡೂರು ಪೊಲೀಸರು ಸಮೀರ್​​ನನ್ನು ತೀವ್ರ ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:27 am, Mon, 9 October 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ