ಚಿಕ್ಕಮಗಳೂರು ಅ.09: ಕಳೆದ ಒಂದವರೆ ವರ್ಷದಲ್ಲಿ ರಾಜ್ಯದಲ್ಲಿ 1,219 ರೈತರು (Farmers) ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷಾದನೀಯ. ಬರದಿಂದ ಬೆಳೆ ನಾಶವಾಗಿದ್ದು, ಸಾಲ ಬಾಧೆ ತಾಳಲಾರದೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರವಿವಾರ ಕಡೂರು (Kaduru) ತಾಲೂಕಿನ ತಂಗಲಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದರು. ಮತ್ತೆ ಇಂದು (ಅ.09) ಇದೇ ತಾಲೂಕಿನ ಜೋಡಿ ಲಿಂಗದಹಳ್ಳಿ ಗ್ರಾಮದ ರೈತ ಕೃಷ್ಣನಾಯ್ಕ್ (55) ಸಾಲ ಭಾದೆ ತಾಳಲಾರದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೃಷ್ಣ ನಾಯ್ಕ್ ಅವರು 3 ಲಕ್ಷ ರೂ. ಸಾಲ ಮಾಡಿ ರಾಗಿ, ಜೋಳ ಬಿತ್ತನೆ ಮಾಡಿದ್ದರು. ಮಳೆ ಇಲ್ಲದೆ ಬೆಳೆ ನಾಶವಾದ ಹಿನ್ನೆಲೆಯಲ್ಲಿ ಮನನೊಂದು ರೈತ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 40 ದಿನಗಳಲ್ಲಿ ಕಡೂರು ತಾಲೂಕಿನಲ್ಲಿ ಐದು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಚಿಕ್ಕಮಗಳೂರು: ಬರಗಾಲಕ್ಕೆ ಮೊದಲ ಬಲಿ, ಬೆಳೆ ನಾಶದಿಂದ ಕಂಗೆಟ್ಟ ರೈತ ಆತ್ಮಹತ್ಯೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ಅನ್ನು ಬರಪೀಡಿತ ತಾಲೂಕು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಬರದಿಂದ ಬೆಳೆ ನಾಶವಾದ ಹಿನ್ನೆಲೆ ಈಗಾಗಲೇ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಳೆ ಇಲ್ಲದೆ ತೀವ್ರ ಬರದಿಂದ ಕಡೂರು ತಾಲೂಕಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821
ಗಾಂಜಾ ಮತ್ತಿನಲ್ಲಿ ಲೋಡೆಡ್ ಗನ್ ಹಿಡಿದು ತಿರುಗುತ್ತಿದ್ದ ಯುವಕನನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಬಂಧಿಸಿದ್ದಾರೆ. ಬೀರೂರು ಮೂಲದ ಸಮೀರ್ ಬಂಧಿತ ಆರೋಪಿ. ಸಮೀರ್ ಕಡೂರು ಪಟ್ಟಣದ ಎಪಿಎಂಸಿ ಮಾರುಕಟ್ಟೆ ಬಳಿ ಗನ್ ಹಿಡಿದು ಜನರಿಗೆ ಹೆದರಿಸುತ್ತಿದ್ದನು. ಪೊಲೀಸರು ಸಮೀರ್ ಬಳಿಯಿಂದ ಒಂದು ಲೋಡೆಡ್ ಗನ್, 10 ಜೀವಂತ ಗುಂಡು, ಎರಡು ಚಾಕು, ಡ್ರ್ಯಾಗರ್ ಸೇರಿದಂತೆ 40 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಸಮೀರ್ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಮೀರ್ ಸೆಕೆಂಡ್ ಹ್ಯಾಂಡ್ ಕಾರು ,ಬೈಕ್ ವ್ಯಾಪಾರ ಮಾಡುತ್ತಿದ್ದನು. ಈತ ಅಕ್ರಮವಾಗಿ ಗನ್ ಖರೀದಿಸಿ ಇಟ್ಟುಕೊಂಡಿದ್ದನು. ಕಡೂರು ಪೊಲೀಸರು ಸಮೀರ್ನನ್ನು ತೀವ್ರ ವಿಚಾರಣೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:27 am, Mon, 9 October 23