ಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರೈತ ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಸರಿಯಾಗಿ ಮಳೆಯಾದ ಕಾರಣ ಬರಗಾಲದ ಪರಿಸ್ಥಿತಿ ನಿರ್ಮಾನವಾಗಿದೆ. ಇದರಿಂದಾಗಿ ಬೆಳೆ ನಾಶವಾಗುತ್ತಿವೆ. ಇದು ಸಾಲ ಮಾಡಿ ಕೃಷಿ ಮಾಡಿದ ರೈತರಿಗೆ ಸಂಕಷ್ಟ ತಂದಿದೆ. ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಬೇಸತ್ತ ರೈತ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೂರು ತಾಲೂಕಿನ ತಂಗಲಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರೈತ ಮಹಿಳೆ ಆತ್ಮಹತ್ಯೆ
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಚಿಕ್ಕಮಗಳೂರಿನ ರೈತ ಮಹಿಳೆ ಆತ್ಮಹತ್ಯೆ (ಸಾಂದರ್ಭಿಕ ಚಿತ್ರ)
Follow us
| Updated By: Rakesh Nayak Manchi

Updated on: Oct 07, 2023 | 8:52 AM

ಚಿಕ್ಕಮಗಳೂರು, ಅ.7: ಜಿಲ್ಲೆಯ ಕೆಲವೆಡೆ ಸರಿಯಾಗಿ ಮಳೆಯಾದ ಕಾರಣ ಬರಗಾಲದ ಪರಿಸ್ಥಿತಿ ನಿರ್ಮಾನವಾಗಿದೆ. ಇದರಿಂದಾಗಿ ಬೆಳೆ ನಾಶವಾಗುತ್ತಿವೆ. ಇದು ಸಾಲ ಮಾಡಿ ಕೃಷಿ ಮಾಡಿದ ರೈತರಿಗೆ ಸಂಕಷ್ಟ ತಂದಿದೆ. ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಬೇಸತ್ತ ರೈತ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಡೂರು (Kadur) ತಾಲೂಕಿನ ತಂಗಲಿ ಗ್ರಾಮದಲ್ಲಿ ನಡೆದಿದೆ.

ದೇವೀರಮ್ಮ (64) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ. ಕಡೂರಿನ ಗ್ರಾಮೀಣ ಕೂಟ ಫೈನಾನ್ಸ್​ 78 ಸಾವಿರ ರೂಪಾಯಿ ಸಾಲ ಪಡೆದಿದ್ದರು. ಅರ್ಥಿಕ ಸಂಕಷ್ಟದಿಂದ ಒಂದು ತಿಂಗಳಿನಿಂದ ಸಾಲದ ಕಂತನ್ನ ಮರುಪಾವತಿ ಮಾಡಿರಲಿಲ್ಲ.

ಒಂದು ತಿಂಗಳಿನಿಂದ ಪ್ರತಿ ವಾರ ಫೈನಾನ್ಸ್​ಗೆ ಸಾಲ ಮರುಪಾವತಿ ಮಾಡದ ಹಿನ್ನೆಲೆ ದೇವೀರಮ್ಮ ಅವರ ಮನೆ ಬಳಿ ಬಂದು ಕಿರುಕುಳ ನೀಡಿದ ಆರೋಪ ಫೈನಾನ್ಸ್ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ. ಉಳಿದ ಬಾಕಿ ಮೊತ್ತ ಕಟ್ಟುವಂತೆ ಒತ್ತಡ ಹೇರಿದ್ದಾರೆ.

ಇದನ್ನೂ ಓದಿ: ಜಮೀನಿಗೆ ಬಂದ ಕೇಂದ್ರ ಬರ ತಂಡದ ಅಧಿಕಾರಿಗಳ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ರೈತ

ಸಿಬ್ಬಂದಿ ಕಿರುಕುಳಕ್ಕೆ ಮನನೊಂದ ದೇವೀರಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಸಂಬಂಧ ಗ್ರಾಮಿಣ ಕೂಟ ಫೈನಾನ್ಸ್ ಸಿಬ್ಬಂದಿ ಶಂಕರ್ ನಾಯಕ್, ಉಷಾ, ರುಬೀನಾ‌ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ಅನ್ನು ಬರಪೀಡಿತ ತಾಲೂಕು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಬರದಿಂದ‌ ಬೆಳೆ‌ ನಾಶವಾದ ಹಿನ್ನೆಲೆ ಈಗಾಗಲೇ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಳೆ ಇಲ್ಲದೆ ತೀವ್ರ ಬರದಿಂದ ಕಡೂರು ತಾಲೂಕಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಆತ್ಮಹತ್ಯೆ ಸಹಾಯವಾಣಿ

ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ