ಚಿಕ್ಕಮಗಳೂರಿನಲ್ಲಿ ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರ! ಸಂತ್ರಸ್ತೆ ತಾಯಿಯಿಂದ ದೂರು ದಾಖಲು

TV9 Digital Desk

| Edited By: sandhya thejappa

Updated on:Nov 10, 2021 | 11:25 AM

ತನ್ನ ಪ್ರಿಯಕರನನ್ನು ಹುಡುಕಿಕೊಂಡು ಸಂತ್ರಸ್ತೆ ಮನೆಗೆ ಹೋಗಿದ್ದಾಳೆ. ಈ ವೇಳೆ ಕೆಲಸಕ್ಕೆ ಹೋಗಿದ್ದಾನೆ ರಾತ್ರಿ ಬರುವುದಾಗಿ ಆರೋಪಿ ಹೇಳಿದ್ದಾನೆ. ಮನೆಯಲ್ಲೇ ಮಲಗುವಂತೆ ಹೇಳಿ ಅಪ್ರಾಪ್ತೆಯನ್ನು ಉಳಿಸಿಕೊಂಡಿದ್ದಾನೆ.

ಚಿಕ್ಕಮಗಳೂರಿನಲ್ಲಿ ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರ! ಸಂತ್ರಸ್ತೆ ತಾಯಿಯಿಂದ ದೂರು ದಾಖಲು
ಪೊಲೀಸ್ ಠಾಣೆ

Follow us on

ಚಿಕ್ಕಮಗಳೂರು: ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತೆ ಪ್ರಿಯಕರನನ್ನು ಹುಡುಕಿಕೊಂಡು ಮನೆಗೆ ಹೋಗಿದ್ದಾಗ ಆತನ ತಂದೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ವಿರುದ್ಧ ಸಂತ್ರಸ್ತೆ ತಾಯಿ ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಸದ್ಯ ಬಂಧಿಸಲಾಗಿದೆ.

ತನ್ನ ಪ್ರಿಯಕರನನ್ನು ಹುಡುಕಿಕೊಂಡು ಸಂತ್ರಸ್ತೆ ಮನೆಗೆ ಹೋಗಿದ್ದಾಳೆ. ಈ ವೇಳೆ ಕೆಲಸಕ್ಕೆ ಹೋಗಿದ್ದಾನೆ ರಾತ್ರಿ ಬರುವುದಾಗಿ ಆರೋಪಿ ಹೇಳಿದ್ದಾನೆ. ಮನೆಯಲ್ಲೇ ಮಲಗುವಂತೆ ಹೇಳಿ ಅಪ್ರಾಪ್ತೆಯನ್ನು ಉಳಿಸಿಕೊಂಡಿದ್ದಾನೆ. ಆಗ ಅಪ್ರಾಪ್ತೆ ಮೇಲೆ ಪ್ರಿಯಕರನ ತಂದೆ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ.

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ ಈ ಹಿಂದೆ ಕೊಪ್ಪಳದಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬಾಲಕಿಯ ತಾಯಿ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಕ್ಟೋಬರ್​ 31ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿ ತಾಯಿ ನವೆಂಬರ್​ 2 ಕ್ಕೆ ಗಂಗಾವತಿ ನಗರ ಠಾಣೆಯಲ್ಲಿ ಸುರೇಶ್ ಅಲಿಯಾಸ್ ಸೂರಿ ವಿರುದ್ಧ ದೂರು ದಾಖಲಿಸಿದ್ದಾರೆ.  ಕಳೆದ ತಿಂಗಳು 31 ರಂದು ಒಂದು ರೂಪಾಯಿ ನೀಡಿ ಬಾಲಕಿಯನ್ನು ಆರೋಪಿ ಕರೆದೊಯ್ದಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿ ತಾಯಿ ದೂರು ನೀಡಿದ್ದಾರೆ.

ಇದನ್ನೂ ಓದಿ

ನಟ ಪುನೀತ್ ಸಾವಿನ ಘಟನೆ ಕಣ್ಮುಂದೆ ಇದ್ದರೂ ನಿರ್ಲಕ್ಷ್ಯ ತೋರಿದ ಫೋರ್ಟಿಸ್ ಆಸ್ಪತ್ರೆ! ಕಾರ್ಡಿಯಾಕ್ ಅರೆಸ್ಟ್ ರೋಗಿಗೆ ಆ್ಯಂಬುಲೆನ್ಸ್ ನೀಡಲು ನಕಾರ

Coronavirus cases in India ದೇಶದಲ್ಲಿ 11,466 ಹೊಸ ಕೊವಿಡ್ ಪ್ರಕರಣ ಪತ್ತೆ, 460 ಮಂದಿ ಸಾವು

ತಾಜಾ ಸುದ್ದಿ

Related Stories

Most Read Stories

Click on your DTH Provider to Add TV9 Kannada