AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಲಸೆ ಕಾರ್ಮಿಕರ ಮೇಲೆ ಹಲ್ಲೆ ವಿಡಿಯೋ ವೈರಲ್: ಕಾಫಿ ಎಸ್ಟೇಟ್ ಮಾಲೀಕ ವಿರುದ್ಧ ಕೇಸ್ ಬುಕ್

ಚಿಕ್ಕಮಗಳೂರಿನ ಬಸಗೂಡು ಗ್ರಾಮದಲ್ಲಿ ಕಾಫಿ ಎಸ್ಟೇಟ್ ಮಾಲೀಕ ಬಂದೂಕು ಮತ್ತು ದೊಣ್ಣೆಯಿಂದ ವಲಸೆ ಕಾರ್ಮಿಕರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು, ಉತ್ತರ ಪ್ರದೇಶ, ಬಿಹಾರವನ್ನು ಕರ್ನಾಟಕ ಮೀರಿಸುತ್ತಿದೆಯೇ ಎಂದು ಸಾಮಾಜಿಕ ಜಾಲತಾಗಣಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಇದೀಗ ಕಾಫಿ ಎಸ್ಟೇಟ್ ಮಾಲೀಕ ಸೇರಿದಂತೆ ಇಬ್ಬರ ಮೇಲೆ ಕೇಸ್ ಬುಕ್ ಆಗಿದೆ.

ವಲಸೆ ಕಾರ್ಮಿಕರ ಮೇಲೆ ಹಲ್ಲೆ ವಿಡಿಯೋ ವೈರಲ್: ಕಾಫಿ ಎಸ್ಟೇಟ್ ಮಾಲೀಕ ವಿರುದ್ಧ ಕೇಸ್ ಬುಕ್
ಕಾಫಿ ಎಸ್ಟೇಟ್ ಮಾಲೀಕ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Nov 28, 2026 | 5:09 PM

Share

ಚಿಕ್ಕಮಗಳೂರು, ನವೆಂಬರ್ 28: ಚಿಕ್ಕಮಗಳೂರಿನ ಬಸಗೂಡು ಗ್ರಾಮದಲ್ಲಿ ಕಾಫಿ ಎಸ್ಟೇಟ್ ಮಾಲೀಕ ಬಂದೂಕು ಮತ್ತು ದೊಣ್ಣೆಯಿಂದ ವಲಸೆ ಕಾರ್ಮಿಕರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು, ಇದಕ್ಕೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇದರ ಬೆನ್ನಲ್ಲೇ ಚಿಕ್ಕಮಗಳೂರಿನ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಹಲ್ಲೆ ಮಾಡಿದ ಕಾಫಿ ಎಸ್ಟೆಟ್ ಮಾಲೀಕ ಭರತ್, ಸತ್ಯಕೀರ್ತಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ನಾಪತ್ತೆಯಾಗಿರುವ ಸಹೋದರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಭರತ್ ನಿಂದ ಅನುಚಿತವಾಗಿ ವರ್ತನೆ ಪ್ರಶ್ನೆ ಮಾಡಿದ್ದಕ್ಕೆ ಗಲಾಟೆ ಮಾಡಲಾಗಿದೆ ಎಂದು ಕಾರ್ಮಿಕ ಮಹಿಳೆ ಮೀನಾ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಬಿಎನ್​ಎಸ್​ 74,75(1),118(1)115(2)352,351(3) , ಶಸ್ತ್ರಾಸ್ತ್ರ ಕಾಯ್ದೆ ಅಡಿ ಎಫ್​​ಐಆರ್ ದಾಖಲಾಗಿದೆ. ಆದ್ರೆ, ದೂರು ದಾಖಲಾಗುತ್ತಿದ್ದಂತೆಯೇ ಇಬ್ಬರು ಪರಾರಿಯಾಗಿದ್ದು, ಇವರ ಬಂಧನಕ್ಕೆ ವಿಶೇಷ ಪೊಲೀಸ್ ತಂಡವನ್ನು ರಚನೆ ಮಾಡಲಾಗಿದೆ.

ಇದನ್ನೂ ಓದಿ: ವಲಸೆ ಕಾರ್ಮಿಕರ ಮೇಲೆ ಕಾಫಿ ಎಸ್ಟೇಟ್ ಮಾಲೀಕನ ಅಟ್ಟಹಾಸ: ಮಹಿಳಾ ಕಾರ್ಮಿಕರ ಮೇಲೂ ಮನಸೋ ಇಚ್ಛೆ ಹಲ್ಲೆ

ಎಸ್ಟೇಟ್ ಮಾಲೀಕ ಭರತ್ ಎಂಬಾತ ಒಂದು ಕೈಯಲ್ಲಿ ಗನ್ ಇನ್ನೊಂದು ಕೈನಲ್ಲಿ ದೊಣ್ಣೆಯಿಂದ ದಾಳಿ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರ್ಮಿಕರು ಮತ್ತು ಮಹಿಳೆಯರನ್ನು ಜೀತದಾಳುಗಳಂತೆ ನಡೆಸಿಕೊಳ್ಳಲಾಗಿದೆ. ಮಹಿಳೆಯರು ಮತ್ತು ಮಕ್ಕಳು ಎಂದೂ ನೋಡದೆ ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಕೂಡ ದೂರಲಾಗಿದೆ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಎಸ್ಟೇಟ್ ಮಾಲೀಕನ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಕೂಡಲೇ ಈತನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಸೂಕ್ತ ಕ್ರಮವಾಗಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ಇನ್ನು ಕರ್ನಾಟಕವೇನು ಬಿಹಾರ್, ಉತ್ತರ ಪ್ರದೇಶವಾಗಿ ಬದಲಾಗುತ್ತಿದ್ದೆಯೇ? ಎಂದು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:59 pm, Sat, 28 November 26

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More