ಸಿ.ಟಿ.ರವಿಗೆ ಸ್ವಾಗತ ಕೋರಿದ್ದ 7 ಆ್ಯಂಬುಲೆನ್ಸ್​ ವಿರುದ್ಧ FIR ದಾಖಲು, ಆಗಿದ್ದೇನು?

ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸದನದಲ್ಲಿ ಆಕ್ಷೇಪಾರ್ಹ ಶಬ್ದಗಳನ್ನು ಬಳಸಿದ ಆರೋಪದಲ್ಲಿ ಸಿ.ಟಿ.ರವಿ ಜಾಮೀನನ್ನು ಪಡೆದು ಆಚೆ ಬಂದಿದ್ದು ಈಗ ಹಳೆ ಪ್ರಕರಣವಾಯ್ತು. ಈಗ ಅದೇ ಪ್ರಕರಣ ಮತ್ತೊಂದಿಷ್ಟು ಸಂಕಷ್ಟಗಳನ್ನು ತಂದಿದೆ. ಜಾಮೀನಿನ ಮೇಲೆ ಆಚೆ ಬಂದ ಸಿ.ಟಿ.ರವಿಯವರ ಸ್ವಾಗತಕ್ಕೆ ಚಿಕ್ಕಮಗಳೂರಿನಲ್ಲಿ ಕಾರ್ಯಕರ್ತರು ಅದ್ಧೂರಿ ಸ್ವಾಗತವನ್ನು ಹಮ್ಮಿಕೊಂಡಿದ್ದು ಈ ವೇಳೆ ಮಾಡಿದ ಎಡವಟ್ಟಿಗೆ ಎಫ್​ಐಆರ್ ದಾಖಲಾಗಿದೆ.

ಸಿ.ಟಿ.ರವಿಗೆ ಸ್ವಾಗತ ಕೋರಿದ್ದ 7 ಆ್ಯಂಬುಲೆನ್ಸ್​ ವಿರುದ್ಧ FIR ದಾಖಲು, ಆಗಿದ್ದೇನು?
ಸಿ.ಟಿ.ರವಿ ಸ್ವಾಗತ ಮೆರವಣಿಗೆ ವೇಳೆ ಌಂಬುಲೆನ್ಸ್​​ ಬಳಕೆ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on:Dec 22, 2024 | 7:04 PM

ಚಿಕ್ಕಮಗಳೂರು, (ಡಿಸೆಂಬರ್ 22): ಪೊಲೀಸ್‌ ಬಂಧನ, ಜಾಮೀನು ರದ್ಧಾಂತದ ಬಳಿಕ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅವರು ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿನವರೆಗೂ ದಾರಿಯುದ್ಧಕ್ಕೂ ಕಾರ್ಯಕರ್ತರು ಮೆರವಣಿಗೆ, ಪುಷ್ಪಾರ್ಚನೆ ಮಾಡಿ ಅದ್ಧೂರಿ ಸ್ವಾಗತ ಕೋರಿದ್ದಾರೆ. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಭರ್ಜರಿ ರೋಡ್ ಶೋ ಮಾಡಿದ್ದು, ಈ ವೇಳೆ ಆ್ಯಂಬುಲೆನ್ಸ್​ಗಳನ್ನು ಬಳಕೆ ಮಾಡಲಾಗಿದೆ. ಹೌದು… ಸಿ.ಟಿ.ರವಿ ಸ್ವಾಗತಕ್ಕೆ ಆ್ಬಂಬುಲೆನ್ಸ್​ಗಳು ಸೈರನ್ ಹಾಕಿಕೊಂಡು ಬಂದಿವೆ. ಈ ಸಂಬಂಧ ಇದೀಗ ಎಫ್​ಐಆರ್ ದಾಖಲಾಗಿದೆ. ಕೈಮರದಿಂದ ಸೈರನ್ ಹಾಕಿಕೊಂಡು ಬಂದಿದ್ದ 7 ಆ್ಯಂಬುಲೆನ್ಸ್ ಮೇಲೆ ಈಗ ಪ್ರಕರಣ ದಾಖಲಾಗಿದೆ.

ರೋಗಿಗಳಲ್ಲಿದೆ ಸೈರನ್ ಹಾಕಿಕೊಂಡು ಹಾಗೂ ಟಾಪ್​ನಲ್ಲಿ ಲೈಟ್ ಹಾಕಿಕೊಂಡು ಬಂದಿದ್ದ 7 ಆ್ಯಂಬ್ಯುಲೆನ್ಸ್ ಚಾಲಕ, ಮಾಲೀಕರ ವಿರುದ್ಧ ಈಗ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ಶಾಂತಿ ಭಂಗ ಆರೋಪದಡಿ ಆ್ಯಂಬುಲೆನ್ಸ್ ಮಾಲೀಕ, ಚಾಲಕರ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ.

ಬಂಧನದಿಂದ ಮುಕ್ತವಾದ ಬಳಿಕ ಸಿಟಿ ರವಿ ಅವರು ನಿನ್ನೆ(ಡಿಸೆಂಬರ್ 21) ಮಧ್ಯರಾತ್ರಿ ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು, ಅವರ ಅಭಿಮಾನಿಗಳು ಸಿ.ಟಿ ರವಿ ಅವರನ್ನು ಭರ್ಜರಿ ಸ್ವಾಗತ ಕೋರಿದ್ದರು. ರಸ್ತೆಯುದ್ದಕ್ಕೂ ಜೈಕಾರ ಹಾಕಿ ಹೂಮಳೆಗೈದಿದ್ದರು.ಇನ್ನು ಈ ಸ್ವಾಗತದ ಮೆರವಣಿಗೆಯಲ್ಲಿ 7 ಆ್ಯಂಬುಲೆನ್ಸ್​ಗಳು ಭಾಗಿಯಾಗಿದ್ದವು. ಚಿಕ್ಕಮಗಳೂರು ನಗರದ ಹಿರೇಮಗಳೂರಿನಿಂದ ಸಿ.ಟಿ ರವಿ ನಿವಾಸದ ವರೆಗೂ ಜೋರಾಗಿ ಸೈರನ್ ಹಾಕಿಹೊಂಡು ಬಂದಿದ್ದವು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿದ್ದ ಆರೋಪದ ಮೇಲೆ ಸಿಟಿ ರವಿ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ, ಹೈಕೋರ್ಟ್​ ಕೂಡಲೇ ಬಿಡುಗಡೆ ಮಾಡುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.

Published On - 6:57 pm, Sun, 22 December 24

ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು
Weekly Astrology: ಡಿಸೆಂಬರ್ 23 ರಿಂದ 29ರ ವರೆಗಿನ ರಾಶಿ ಭವಿಷ್ಯ
Weekly Astrology: ಡಿಸೆಂಬರ್ 23 ರಿಂದ 29ರ ವರೆಗಿನ ರಾಶಿ ಭವಿಷ್ಯ