Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ನಿಯಂತ್ರಣಕ್ಕೆ ಬಾರದ ಬೆಂಕಿ: ಧಗಧಗಿಸುತ್ತಿದೆ ಶೋಲಾ ಕಾಡು

ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿತಾಣಗಳು ಕಿಡಿಗೇಡಿಗಳ ಕೃತ್ಯದಿಂದ ಧಗಧಗಿಸಿ ಉರಿಯುತ್ತಿದೆ. ಕಳೆದ 24 ಗಂಟೆಗಳಿಂದ ಧಗಧಗನೇ ಹೊತ್ತಿ ಉರಿಯುತ್ತಿರುವ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಇದರಿಂದ ಪ್ರವಾಸಿಗರ ಪಾಲಿನ ಸ್ವರ್ಗದಂತಿದ್ದ ಶೋಲಾ ಅರಣ್ಯ ಭಸ್ಮವಾಗಿದೆ. ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಪಶ್ಚಿಮ ಘಟ್ಟಗಳ ಸಾಲಿನ ಅಪರೂಪದ ಸಸ್ಯ ಸಂಪತ್ತು ನಾಶವಾಗುತ್ತಿದೆ.

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ನಿಯಂತ್ರಣಕ್ಕೆ ಬಾರದ ಬೆಂಕಿ: ಧಗಧಗಿಸುತ್ತಿದೆ ಶೋಲಾ ಕಾಡು
Fire In Shola Forest
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on: Feb 18, 2025 | 11:06 PM

ಚಿಕ್ಕಮಗಳೂರು, (ಫೆಬ್ರವರಿ 18): ಬಿಸಿಲ ಝಳಕ್ಕೆ ಪ್ರಕೃತಿ ಒಣಗಿ ನಿಂತಿದ್ದಾಳೆ. ಭೂಮಿಯ ಒಡಲಿನಲ್ಲಿ ನೀರಿನ ಸೆಲೆ ಬತ್ತಿ ಹೋಗಿದ್ದು , ಸೂರ್ಯನ ಪ್ರಕರತೆಗೆ ಪ್ರಕೃತಿ ಸೌಂದರ್ಯ ಒಣಗಿದೆ. ಈ ನಡುವೆ ಕಿಡಿಗೇಡಿಗಳು ಹಚ್ಚಿದ ಬೆಂಕಿಯ ಕೆನ್ನಾಲಿಗೆಗೆ ಚಂದ್ರದ್ರೋಣ ಪರ್ವತದ ಸಾಲು ಧಗಧಗಿಸಿ ಉರಿಯುತ್ತಿದೆ. ಹೌದು.. ಚಿಕ್ಕಮಗಳೂರು ತಾಲೂಕಿನ ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಪ್ರವಾಸಿಗರ ಸ್ವರ್ಗ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಭಾಗದಲ್ಲಿ ನಿನ್ನೆ (ಫೆಬ್ರವರಿ 17) ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಇಂದು(ಫೆಬ್ರವರಿ 18) ಸಹ ಧಗಧಿಸುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುಲು ಹರಸಾಹಸಪಡುತ್ತಿದ್ದರೂ ಸಹ ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಾಗಿ ನೂರಾರು ಎಕರೆ ಪ್ರದೇಶ ಶೋಲಾ ಅರಣ್ಯದಲ್ಲಿ ಕಳೆದೊಂದು ದಿನ ದಿಂದ ಹೊತ್ತಿ ಉರಿಯುತ್ತಿದ್ದು, ಪ್ರಕೃತಿ ನಾಶವಾಗುತ್ತಿದೆ.

ನಿಯಂತ್ರಣಕ್ಕೆ ಬಾರದ ಬೆಂಕಿ

Fire destroys hundreds of acres of shola forest at chikkamagaluru western ghats News In Kannada

ನಿನ್ನೆ ಸಂಜೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಕಾಣಿಸಿಕೊಂಡ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಗಾಳಿಯ ವೇಗಕ್ಕೆ ಬೆಂಕಿ ಧಗಧಗಿಸಿ ಉರಿಯುತ್ತಿದ್ದು , ಬೆಂಕಿ ಹಿಂದಿನ ತನಿಖೆಗೆ ಇಳಿದ ಅರಣ್ಯ ಇಲಾಖೆಗೆ ಶಾಕ್ ಆಗಿದೆ. ಚಂದ್ರದ್ರೋಣ ಪರ್ವತದ ಸಾಲಿನ ಮೂರು ಭಾಗದಲ್ಲಿ ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಾಕಿರೋದು ಬೆಳಕಿಗೆ ಬಂದಿದ್ದು. ಚಿಕ್ಕಮಗಳೂರು ಅರಣ್ಯ ವಲಯ ಕಚೇರಿಯಲ್ಲಿ ಕಿಡಿಗೇಡಿಗಳ ವಿರುದ್ಧ FIR ದಾಖಲಿಸಿ ಕಿಡಿಗೇಡಿಗಳ ಬಂಧನಕ್ಕೆ ಅರಣ್ಯ ಇಲಾಖೆ ಬಲೆ ಬೀಸಿದೆ ಕಳೆದ 24 ಗಂಟೆಗಳಿಂದ ಧಗಧಗಿಸಿ ಉರಿಯುತ್ತಿರುವ ಬೆಂಕಿ‌ ನಿಯಂತ್ರಣಕ್ಕೆ ಬರುತ್ತಿಲ್ಲ. ರಾಜ್ಯದ ಎತ್ತರದ ಪ್ರದೇಶವಾಗಿರುವ ಮುಳ್ಳಯ್ಯನಗಿರಿಯಲ್ಲಿ ಗಾಳಿಯ ವೇಗ ಹೆಚ್ಚಾಗಿದ್ದು, ಗಾಳಿಯ ವೇಗಕ್ಕೆ ಬೆಂಕಿ ಆವರಿಸುತ್ತಿದೆ. ಇನ್ನೂ ಕಿರಿದಾದ ರಸ್ತೆಯಾಗಿರುವುದರಿಂದ ಅಗ್ನಿಶಾಮಕ ದಳದ ವಾಹನ ಕೂಡ ಸ್ಥಳಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ದೇಶದಲ್ಲೇ ಅಪರೂಪದ ಸಸ್ಯ ರಾಶಿ ಹೊಂದಿರುವ ಚಂದ್ರದ್ರೋಣ ಪರ್ವತ ಶ್ರೇಣಿ ಕಿಡಿಗೇಡಿಗಳ ನೀಚ ಕೃತ್ಯಕ್ಕೆ ಭಸ್ಮವಾಗುತ್ತಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ತಪ್ಪಲಿನಲ್ಲಿ ಭಾರಿ ಬೆಂಕಿ

ಅಪರೂಪದ ಸಸ್ಯ ರಾಶಿಯನ್ನ ಹೊಂದಿರುವ ಚಂದ್ರದ್ರೋಣ ಪರ್ವತದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಭಾಗದಲ್ಲಿ ಶೋಲಾ ಅರಣ್ಯ ನಾಶವಾಗುತ್ತಿರೋದು ಪ್ರಕೃತಿ ಪ್ರೇಮಿಗಳಿಗೆ ಆಕ್ರೋಶ ತರಿಸಿದೆ. ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಬರುವ ಪ್ರವಾಸಿಗರ ಮೋಜು ಮಸ್ತಿಯಿಂದಾಗಿ ಶೋಲಾ ಕಾಡಿನಲ್ಲಿ ಬೆಂಕಿ ದುರಂತಕ್ಕೆ ಕಾರಣವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಪ್ರವಾಸಿಗರು ಸೂಕ್ಷ್ಮ ಪ್ರದೇಶದಲ್ಲಿ ಸಿಗರೆಟ್ ಸೇದಿ ಎಸೆಯುವುದರಿಂದ ಪದೇಪದೇ ಬೆಂಕಿ ಬೀಳಲು ಕಾರಣವಾಗುತ್ತಿದೆ ಎಂಬ ಆರೋಪದ ಕೇಳಿ ಬಂದಿದೆ. ಈ ಹಿಂದೆ ಅರಣ್ಯ ಇಲಾಖೆ ಬೇಸಿಗೆ ಆರಂಭಕ್ಕೂ ಮುನ್ನವೇ ಫೈರ್ ಲೈನ್ ಮಾಡ್ತಿತ್ತು.ಆದರೆ, ಇತ್ತೀಚೆಗೆ ಫೈರ್ ಲೈನ್ ಮಾಡೋದನ್ನ ಬಿಟ್ಟಿದೆ.

ಒಂದುಕಡೆ ಬಿಸಿಲ ಝಳಕ್ಕೆ ಬೆಂಕಿ ಬೀಳುತ್ತಿದ್ದರೆ ಮತ್ತೊಂದೆಡೆ ಹೇರಳವಾಗಿ ಬರೋ ಪ್ರವಾಸಿಗರು ಮನಸೋ ಇಚ್ಛೆ ಮೋಜು ಮಸ್ತಿ ಮಾಡಿ. ಬೀಡಿ, ಸಿಗರೇಟ್ ಸೇದಿ ಎಲ್ಲೊಂದರಲ್ಲಿ ಎಸೆಯುತ್ತಿದ್ದರಿಂದ ಬೆಂಕಿ ಹತ್ತಿಕೊಳ್ಳುತ್ತಿದೆ. ಇದೆಲ್ಲದರ ಜೊತೆಗೆ ಹೋಂ ಸ್ಟೇಗಳಲ್ಲಿ ಫೈರ್ ಕ್ಯಾಂಪ್ ಹಾಕುತ್ತಿರುವುದರಿಂದ ಸಹ ಕಿಡಿ ಹೋಗಿ ಬೆಂಕಿ ಹೊತ್ತಿಕೊಳ್ಳುತ್ತಿದೆ ಎನ್ನಲಾಗಿದೆ. ಈ ಕಾಡ್ಗಿಚ್ಚಿನಿಂದಾಗಿ ಅರಣ್ಯದಲ್ಲಿ ಸಣ್ಣ-ಪುಟ್ಟ ಪ್ರಾಣಿ ಪಕ್ಷಿಗಳು, ಸರಿಸೃಪಗಳು ಬೆಂಕಿಗಾಹುತಿಯಾಗುತ್ತಿವೆ. ಆದರೂ ಸಹ,ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತಿದೆ.

ಒಟ್ಟಾರೆಯಾಗಿ ನಿಸರ್ಗದತ್ತವಾದ ಈ ಪ್ರಕೃತಿಯ ಸೊಬಗು-ಸೌಂದರ್ಯವನ್ನ ಸವಿಯಲು ಬಂದವರ ಬೇಜವಾಬ್ದಾರಿ ತನದಿಂದಲೇ ಅರಣ್ಯ ನಾಶದ ಜೊತೆಗೆ ಪ್ರಾಣಿ ಪಕ್ಷಿಗಳ ಮಾರಣ ಹೋಮವಾಗುತ್ತಿದೆ. ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಪಶ್ಚಿಮ ಘಟ್ಟಗಳ ಸಾಲಿನ ಅಪರೂಪದ ಸಸ್ಯ ಸಂಪತ್ತು ಸುಟ್ಟು ಭಸ್ಮವಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?
ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದಲ್ಲಿ ಮಮತಾ ಬ್ಯಾನರ್ಜಿ ಭಾಷಣದ ವೇಳೆ ಗದ್ದಲ
ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದಲ್ಲಿ ಮಮತಾ ಬ್ಯಾನರ್ಜಿ ಭಾಷಣದ ವೇಳೆ ಗದ್ದಲ