ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ; ಜನರಲ್ಲಿ ಹೆಚ್ಚಿದ ಆತಂಕ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ (Kyasanur Forest Disease) ಪ್ರಕರಣ ಹೆಚ್ಚುತ್ತಿದ್ದು, ಸೋಂಕು ಹರಡುವಿಕೆ ತಡೆಗೆ ಸದ್ಯ ರೋಗ ನಿರೋಧಕ ಲಸಿಕೆ ಇಲ್ಲ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ವಹಿಸಿಕೊಳ್ಳುವುದೊಂದೇ ದಾರಿ ಮತ್ತು ಅತೀ ಅವಶ್ಯಕ ಎನ್ನಲಾಗಿದೆ. ಈ ಮಧ್ಯೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವೃದ್ಧ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ.

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ; ಜನರಲ್ಲಿ ಹೆಚ್ಚಿದ ಆತಂಕ
ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮೊದಲ ಸಾವು
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 03, 2024 | 6:39 PM

ಚಿಕ್ಕಮಗಳೂರು, ಫೆ.03: ಪ್ರಸಕ್ತ ವರ್ಷ ಮಲೆನಾಡಿನಲ್ಲಿ ಮಂಗನ ಕಾಯಿಲೆ(Monkey Pox)ಗೆ ಮೊದಲ ಬಲಿಯಾಗಿದೆ.  ವಯೋಸಹಜ ಅನಾರೋಗ್ಯದಿಂದ ಚಿಕ್ಕಮಗಳೂರು (Chikmagalur) ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವೃದ್ಧ ಬಳಲುತ್ತಿದ್ದರು. ಇವರನ್ನು ಮಣಿಪಾಲ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಇದೀಗ ಕೊನೆಯುಸಿರೆಳೆದಿದ್ದಾರೆ. ರೆಡ್ ಝೋನ್​ನಲ್ಲಿ ತಪಾಸಣೆ ಮಾಡಿದಾಗ ವೃದ್ಧನಲ್ಲಿ ಕೆಎಫ್​ಡಿ ಪತ್ತೆಯಾಗಿದೆ. ವೃದ್ಧನ ಸಾವಿನಿಂದ ಮಲೆನಾಡಿನ ಜನರಲ್ಲಿ ಆತಂಕ ಹೆಚ್ಚಿದೆ.

ಉತ್ತರ ಕನ್ನಡದಲ್ಲೂ ಹೆಚ್ಚಿದ ಮಂಗನ ಕಾಯಿಲೆ

ಉತ್ತರ ಕನ್ನಡ ಜಿಲ್ಲೆಯಲ್ಲೂ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದೆ. ಅದಕ್ಕೆ ಸಾಕ್ಷಿ ಎಂಬಂತೆ ಕಳೆದ 10 ದಿನಗಳಲ್ಲಿ ಬರೊಬ್ಬರಿ 21 ಜನರಿಗೆ ಸೋಂಕು ತಗುಲಿದ್ದು, ಬಿಸಿಲು ಹೆಚ್ಚಾದಂತೆ ಕಾಯಿಲೆ ಹೆಚ್ಚಾಗುವ ಆತಂಕವೂ ಜನರಲ್ಲಿ ಮನೆ ಮಾಡಿದೆ. ಇನ್ನು ಈ ಸೋಂಕು ಹರಡುವಿಕೆ ತಡೆಗೆ ಸದ್ಯ ರೋಗ ನಿರೋಧಕ ಲಸಿಕೆ ಇಲ್ಲವಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ವಹಿಸಿಕೊಳ್ಳುವುದೊಂದೇ ದಾರಿ ಮತ್ತು ಅತೀ ಅವಶ್ಯಕ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗನ ಕಾಯಿಲೆಗೆ ತತ್ತರಿಸುತ್ತಿದೆ ಉತ್ತರ ಕನ್ನಡ ಜಿಲ್ಲೆ, 10 ದಿನಗಳಲ್ಲಿ 21 ಜನರಿಗೆ ಸೋಂಕು

ಹೆಚ್ಚಾದ ಮಂಗನ ಕಾಯಿಲೆಗೆ ಆರೋಗ್ಯ ಇಲಾಖೆ ಬಳಿ ಇಲ್ಲ ಲಸಿಕೆ

ಇನ್ನು ಜಿಲ್ಲೆಯಲ್ಲಿ‌ ಮಂಗನ ಕಾಯಿಲೆ ಪಸರಿಸುತ್ತಿದೆ. ಕೆಲವು ವರ್ಷಗಳಿಂದ ಮಂಗನ ಕಾಯಿಲೆ ಪತ್ತೆ ಆಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಬೇಕಿರುವ ಲಸಿಕೆ ಬಗ್ಗೆಯೂ ಇಲಾಖೆ ಯೋಚನೆ ಮಾಡದೆ ಸುಮ್ಮನಾಗಿತ್ತು. ಹೀಗಾಗಿ ಇದೀಗ ಮಂಗನ ಕಾಯಿಲೆ ರೋಗ ಪತ್ತೆಯಾಗಿದೆ. ಇದೀಗ ಜಿಲ್ಲಾಡಳಿತ ಕಾಯಿಲೆ  ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಪರದಾಡುತ್ತಿದೆ. ಅದರಲ್ಲೂ ಚಳಿಗಾಲ ಪ್ರಾರಂಭವಾಗುತ್ತಿರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿಗರಿಗೆ ಮಂಗನ ಕಾಯಿಲೆ ಆತಂಕ ಕಾಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Sat, 3 February 24

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ