Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಲ್ಲಿ ಎರಡು ಕಾಡಾನೆಗಳನ್ನು ಸೆರೆ ಹಿಡಿದ ಅರಣ್ಯ ಇಲಾಖೆ: ಮತ್ತೊಂದು ಕಾಡಾನೆ ಸೆರೆಗೆ ಬಲೆ

ಮೂರು ಕಾಡಾನೆಗಳನ್ನು ಹಿಡಿಯಲು ಸರ್ಕಾರದಿಂದ ಅನುಮತಿ ಹಿನ್ನೆಲೆ ಮತ್ತೊಂದು ಕಾಡಾನೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಕಾಫಿನಾಡಲ್ಲಿ ಎರಡು ಕಾಡಾನೆಗಳನ್ನು ಸೆರೆ ಹಿಡಿದ ಅರಣ್ಯ ಇಲಾಖೆ: ಮತ್ತೊಂದು ಕಾಡಾನೆ ಸೆರೆಗೆ ಬಲೆ
ಸೆರೆಯಾದ ಒಂದು ಕಾಡಾನೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 11, 2022 | 5:00 PM

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಯು.ಹೊಸಹಳ್ಳಿ ಗ್ರಾಮದಲ್ಲಿ ಕಾಡಾನೆ (wild elephants) ಗಳ ಕಾಟ ಹೆಚ್ಚಾಗಿದ್ದು, ಸದ್ಯ ಎರಡು ಕಾಡಾನೆಗಳನ್ನು ಅರಣ್ಯ ಇಲಾಖೆ ಸೆರೆಹಿಡಿದ್ದು, ಮತ್ತೊಂದು ಕಾಡಾನೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದೆ. ಮೂರು ಕಾಡಾನೆಗಳನ್ನು ಹಿಡಿಯಲು ಸರ್ಕಾರದಿಂದ ಅನುಮತಿ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಮತ್ತಿಗೋಡು, ದುಬಾರೆ ಶಿಬಿರದಿಂದ ಬಂದಿರುವ ಅಭಿಮನ್ಯು, ಭೀಮ, ಪ್ರಶಾಂತ, ಹರ್ಷ ಮತ್ತು ಮಹೇಂದ್ರ ಐದು ಸಾಕಾನೆಗಳ ಮೂಲಕ ಕಾಡಾನೆ ಸೆರೆಗೆ ಕಾರ್ಯಾಚರಣೆ ಭರದಿಂದ ಸಾಗಿದೆ. ಇತ್ತೀಚೆಗೆ ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಪುಂಡಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು. ಆರು ಸಾಕಾನೆಗಳೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದ ಅರಣ್ಯ ಇಲಾಖೆ, ಪುಂಡಾನೆ (ಸಲಗ)ಯನ್ನ ಖೆಡ್ಡಾಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದರು.

ಆದರೆ ಈ ಆನೆ ಜೊತೆಗಿದ್ದ ಮತ್ತೊಂದು ಆನೆ ತಪ್ಪಿಸಿಕೊಂಡು ಗಾಬರಿಯಿಂದ ಓಡಾಡಿ ಹೋಗಿರುವ ಮಾಹಿತಿಯಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಅಂತ ಅರಣ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. ಸದ್ಯ ಈ ಕಾಡಾನೆ ಸೆರೆಯಿಂದಾಗಿ ಒಟ್ಟು ಎರಡು ಪುಂಡಾನೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದಂತಾಗಿತ್ತು.

ಇದನ್ನೂ ಓದಿ: ಕಾಫಿನಾಡಿನಲ್ಲಿ ಖೆಡ್ಡಾಕ್ಕೆ ಬಿದ್ದ ಮತ್ತೊಂದು ಕಾಡಾನೆ; ಎರಡು ಪುಂಡಾನೆ ಸೆರೆಯಿಂದ ಕೊಂಚ ನಿಟ್ಟುಸಿರು ಬಿಟ್ಟ ಜನರು

5 ದಿನದ ಹಿಂದೆ ನಡೆದ ಕಾರ್ಯಾಚರಣೆಯಲ್ಲೂ ಪುಂಡಾನೆ ಸೆರೆ.!

ಮೂಡಿಗೆರೆ ತಾಲೂಕಿನ ಕುಂಡ್ರ ಗ್ರಾಮದಲ್ಲಿ 5 ದಿನದ ಹಿಂದೆಯೂ ಪುಂಡಾನೆಯೊಂದನ್ನು ಸೆರೆಹಿಡಿಯಲಾಗಿತ್ತು. ಭಾರೀ ಪುಂಡಾಡ ಮೆರೆಯುತ್ತಿದ್ದ ಸುಮಾರು 20 ವರ್ಷದ ಸಲಗವನ್ನು ಸೆರೆಹಿಡಿದು ಶಿವಮೊಗ್ಗದ ಸಕ್ರೆಬೈಲು ಸಾಕಾನೆ ಶಿಬಿರಕ್ಕೆ ಬಿಡಲಾಗಿತ್ತು. ಆ ಬಳಿಕ ಮತ್ತೆ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆಗೆ ಪುಂಡಾನೆಗಳು ಸೆರೆ ಸಿಕ್ಕಿರಲಿಲ್ಲ. ಡ್ರೋಣ್ ಬಳಸಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ ತಲೆಕೆಡಿಸಿಕೊಂಡು ಮತ್ತೆ ಹುಡುಕಾಟ ನಡೆಸುತ್ತಿದ್ದಾಗ ಮತ್ತೊಂದು ಪುಂಡಾನೆ ಇಂದು ಸೆರೆಯಾಗಿದೆ. ಉಪಟಳ ನೀಡುತ್ತಿರೋ ಮತ್ತೊಂದು ಪುಂಡಾನೆಗಾಗಿ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ಮುಂದುವರೆಸಲಿದೆ.

ದಟ್ಟಾರಣ್ಯದಲ್ಲಿ ನಡೆಯಿತು ಕಾಡಾನೆ-ಸಾಕಾನೆ ಕಾದಾಟ..!

ತಳವಾರ ಗ್ರಾಮದ ಅಂಚಿನಲ್ಲಿರೋ ಅರಣ್ಯದಲ್ಲಿ ಪುಂಡಾನೆಯನ್ನ ಅರೆವಳಿಕೆ ಮದ್ದು ನೀಡಿ ಖೆಡ್ಡಾಗೆ ಕೆಡವಲಾಯ್ತು. ಆದರೆ ಪುಂಡಾನೆ ಎಚ್ಚರಗೊಂಡಾಗ ಸಾಕಾನೆ ಜೊತೆ ಕಾದಾಟಕ್ಕೆ ಮುಂದಾಯ್ತು. ಸುಮಾರು ಒಂದು ಗಂಟೆಗಳ ಕಾಲ ಸಾಕಾನೆಗಳ ಜೊತೆಗೆ ಕಾಡಾನೆ ಕಾದಾಟ ನಡೆಸಿತು. ಕೊನೆಗೆ ಮೊದಲೇ ಕಾಡಾನೆಯ ಕಾಲುಗಳಿಗೆ ಕಟ್ಟಿದ ಹಗ್ಗದ ಮೂಲಕ ಹಿಂದೆ-ಮುಂದೆ ಸಾಕಾನೆಗಳು, ಕಾಡಾನೆಯನ್ನು ಕಾಡಿನಿಂದ ಹೊರಕ್ಕೆ ತರಲು ಹರಸಾಹಸ ಮಾಡಿದ್ದವು. ಈ ವೇಳೆ ಸೆರೆಯಾದ ಕಾಡಾನೆಯನ್ನು ನೋಡಲು ಜನರು ಬರಬೇಡಿ ಅಂತ ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದರು. ಆದರೂ ಕೂಡ ನೂರಾರು ಸಂಖ್ಯೆಯಲ್ಲಿ ಜನರು ಕಾಡಿಗೆ ದೌಡಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ