AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Forest Fire: ಕಾಡ್ಗಿಚ್ಚಿನಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ 250 ಹೆಕ್ಟರ್​​ನಷ್ಟು ಅರಣ್ಯ ಸಂಪತ್ತು ಹಾನಿ

ನರಸಿಂಹರಾಜಪುರ ತಾಲೂಕಿನ ಚಿಕ್ಕ ಅಗ್ರಹಾರ ವ್ಯಾಪ್ತಿ ಹಾಗೂ ಗಡಿಭಾಗದ ಪ್ರದೇಶ ಕುದುರೆಮುಖದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಹಾಗೆ ಚಿಕ್ಕಮಗಳೂರು ತಾಲೂಕಿನ ಗಿರಿ ಹಾಗೂ ಮೂಡಗೆರೆ ತಾಲೂಕಿನ ಚಾರ್ಮುಡಿ ಘಾಟ್​ನಲ್ಲಿ ಕಾಡ್ಗಿಚ್ಚು ಉಂಟಾಗಿದೆ.

Forest Fire: ಕಾಡ್ಗಿಚ್ಚಿನಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ 250 ಹೆಕ್ಟರ್​​ನಷ್ಟು ಅರಣ್ಯ ಸಂಪತ್ತು ಹಾನಿ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Mar 13, 2023 | 8:05 AM

Share

ಚಿಕ್ಕಮಗಳೂರು: ಕಳೆದ 30 ದಿನಗಳಲ್ಲಿ ಕಾಡ್ಗಿಚ್ಚಿನಿಂದ (Forest Fire) ಚಿಕ್ಕಮಗಳೂರಿನಲ್ಲಿ (Chikkamagaluru) 250 ಹೆಕ್ಟರ್​​ನಷ್ಟು ಅರಣ್ಯ ಸಂಪತ್ತು (Forest Property) ನಾಶವಾಗಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಟೈಮ್ಸ್​ ಆಫ್​ ಇಂಡಿಯಾ ವರದಿ ಮಾಡಿದೆ. ಭಾಗಶಃ ಕಾಡ್ಗಿಚ್ಚು ಮನಷ್ಯರಿಂದ ಸಂಭವಿಸಿದೆ ಎಂದು ವರದಿಯಾಗಿದೆ. ಅತಿ ಹೆಚ್ಚಾಗಿ ನರಸಿಂಹರಾಜಪುರ ತಾಲೂಕಿನ ಚಿಕ್ಕ ಅಗ್ರಹಾರ ವ್ಯಾಪ್ತಿ ಹಾಗೂ ಗಡಿಭಾಗದ ಪ್ರದೇಶ ಕುದುರೆಮುಖದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಹಾಗೆ ಚಿಕ್ಕಮಗಳೂರು ತಾಲೂಕಿನ ಗಿರಿ ಹಾಗೂ ಮೂಡಗೆರೆ ತಾಲೂಕಿನ ಚಾರ್ಮುಡಿ ಘಾಟ್​ನಲ್ಲಿ ಕಾಡ್ಗಿಚ್ಚು ಉಂಟಾಗಿದೆ.

ಈ ಪ್ರದೇಶಗಳು ಕಡಿದಾದ ಭೂಪ್ರದೇಶ ಮತ್ತು ಹುಲ್ಲುಗಾವಲಿನಿಂದ ಕೂಡಿರುವುದರಿಂದ ಬೆಂಕಿಯನ್ನು ನಿಯಂತ್ರಿಸುವುದು ಕಷ್ಟಕರವಾದ ಕೆಲಸವಾಗಿದೆ. ಅರಣ್ಯ ಸಿಬ್ಬಂದಿ ಕಾಡ್ಗಿಚ್ಚು ತಡೆಯಲು ನಿರಂತರ ಪ್ರಯತ್ನ ನಡೆಸುತ್ತಿದ್ದು, ಕಳೆದ ಎರಡು ದಿನಗಳಿಂದ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲ ಎಂದು ಅರಣ್ಯ ಸಂರಕ್ಷಣಾಧಿಕಾರಿ ಎಂ ಸಿ ಸಿದ್ರಾಮಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಡ್ಗಿಚ್ಚಿಗೆ ಧಗ-ಧಗ ಹೊತ್ತಿ ಉರಿದ ಅರಣ್ಯ ಇಲಾಖೆ ಸಿಬ್ಬಂದಿಯ ಮೂರು ಬೈಕ್​ಗಳು!

ಅರಣ್ಯ ಭೂಮಿ ಒತ್ತುವರಿ, ಗಿಡಗಂಟಿಗಳ ತೆರವು ಮುಂತಾದ ಮಾನವ ಚಟುವಟಿಕೆಗಳಿಂದ ಹೆಚ್ಚಿನ ಕಾಡ್ಗಿಚ್ಚು ಸಂಭವಿಸುತ್ತಿದೆ. ಅಲ್ಲದೆ, ಕೆಲವು ಕಿಡಿಗೇಡಿಗಳು ಇಲಾಖೆಯ ವಿರುದ್ಧ ಸೇಡು ತೀರಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಅರಣ್ಯಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಹರಿಯುವ 7 ನದಿಗಳಿಗೆ ಮತ್ತು ಅರಣ್ಯಕ್ಕೆ ಹೆಚ್ಚಿನ ಹಾನಿಯಾಗುತ್ತದೆ. ನೈಸರ್ಗಿಕ ಸಂಪತ್ತು ಹಾಳಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮನುಷ್ಯ-ಪ್ರಾಣಿ ಸಂಘರ್ಷ ಹೆಚ್ಚಾಗಲಿದೆ. ಜನರು ಈ ಸಮಸ್ಯೆಯ ಸೂಕ್ಷ್ಮತೆಯನ್ನು ಅರಿತು ಅರಣ್ಯಾಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಹೊತ್ತಿ ಉರಿಯುತ್ತಿರುವ ಕಾಡುಗಳು: ಫೆ.15ರಿಂದೀಚೆಗೆ 2 ಸಾವಿರಕ್ಕೂ ಅಧಿಕ ಕಾಡ್ಗಿಚ್ಚು ಪ್ರಕರಣಗಳು ದಾಖಲು

ಅರಣ್ಯ ಇಲಾಖೆಗೆ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ. ಅಗತ್ಯವಾದ ಎಲ್ಲ ಸೌಕರ್ಯಗಳನ್ನು ಒದಗಿಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದ್ದಾರೆ. ಇನ್ನು ಕಾಡ್ಗಿಚ್ಚಿಗೆ ಕಾರಣದ ಕುರಿತು ಉನ್ನತ ಮಟ್ಟದ ತನಿಖೆ ಕೈಗೊಂಡಿದ್ದೇವೆ ಕಾಡ್ಗಿಚ್ಚಿನಿಂದ ಸ್ವಲ್ಪದರಲ್ಲೇ ಪಾರಾಗಿದ್ದ ಅಧಿಕಾರಿ ಇದೀಗ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಮತ್ತೊಂದು ಘಟನೆಯಲ್ಲಿ, ಅಗ್ನಿಶಾಮಕ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಯ ಮೂರು ದ್ವಿಚಕ್ರ ವಾಹನಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:53 am, Mon, 13 March 23

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್