AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಪ್ಯಾಲೆಸ್ಟೈನ್ ಧ್ವಜ ಹಿಡಿದು ಬೈಕ್​ನಲ್ಲಿ ಓಡಾಡಿದ ನಾಲ್ವರು ಅಪ್ರಾಪ್ತರು ವಶ

ನಿನ್ನೆ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪ್ಯಾಲಿಸ್ತೀನ್ ಧ್ವಜ ಹಿಡಿದು ಕೆಲ ಮುಸ್ಲಿಂ ಯುವಕರು ಓಡಾಟ ನಡೆಸಿದ್ದರು. ಸದ್ಯ ಈಗ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ಯಾಲೆಸ್ಟೈನ್ ಧ್ವಜ ಪ್ರಕರಣವನ್ನ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ 198ಅಡಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು: ಪ್ಯಾಲೆಸ್ಟೈನ್ ಧ್ವಜ ಹಿಡಿದು ಬೈಕ್​ನಲ್ಲಿ ಓಡಾಡಿದ ನಾಲ್ವರು ಅಪ್ರಾಪ್ತರು ವಶ
ಪ್ಯಾಲೆಸ್ಟೈನ್ ಧ್ವಜ ಹಿಡಿದು ಬೈಕ್​ನಲ್ಲಿ ಓಡಾಡ; ನಾಲ್ವರು ಅಪ್ರಾಪ್ತರು ವಶ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು|

Updated on: Sep 16, 2024 | 10:33 AM

Share

ಚಿಕ್ಕಮಗಳೂರು, ಸೆ.16: ಮಂಡ್ಯ ಜಿಲ್ಲೆಯ ನಾಗಮಂಗಲದ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದೆ. ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಯುವಕರ ತಂಡವೊಂದು ಪ್ಯಾಲೆಸ್ಟೈನ್ ಧ್ವಜವನ್ನು (Palestine Flag)  ಹಿಡಿದು ಬೈಕ್​ನಲ್ಲಿ ರೌಂಡ್ಸ್ ಹಾಕಿದ್ದಾರೆ. ರೌಂಡ್ಸ್​ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸದ್ಯ ಈ ಘಟನೆ ಸಂಬಂಧ ಇದೀಗ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ನಾಲ್ವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತ ಬಾಲಕರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬಾಲಕರಿಗೆ ಪ್ಯಾಲೆಸ್ಟೈನ್ ಧ್ವಜ ಸಿಕ್ಕಿದ್ದು ಹೇಗೆ? ಧ್ವಜ‌ ನೀಡಿ ನಗರದಾದ್ಯಂತ ಓಡಾಟ ನಡೆಸಲು ಸೂಚನೆ ನೀಡಲಾಗಿತ್ತಾ? ಇಂದು ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ಟೈನ್ ಧ್ವಜ ಪ್ರದರ್ಶನಕ್ಕೆ ಪ್ಲಾನ್ ಮಾಡಲಾಗಿತ್ತಾ? ಎಂಬ ಅಂಶಗಳ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ಸ್ಪೆಕ್ಟರ್ ಗವಿರಾಜ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ಪ್ಯಾಲೆಸ್ಟೈನ್ ಧ್ವಜ ಪ್ರಕರಣವನ್ನ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ 198ಅಡಿ ಪ್ರಕರಣ ದಾಖಲಾಗಿದೆ.

ಕೋಮು ಸೂಕ್ಷ್ಮ ಚಿಕ್ಕಮಗಳೂರು ನಗರದಲ್ಲಿ ಗಲಭೆಗೆ ಸಂಚು ಎಂದು ಹಿಂದೂ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ. ಇಂದು 12 ಗಂಟೆಗೆ ಈದ್ ಮಿಲಾದ್ ಮೆರವಣಿಗೆ ಆರಂಭವಾಗಲಿದೆ. ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಲಿದೆ.

ಇದನ್ನೂ ಓದಿ: ಮಂಗಳೂರು ಭಜರಂಗದಳ, ವಿಹೆಚ್​​ಪಿಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್

ಕೊಪ್ಪಳದಲ್ಲಿ ಈದ್​ ಮಿಲಾದ್​ ಬ್ಯಾನರ್​ನಲ್ಲಿ ಫ್ರೀ ಪ್ಯಾಲೆಸ್ತೇನ್ ಬರಹ

ಕೊಪ್ಪಳ ಜಿಲ್ಲೆ ಗಂಗಾವತಿಯ ಕಿಲ್ಲಾ ಏರಿಯಾದಲ್ಲಿ ಈದ್​ ಮಿಲಾದ್​ ಹಬ್ಬ ಆಚರಣೆ ಹಿನ್ನೆಲೆ ಬ್ಯಾನರ್ ಅಳವಡಿಸಲಾಗಿತ್ತು. ಆ ಬ್ಯಾನರ್​ನ ಒಂದು ಭಾಗದಲ್ಲಿ ಫ್ರೀ ಪ್ಯಾಲೆಸ್ಟೈನ್ ಎಂದು ಬರೆಯಲಾಗಿತ್ತು. ಇದಕ್ಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಮೊದಲಿಗೆ ಫ್ರೀ ಪ್ಯಾಲೆಸ್ಟೈನ್ ಬರಹಕ್ಕೆ ಬಿಳಿ ಬಣ್ಣ ಬಳಿದು ಪ್ಯಾಚ್ ಹಾಕಿದ್ದರು. ಸದ್ಯ ಇದೀಗ ಬ್ಯಾನರ್ ಅನ್ನು ಬದಲಾಯಿಸಿ ಹೊಸ ಬ್ಯಾನರ್ ಅಳವಡಿಸಲಾಗಿದೆ. ಈದ್ ಮಿಲಾದ್ ಹಬ್ಬಕ್ಕೆ ಶುಭ ಕೋರುವ ಬ್ಯಾನರ್ ಹಾಕಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?