ಮಲೆನಾಡು ಭಾಗದಲ್ಲಿ ಗುಡ್ಡ, ಭೂ ಕುಸಿತಕ್ಕೆ ಕಾರಣವೇನು? ಆಘಾತಕಾರಿ ವರದಿ ಬಹಿರಂಗ

| Updated By: ಆಯೇಷಾ ಬಾನು

Updated on: Oct 13, 2024 | 12:01 PM

ವಯನಾಡು ದುರಂತದ ಬಳಿಕ‌ ರಾಜ್ಯದಲ್ಲಿ ಜಿಯೋಲಾಜಿಕಲ್ ಸರ್ವೇ ತಂಡದ ತನಿಖೆಗೆ ಸರ್ಕಾರ ಆದೇಶ ನೀಡಿತ್ತು. ಸದ್ಯ ಚಿಕ್ಕಮಗಳೂರು ಜಿಲ್ಲೆಯ 88 ಸ್ಥಳಗಳಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಾಗಿದೆ. ಅವೈಜ್ಞಾನಿಕ ಕಾಮಗಾರಿಗಳಿಂದ ಗುಡ್ಡ, ಭೂ ಕುಸಿತವಾಗುತ್ತಿದೆ. ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿ ಮಾಡದೆ ಅವಾಂತರ ಎಂದು ವರದಿ ನೀಡಿದೆ.

ಮಲೆನಾಡು ಭಾಗದಲ್ಲಿ ಗುಡ್ಡ, ಭೂ ಕುಸಿತಕ್ಕೆ ಕಾರಣವೇನು? ಆಘಾತಕಾರಿ ವರದಿ ಬಹಿರಂಗ
ಸಾಂದರ್ಭಿಕ ಚಿತ್ರ
Follow us on

ಚಿಕ್ಕಮಗಳೂರು, ಅ.13: ಕೇರಳದ ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ (Karnataka Government) ಮಲೆನಾಡು ಭಾಗದ ಅಪಾಯಕಾರಿ ಸ್ಥಳಗಳ ಪಟ್ಟಿ ನೀಡುವಂತೆ ಕೇಳಿತ್ತು. ಹೀಗಾಗಿ ಚಿಕ್ಕಮಗಳೂರು ಜಿಲ್ಲಾಡಳಿತ 77 ಅಪಾಯಕಾರಿ ಸ್ಥಳಗಳನ್ನು ಗುರುತು ಮಾಡಿ ವರದಿ ಕಳುಹಿಸಿತ್ತು. ಇದಾದ ಬಳಿಕ ಆಗಸ್ಟ್​ನಲ್ಲಿ ಚಂದ್ರದ್ರೋಣ ಪರ್ವತಗಳ ಸಾಲಿನ ಕವಿಕಲ್ ಗಂಡಿ, ಮುಳ್ಳಯ್ಯನಗಿರಿ ಮಾರ್ಗ, ದತ್ತಪೀಠ ಸೇರಿದಂತೆ ಅನೇಕ ಕಡೆಗಳಲ್ಲಿ ಜಿಯೋಲಾಜಿಕಲ್ ಸರ್ವೇ ಆಫ್​ ಇಂಡಿಯಾ ತಂಡ (Geological Survey Team) ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಇದೀಗ ಜಿಯೋಲಾಜಿಕಲ್ ಸರ್ವೇ ತಂಡ ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದೆ. ಹಾಗೂ ಹಲವು ನಿಯಮ, ಕಟ್ಟುಪಾಡುಗಳನ್ನು ಅನುಸರಿಸಲು ಸೂಚಿಸಿದೆ.

ಅವೈಜ್ಞಾನಿಕ ಕಾಮಗಾರಿ, ವಾಹನಗಳ ದಟ್ಟನೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತವಾಗುತ್ತಿದೆ. ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲು, ಚಾರ್ಮಾಡಿ ಘಾಟ್ ಡೇಂಜರ್ ಝೂನ್ ಆಗಿದೆ. ಹೀಗಾಗಿ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲುಗಳಲ್ಲಿ ವಾಹನ ದಟ್ಟನೆ ನಿಲ್ಲಿಸುವಂತೆ ಜಿಯೋಲಾಜಿಕಲ್ ಸರ್ವೇ ತಂಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. 80% ಅವೈಜ್ಞಾನಿಕ ಕಾಮಗಾರಿಯಿಂದಲೇ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಕುಸಿತ ಉಂಟಾಗುತ್ತಿದೆ ಎಂಬ ಅಂಶ ಪತ್ತೆಯಾಗಿದೆ. ಈ ಮೂಲಕ ಜಿಯೋಲಾಜಿಕಲ್ ಸರ್ವೇ ತಂಡದ ವರದಿಯಲ್ಲಿ ಅವೈಜ್ಞಾನಿಕ ಕಾಮಗಾರಿಗಳ ಮುಖವಾಡ ಅನಾವರಣಗೊಂಡಿದೆ.

ಇದನ್ನೂ ಓದಿ: ವೀಕೆಂಡ್ ಮಸ್ತಿಯಲ್ಲಿರುವ ಬೆಂಗಳೂರಿಗರಿಗೆ ತುಂತುರು ಮಳೆ ಚುಂಬನ; ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್

ಜಿಯೋಲಾಜಿಕಲ್ ಸರ್ವೇ ಟೀಮ್, ಚಿಕ್ಕಮಗಳೂರು ಜಿಲ್ಲೆಯ 88 ಡೇಂಜರಸ್ ಸ್ಥಳಗಳ ವರದಿ ನೀಡಿದೆ. ಪಶ್ಚಿಮ ಘಟ್ಟಗಳ ಸಾಲು ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ, ಭೂ ಕುಸಿತಕ್ಕೆ ಕಾರಣ ನೀಡಿದೆ. ವಯನಾಡು ದುರಂತದ ಬಳಿಕ‌ ರಾಜ್ಯದಲ್ಲಿ ಜಿಯೋಲಾಜಿಕಲ್ ಸರ್ವೇ ತಂಡದ ತನಿಖೆಗೆ ಸರ್ಕಾರ ಆದೇಶ ನೀಡಿತ್ತು. ಸದ್ಯ ಚಿಕ್ಕಮಗಳೂರು ಜಿಲ್ಲೆಯ 88 ಸ್ಥಳಗಳಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಾಗಿದೆ. ಅವೈಜ್ಞಾನಿಕ ಕಾಮಗಾರಿಗಳಿಂದ ಗುಡ್ಡ, ಭೂ ಕುಸಿತವಾಗುತ್ತಿದೆ. ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿ ಮಾಡದೆ ಅವಾಂತರ ಎಂದು ವರದಿ ನೀಡಿದೆ. ಅತಿಹೆಚ್ಚು ಕಾಮಗಾರಿಗಳಿಂದ ಪಶ್ಚಿಮ ಘಟ್ಟಗಳ ಸಾಲಿಗೆ ಹಾನಿಯಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್​ಗೆ ವರದಿ ಸಲ್ಲಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ