AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದಂಗಡಿಗೆ ಬಂದ ಬಾಲಕಿ ಜೊತೆ ಮಾಲೀಕ ಅಸಭ್ಯ ವರ್ತನೆ, ಸ್ಥಳೀಯರಿಂದ ಧರ್ಮದೇಟು

ಚಿಕ್ಕಮಗಳೂರಿನಲ್ಲಿ ಚಿನ್ನದಂಗಡಿಗೆ ಬಾಲಕಿ ತನ್ನ ತಾಯಿ ಜೊತೆ ಬಂದಿದ್ದಳು. ಈ ವೇಳೆ ಚಿನ್ನದ ಅಂಗಡಿ ಮಾಲೀಕ ಮಹಮ್ಮದ್ ಅಮೀರ್, ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದು ತಿಳಿಯುತ್ತಿದ್ದಂತೆ ಬಾಲಕಿಯ ತಾಯಿ ಸೇರಿದಂತೆ ಸಾರ್ವಜನಿರು ಅಮೀರ್​ಗೆ ಧರ್ಮದೇಟು ನೀಡಿದ್ದಾರೆ.

ಚಿನ್ನದಂಗಡಿಗೆ ಬಂದ ಬಾಲಕಿ ಜೊತೆ ಮಾಲೀಕ ಅಸಭ್ಯ ವರ್ತನೆ, ಸ್ಥಳೀಯರಿಂದ ಧರ್ಮದೇಟು
ಚಿನ್ನದಂಗಡಿ ಮಾಲೀಕನಿಗೆ ಥಳಿತ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು|

Updated on: Oct 17, 2023 | 10:29 AM

Share

ಚಿಕ್ಕಮಗಳೂರು, ಅ.17: ಚಿನ್ನದಂಗಡಿಗೆ (Gold Shop) ಬರುವ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಚಿನ್ನದಂಗಡಿ ಮಾಲೀಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪಾಠ ಕಲಿಸಿರುವ ಘಟನೆ ಚಿಕ್ಕಮಗಳೂರು (chikmagalur) ಜಿಲ್ಲೆಯಲ್ಲಿ ನಡೆದಿದೆ. ತರೀಕೆರೆ ಪಟ್ಟಣದ M.G ರಸ್ತೆಯಲ್ಲಿ ಚಿನ್ನದಂಗಡಿ ನಡೆಸುತ್ತಿದ್ದ ಮಹಮ್ಮದ್ ಅಮೀರ್, ತನ್ನ ಅಂಗಡಿ ಬರುವ ಮಹಿಳೆಯರ ಜೊತೆ ಕೆಟ್ಟದಾಗಿ ನಡೆದುಕೊಳ್ಳುತ್ತಿದ್ದ.

ಅಪ್ರಾಪ್ತ ವಯಸ್ಸಿನ ಬಾಲಕಿ ತನ್ನ ತಾಯಿ ಜೊತೆ ಚಿನ್ನದಂಗಡಿಗೆ ಬಂದಿದ್ದಳು. ಈ ವೇಳೆ ಚಿನ್ನದ ಅಂಗಡಿ ಮಾಲೀಕ ಮಹಮ್ಮದ್ ಅಮೀರ್, ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದು ತಿಳಿಯುತ್ತಿದ್ದಂತೆ ಬಾಲಕಿಯ ತಾಯಿ ಸೇರಿದಂತೆ ಸಾರ್ವಜನಿರು ಅಮೀರ್​ಗೆ ಧರ್ಮದೇಟು ನೀಡಿದ್ದಾರೆ. ಬಾಲಕಿಯ ತಾಯಿ ಅಮೀರ್​ಗೆ ಚಪ್ಪಲಿಯಿಂದ ಥಳಿಸಿ ಬುದ್ದಿ ಹೇಳಿದ್ದಾರೆ. ನಾಲ್ಕು ದಿನದ ಹಿಂದೆ ನಡೆದ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಅಮೀರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದಸರಾ ಹಬ್ಬದಲ್ಲಿ ಖಾಸಗಿ ಬಸ್​ಗಳಿಗೆ ಸುಗ್ಗಿ: ಆರ್​ಟಿಒ ದಾಳಿ, ಲಗೇಜ್ ಕ್ಯಾರಿಯರ್​ಗಳಲ್ಲಿ ಪ್ರಯಾಣಿಕರನ್ನ ನೋಡಿ ಶಾಕ್

ಚಿನ್ನದಂಗಡಿ ಕಳ್ಳತನಕ್ಕೆ ಯತ್ನ

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕೆ.ಜಿ ಟೆಂಪಲ್ ಬಳಿ ಗ್ಯಾಸ್ ಕಟ್ಟರ್ ಬಳಸಿ ಜುವೆಲ್ಲರಿ ಶಾಪ್​ ಕಳ್ಳತನಕ್ಕೆ ಯತ್ನ ನಡೆದಿದೆ. ಖದೀಮರು ಗ್ಯಾಸ್ ಕಟ್ಟರ್ ಬಳಸಿ ಲಕ್ಷ್ಮೀ ಜುವೆಲ್ಲರಿ ಶಾಪ್ ಬಾಗಿಲು ಮುರಿಯಲು ಯತ್ನಿಸಿದ್ದಾರೆ. ಸ್ಥಳೀಯರು ಬರುತ್ತಿದ್ದಂತೆ ಖದೀಮರು ಬೈಕ್ ಹಾಗೂ ಗ್ಯಾಸ್ ಕಟ್ಟರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದ ಎರಡು ದಿನಗಳ‌ ಹಿಂದಷ್ಟೇ ಇದೇ ರೀತಿ ಕಳ್ಳತನ ನಡೆದಿತ್ತು. ಕೆ.ಜಿ ಟೆಂಪಲ್ ಭವಾನಿ ಜುವೆಲ್ಲರಿ ಶಾಪ್ ನಲ್ಲಿ ಕಳ್ಳತನ ನಡೆದಿತ್ತು. 6 ಕೆಜಿ ಬೆಳ್ಳಿ ಆಭರಣ ದೋಚಲಾಗಿತ್ತು. ಇದೀಗ ಮತ್ತೊಂದು ಕಳ್ಳತನ ಯತ್ನ ನಡೆದಿದೆ. ಇದರಿಂದ ವ್ಯಾಪಾರಸ್ಥರು ಆತಂಕಕ್ಕೊಳಗಾಗಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?