ಚಿಕ್ಕಮಗಳೂರು: ದಕ್ಷಿಣ ಕರ್ನಾಟಕದಲ್ಲಿ (South Karnataka) ಸರ್ಕಾರಿ ಭೂಮಿ ಒತ್ತುವರಿಯಲ್ಲಿ (Government Land Encroachment) ಚಿಕ್ಕಮಗಳೂರು (Chikkamagaluru) ಜಿಲ್ಲೆ ಅಗ್ರಸ್ಥಾನದಲ್ಲಿದೆ. ಜಿಲ್ಲೆಯಾದ್ಯಂತ ಎರಡು ಲಕ್ಷ ಎಕರೆಗೂ ಹೆಚ್ಚು ಸರಕಾರಿ ಭೂಮಿ ಒತ್ತುವರಿಯಾಗಿದ್ದು, ಸಾರ್ವಜನಿಕ ಉದ್ದೇಶಕ್ಕೆ ಭೂಮಿ ಸಿಗುವುದು ಕಷ್ಟವಾಗಿದೆ ಎಂದು ಜಿಲ್ಲಾ ನೋಡಲ್ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ ಹೇಳಿದರು ಎಂದು ಖಾಸಗಿ ಸುದ್ದಿ ಸಂಸ್ಥೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಸಾಗುವಳಿ ಮಾಡಲು ಗೋಮಾಳ ಜಮೀನು ಮಂಜೂರು ಮಾಡಲು ಯಾವುದೇ ಅಧಿಕಾರಿಗಳಿಗೆ ಅಧಿಕಾರವಿಲ್ಲ, ಮಂಜೂರು ಮಾಡಿದರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. 2002ಕ್ಕಿಂತ ಮೊದಲು ಯಾರಾದರೂ ಗೋಮಾಳದ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದರೆ ಅದನ್ನು ಮಂಜೂರು ಮಾಡಬಹುದು. ಆದರೆ, ಖಾಸಗಿಯವರಿಗೆ ಗೋಮಾಳ ಭೂಮಿ ಮಂಜೂರು ಮಾಡುವಂತಿಲ್ಲ ಎಂದರು.
ಇದನ್ನೂ ಓದಿ: ಚಿಕ್ಕಮಗಳೂರು: ತಂತಿ ಉರುಳಿಗೆ ಸಿಲುಕಿ ನರಳಾಡಿದ ಮೂರು ವರ್ಷದ ಹೆಣ್ಣು ಚಿರತೆ; ಅರವಳಿಗೆ ಮದ್ದು ನೀಡಿ ರಕ್ಷಣೆ
ಜಮೀನು ಮಂಜೂರು ಮಾಡುವಾಗ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು. 50 ಎಕರೆ ಹೊಂದಿರುವವರು ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಮತ್ತು ಮಂಜೂರಾತಿಗೆ ಅರ್ಜಿ ಸಲ್ಲಿಸಿದ್ದಾರೆ. ಅತಿಕ್ರಮಣದಿಂದ ಸ್ಮಶಾನಕ್ಕಾಗಿ ಮತ್ತು ಇತರ ಸಾರ್ವಜನಿಕ ಕಾರಣಗಳಿಗಾಗಿ ಭೂಮಿಯನ್ನು ಪಡೆಯುವುದು ಕಷ್ಟಕರವಾಗಿದೆ.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಕಟಾರಿಯಾ ಮಾತನಾಡಿ, ನಿಯಮಾವಳಿ ಉಲ್ಲಂಘಿಸಿ ಅಕ್ರಮವಾಗಿ ಭೂಮಿ ಮಂಜೂರು ಮಾಡಿರುವ 48 ಪ್ರಕರಣಗಳಿದ್ದು, ಒಂಬತ್ತು ತಹಶೀಲ್ದಾರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅಧಿಕಾರಿಗಳು ತಪ್ಪಿತಸ್ಥರೆಂದು ಕಂಡುಬಂದರೆ ಅವರನ್ನು ಜೈಲಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ