Chikkamagaluru Rains: ಚಿಕ್ಕಮಗಳೂರಿನಲ್ಲಿ ವರುಣಾರ್ಭಟ, ಭೀತಿ ಸೃಷ್ಟಿಸಿದ ಗಾಳಿ ಮಳೆ
ಮುಂಗಾರು ಪೂರ್ವ ಮಳೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮವಾಗಿದ್ದು ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಳೆಯೊಂದಿಗೆ ಬಿಸುತ್ತಿರುವ ಬಿರುಗಾಳಿಗೆ ಜನ ಕಂಗಾಲಾಗಿದ್ದಾರೆ. ವೇಗವಾಗಿ ಬಿಸುತ್ತಿರುವ ಬಿರುಗಾಳಿಗೆ ಮರಗಳು ಉರಳಿ ಬೀಳುತ್ತಿದ್ದು ಜನ ಆತಂಕಗೊಂಡಿದ್ದಾರೆ.
ಚಿಕ್ಕಮಗಳೂರು, ಮೇ 11: ಕಾಫಿನಾಡು ಚಿಕ್ಕಮಗಳೂರು (Chikkamagalur) ಜಿಲ್ಲೆಯ ಮಲೆನಾಡು ಭಾಗದಲ್ಲಿ ಶನಿವಾರ ಮಧ್ಯಾಹ್ನದಿಂದ ಧಾರಾಕಾರವಾಗಿ ಮಳೆ (Rain) ಸುರಿಯುತ್ತಿದೆ. ಮಳೆಗಾಗಿ ಕಾದು ಕುಳಿತಿದ್ದ ಮಲೆನಾಡಿಗರು ಸಂತೋಷಗೊಂಡಿದ್ದಾರೆ. ಆದರೆ ಮಳೆಯೊಂದಿಗೆ ಬಿಸುತ್ತಿರುವ ಬಿರುಗಾಳಿ ಮಲೆನಾಡು ಭಾಗದ ಜನರಲ್ಲಿ ಆತಂಕ ಮೂಡಿಸಿದೆ.
ಎಲ್ಲೆಲ್ಲಿ ಮಳೆ?
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ, ಎನ್ಆರ್ ಪುರ, ಜಯಪುರ, ಕೊಪ್ಪ, ಬಾಳೆಹೊನ್ನೂರು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು ಮಲೆನಾಡು ಜನರು ಸಂತಸಗೊಂಡಿದ್ದಾರೆ. ಕಳೆದ ವರ್ಷ ವಾಡಿಕೆ ಪ್ರಮಾಣದಲ್ಲಿ ಮಳೆಯಾಗದೆ ಮಲೆನಾಡು ಭಾಗದಲ್ಲಿ ಬರದ ಆತಂಕ ಸೃಷ್ಟಿಯಾಗಿತ್ತು. ಆದರೆ ಕಳೆದ ಒಂದು ವಾರದಿಂದ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು ಮಲೆನಾಡಿಗರು ಹರ್ಷಗೊಂಡಿದ್ದಾರೆ.
ಮಳೆಗಾಲ ಆರಂಭಕ್ಕೂ ಮುನ್ನ ಮುಂಗಾರು ಪೂರ್ವ ಮಳೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮವಾಗಿದ್ದು ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಳೆಯೊಂದಿಗೆ ಬಿಸುತ್ತಿರುವ ಬಿರುಗಾಳಿಗೆ ಜನ ಕಂಗಾಲಾಗಿದ್ದಾರೆ. ವೇಗವಾಗಿ ಬಿಸುತ್ತಿರುವ ಬಿರುಗಾಳಿಗೆ ಮರಗಳು ಉರಳಿ ಬೀಳುತ್ತಿದ್ದು ಜನ ಆತಂಕಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಮುಂಗಾರು ಪೂರ್ವದಲ್ಲಿ ಈ ಪ್ರಮಾಣದಲ್ಲಿ ಗಾಳಿ ಬಿಸುತ್ತಿದ್ದು, ಕೆಲ ಭಾಗದಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ.
ಇದನ್ನೂ ಓದಿ: ವಿಜಯಪುರ, ಚಿಕ್ಕಮಗಳೂರು, ಹುಬ್ಬಳ್ಳಿ ಸೇರಿ ಕರ್ನಾಟಕದ ಹಲವೆಡೆ ಮಳೆ
ಒಟ್ಟಿನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರು ಸಂತಸಗೊಂಡಿದ್ದಾರೆ. ಕಳೆದ ವರ್ಷ ವಾಡಿಗೆ ಪ್ರಮಾಣದಲ್ಲೂ ಮಳೆಯಾಗದೆ ಮಲೆನಾಡು ಬಯಲುಸೀಮೆ ಭಾಗದ ಸ್ಥಿತಿಗೆ ತಲುಪಿತ್ತು. ಮಳೆಯ ಸಿಂಚನದಿಂದ ಮಲೆನಾಡು ಸೊಬಗು ಜೀವ ಪಡೆಯುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:59 pm, Sat, 11 May 24