Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಕಾರ ಮಳೆ; ಜನಜೀವನ ಅಸ್ತವ್ಯಸ್ತ

ಜಿಲ್ಲೆಯ ಹಲವು ತಾಲೂಕುಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಮೂಡಿಗೆರೆ, ಕಳಸ, ಕೊಪ್ಪ, N.R.ಪುರ ತಾಲೂಕಿನಲ್ಲಿ ಮುಂಜಾನೆಯಿಂದ ಭರ್ಜರಿ ಮಳೆಯಾಗುತ್ತಿದ್ದು, ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಕಾರ ಮಳೆ; ಜನಜೀವನ ಅಸ್ತವ್ಯಸ್ತ
ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 19, 2023 | 11:46 AM

ಚಿಕ್ಕಮಗಳೂರು, ಜು.19: ಜಿಲ್ಲೆಯ ಹಲವು ತಾಲೂಕುಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಮೂಡಿಗೆರೆ, ಕಳಸ, ಕೊಪ್ಪ, N.R.ಪುರ ತಾಲೂಕಿನಲ್ಲಿ ಮುಂಜಾನೆಯಿಂದ ಭರ್ಜರಿ ಮಳೆಯಾಗುತ್ತಿದ್ದು, ಸುರಿಯುತ್ತಿರುವ ಭಾರಿ ಮಳೆ(Heavy Rain)ಗೆ ಜನಜೀವನ ಅಸ್ತವ್ಯಸ್ತವಾಗಿದೆ. ಹೌದು ರಭಸವಾಗಿ ಬೀಸುತ್ತಿರುವ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ಮೂಡಿಗೆರೆ(Mudigere)ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್​ನಲ್ಲಿ ವಾಹನಗಳ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಇನ್ನು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ನಿರಂತರ ಮಳೆಗೆ ಉದ್ಘಾಟನೆಗೂ ಮುನ್ನವೇ ಕುಸಿಯುವ ಹಂತ ತಲುಪಿದ ಸೇತುವೆ

ಇನ್ನು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುಗುರಳ್ಳಿ ಗ್ರಾಮದ ಬಳಿ ಹೊಸದಾಗಿ ನಿರ್ಮಿಸಲಾಗಿದ್ದ ಸೇತುವೆ ತಡೆಗೋಡೆ ಕುಸಿಯುತ್ತಿದ್ದು, ಧಾರಾಕಾರ ಮಳೆಗೆ ರಸ್ತೆ ಬಿರುಕು ಬಿಟ್ಟಿದೆ. ಮುಗುರಳ್ಳಿ ಸೇರಿದಂತೆ ನಾಲ್ಕು ಗ್ರಾಮಗಳಿಗೆ ಈ ಸೇತುವೆ ಸಂಪರ್ಕಿಸುತ್ತದೆ. ಇದೀಗ ಸೇತುವೆ ಅವೈಜ್ಞಾನಿಕ ಕಾಮಗಾರಿಯಿಂದ ಕುಸಿಯುವ ಹಂತ ತಲುಪಿದ್ದು, ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಇನ್ನು ನಾಲ್ಕು ವರ್ಷದ ಹಿಂದೆ ಸುರಿದ ಮಳೆಗೆ ಸೇತುವೆ ಸಂಪೂರ್ಣ ಕುಸಿದಿತ್ತು. ಈ ಹಿನ್ನಲೆ ಹಳೆಯ ಸೇತುವೆ ಬಳಿ ನೂತನವಾಗಿ ಸೇತುವೆ ನಿರ್ಮಿಸಲಾಗಿತ್ತು. ಇದೀಗ ಇದು ಕೂಡ ಕುಸಿಯುವ ಭೀತಿ ಎದುರಾಗಿದೆ.

ಇದನ್ನೂ ಓದಿ:Himachal Pradesh Rain: ಹಿಮಾಚಲದಲ್ಲಿ ಭಾರಿ ಮಳೆಯ ಮುನ್ಸೂಚನೆ, ಉತ್ತರ ಭಾರತದಾದ್ಯಂತ ಇದುವರೆಗೆ 145ಕ್ಕೂ ಹೆಚ್ಚು ಮಂದಿ ಸಾವು

ಗದಗ ಜಿಲ್ಲೆಯಲ್ಲಿ ಮಲೆನಾಡಿನ ವಾತಾವರಣ; ಬೆಳ್ಳಗ್ಗೆಯಿಂದಲೇ ಜಿಟಿ ಜಿಟಿ‌ ಮಳೆ ಶುರು

ಗದಗ-ಬೆಟಗೇರಿ ಅವಳಿ ನಗರ ಸೇರಿ ಜಿಲ್ಲೆಯಲ್ಲಿ‌ ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆ ಶರುವಾಗಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಜಿಟಿ ಜಿಟಿ ಮಳೆಗೆ ಜನರು ಮನೆಯಿಂದ ಹೊರ ಬರುತ್ತಿಲ್ಲ. ಇನ್ನು ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಮಳೆ ಇಲ್ಲದೇ ಕಂಗಾಲಾದ ಅನ್ನದಾತರ‌ ಮೊಗದಲ್ಲಿ ಮಂದಹಾಸ ಮೂಡಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:41 am, Wed, 19 July 23