ಮತ್ತೆ ಸರ್ಕಾರದ ಅಂಗಳಕ್ಕೆ ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ ವಿಚಾರ

2018ರ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಪೂಜೆಗೆ ಅರ್ಚಕರನ್ನು ನೇಮಿಸಲು ಸರ್ಕಾರ ನಿರಾಕರಿಸಿ, ಮುಜಾವರ್​​ಗಳಿಂದಲೇ ಧಾರ್ಮಿಕ ವಿಧಿವಿಧಾನ ಮುಂದುವರಿಸಲು ತೀರ್ಮಾನಿಸಿತ್ತು.

ಮತ್ತೆ ಸರ್ಕಾರದ ಅಂಗಳಕ್ಕೆ ಬಾಬಾಬುಡನ್​ಗಿರಿ ದತ್ತಪೀಠ ಪೂಜಾ ವಿಧಾನ ವಿಚಾರ
ದತ್ತಪೀಠ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 28, 2021 | 3:29 PM

ಬೆಂಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಬಾಬಾಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದ ಪೂಜಾ ವಿಧಾನದ ಗೊಂದಲ ಇದೀಗ ಮತ್ತೆ ಸರ್ಕಾರಕ್ಕೆ ಅಂಗಳಕ್ಕೆ ಬಂದಿದೆ. 2018ರ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಪೂಜೆಗೆ ಅರ್ಚಕರನ್ನು ನೇಮಿಸಲು ಸರ್ಕಾರ ನಿರಾಕರಿಸಿ, ಮುಜಾವರ್​​ಗಳಿಂದಲೇ ಧಾರ್ಮಿಕ ವಿಧಿವಿಧಾನ ಮುಂದುವರಿಸಲು ತೀರ್ಮಾನಿಸಿತ್ತು.

ಪೂಜೆಗೆ ಅರ್ಚಕರನ್ನು ನೇಮಿಸಲು ಸರ್ಕಾರ ನಿರಾಕರಿಸಿ, ಮುಜಾವರ್​​ಗಳಿಂದಲೇ ಧಾರ್ಮಿಕ ವಿಧಿವಿಧಾನ ಮುಂದುವರಿಸಲು ತೀರ್ಮಾನಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಹೈಕೋರ್ಟ್​ ತಳ್ಳಿಹಾಕಿದೆ. ವಿಶೇಷ ಸಮಿತಿಯ ವರದಿಯನ್ನು ಪರಿಗಣಿಸದೆ ಪ್ರಕರಣವನ್ನು ಹೊಸದಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

2018ರಲ್ಲಿ ಸರ್ಕಾರ ಕೈಗೊಂಡಿದ್ದ ಈ ನಿರ್ಧಾರವನ್ನು ಇದೀಗ ಹೈಕೋರ್ಟ್​ ರದ್ದುಪಡಿಸಿ, ಪೂಜಾವಿಧಾನದ ಕುರಿತು ಹೊಸದಾಗಿ ತೀರ್ಮಾನಿಸಲು ಆದೇಶ ನೀಡಿದೆ. ತಜ್ಞರ ಸಮಿತಿಯ ವರದಿ ಪರಿಗಣಿಸದೇ ತೀರ್ಮಾನಿಸಲು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ. ಶ್ರೀ ಗುರು ದತ್ತಾತ್ರೇಯ ಸಂವರ್ಧನಾ ಸಮಿತಿ ಈ ಸಂಬಂಧ ನ್ಯಾಯಾಲಯಕ್ಕೆ ರಿಟ್ ಸಲ್ಲಿಸಿತ್ತು.

ಬಾಬಾಬುಡನ್​ಗಿರಿಯ ಶ್ರೀಗುರು ದತ್ತಾತ್ರೇಯ ಬಾಬಾಬುಡನ್​ ಸ್ವಾಮಿ ದರ್ಗಾಕ್ಕೆ ಹಿಂದೂ ಮತ್ತು ಮುಸ್ಲಿಮ್ ಸಮುದಾಯದ ಭಕ್ತರು ನೂರಾರು ವರ್ಷಗಳಿಂದ ನಡೆದುಕೊಳ್ಳುತ್ತಿದ್ದಾರೆ. ಈ ಪವಿತ್ರ ಸ್ಥಳದಲ್ಲಿ ಹಿಂದೂಗಳನ್ನೇ ಪೂಜಾರಿಗಳನ್ನಾಗಿ ನೇಮಿಸಬೇಕು ಎಂದು ಬಿಜೆಪಿ ಹಿಂದಿನಿಂದ ಒತ್ತಾಯಿಸುತ್ತಿತ್ತು. ಪೀಠವನ್ನು ಮುಜರಾಯಿ ಇಲಾಖೆಯೇ ನಿರ್ವಹಿಸುತ್ತಿತ್ತು.

2014ರಲ್ಲಿ ಸುಪ್ರೀಂಕೋರ್ಟ್​ ಸಹ ಮುಜರಾಯಿ ಆಯುಕ್ತರಿಗೆ ಪೂಜಾರಿ ನೇಮಕದ ಅಧಿಕಾರ ನೀಡಿತ್ತು. ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರವು ಸಂಬಂಧಿಸಿದವರೊಂದಿಗೆ ಚರ್ಚೆ ನಡೆಸಿದ ನಂತರ ಈ ವಿಚಾರ ನಿರ್ಧರಿಸುವುದಾಗಿ ತಿಳಿಸಿತ್ತು. ಆದರೆ ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರವು ಪೂಜಾರಿಗಳ ನೇಮಕಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಬಿಜೆಪಿ ಆರೋಪಿಸಿತ್ತು.

(High Court asks Karnataka Govt to Decide on Baba Budangiri Dattatreya Peetha)

ಇದನ್ನೂ ಓದಿ: ಕೂರ್ಗ್, ಚಿಕ್ಕಮಗಳೂರು ಕಾಫಿ, ಮೈಸೂರು ಸೋಪ್, ಸಿಲ್ಕ್, ಅಗರಬತ್ತಿ ಸೇರಿ ಕರ್ನಾಟಕದ 10 ವಿಶೇಷ ಅಂಚೆ ಲಕೋಟೆ ಬಿಡುಗಡೆ

ಇದನ್ನೂ ಓದಿ: ದತ್ತಪೀಠವನ್ನು ಹಿಂದೂಗಳಿಗೆ ವಹಿಸುವ ಬುದ್ಧಿ ಬಿಜೆಪಿಗೆ ಬರಲಿ: ಪ್ರಮೋದ್​ ಮುತಾಲಿಕ್

Published On - 3:13 pm, Tue, 28 September 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್