ಚಿಕ್ಕಮಗಳೂರು; ಕಾಲೇಜಿನಲ್ಲಿ ಹಿಜಾಬ್, ಬುರ್ಖಾ ಧರಿಸಿ ತರಗತಿ ಕೇಳಿದ ವಿದ್ಯಾರ್ಥಿನಿಯರು, ಕೆಲಕಾಲ ಗೊಂದಲ
ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸ್ಥಳಕ್ಕೆ ಎಎಸ್ಪಿ ಹಾಗೂ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲವು ಮಂದಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಈ ಮಧ್ಯೆ, ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತಿರುವುದನ್ನು ವಿರೋಧಿಸಿ ನಗರದಲ್ಲಿ ಶುಕ್ರವಾರ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಲು ಉದ್ದೇಶಿಸಿವೆ ಎಂದು ಮೂಲಗಳು ತಿಳಿಸಿವೆ.
ಚಿಕ್ಕಮಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೂ ಕೆಲವು ತಿಂಗಳುಗಳ ಮುನ್ನ ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಹಿಜಾಬ್ ವಿವಾದ (Hijab Controversy) ಮತ್ತೆ ಮುನ್ನೆಲೆಗೆ ಬರುವ ಸಾಧ್ಯತೆ ಗೋಚರಿಸಿದೆ. ಕಾಫಿನಾಡು ಚಿಕ್ಕಮಗಳೂರಿನ (Chikkamagalur) ಐಡಿಎಸ್ಜಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಬುರ್ಖಾ, ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತಿರುವ ವಿಡಿಯೋ ವೈರಲ್ ಆಗಿದೆ. ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ತರಗತಿಯಲ್ಲಿ ಪಾಠ ಕೇಳುತ್ತಿರುವುದು ಮತ್ತು ಕಾಲೇಜು ಕಾರಿಡಾರ್ನಲ್ಲಿ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸ್ಥಳಕ್ಕೆ ಎಎಸ್ಪಿ ಹಾಗೂ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲವು ಮಂದಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಈ ಮಧ್ಯೆ, ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತಿರುವುದನ್ನು ವಿರೋಧಿಸಿ ನಗರದಲ್ಲಿ ಶುಕ್ರವಾರ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಲು ಉದ್ದೇಶಿಸಿವೆ ಎಂದು ಮೂಲಗಳು ತಿಳಿಸಿವೆ.
ಉಡುಪಿಯಲ್ಲಿ ಆರಂಭವಾಗಿದ್ದ ಹಿಜಾಬ್ ವಿವಾದ
ಉಡುಪಿ ಜಿಲ್ಲೆಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ ಪ್ರವೇಶಿಸಿದ್ದು ಈ ವರ್ಷಾರಂಭದಲ್ಲಿ ವಿವಾದಕ್ಕೆ ಗುರಿಯಾಗಿತ್ತು. ಇದರ ಬೆನ್ನಲ್ಲೇ ಹಿಂದೂ ವಿದ್ಯಾರ್ಥಿಗಳು ಕೇಸರಿನ ಶಾಲ ಧರಿಸಿ ಕಾಲೇಜಿಗೆ ಬಂದಿದ್ದರು. ನಂತರ ವಿವಾದ ರಾಜಕೀಯ ಸ್ವರೂಪ ಪಡೆದುಕೊಂಡಿತ್ತು. ಆನಂತರ ಕೋರ್ಟ್ ಮೆಟ್ಟಿಲೇರಿತ್ತು.
ಇದನ್ನೂ ಓದಿ: ರಾಜ್ಯದಲ್ಲೇ ಅತಿ ಹೆಚ್ಚು ಸರ್ಕಾರಿ ಭೂಮಿ ಕಬಳಿಕೆ ಚಿಕ್ಕಮಗಳೂರಿನಲ್ಲಿ! 15 ತಹಶಿಲ್ದಾರ್ಗಳ ನೇತೃತ್ವದಲ್ಲಿ ತನಿಖೆ ಆರಂಭ
ಈ ಎಲ್ಲ ವಿದ್ಯಮಾನಗಳ ಬೆನ್ನಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿ ಮೇಲ್ವಿಚಾರಣಾ ಸಮಿತಿ ನಿರ್ಧರಿಸುವ ಸಮವಸ್ತ್ರ ಧರಿಸಬೇಕು ಎಂದು ಸರ್ಕಾರ ಆದೇಶಿಸಿತ್ತು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:21 pm, Thu, 10 August 23