ಚಿಕ್ಕಮಗಳೂರು: ಮತ್ತೆ ಗುಡ್ಡ ಕುಸಿತ, ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್

ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಜಲಾಶಯಗಳೆಲ್ಲ ತುಂಬಿ ಹರಿಯುತ್ತಿದ್ದು ನೀರು ಗ್ರಾಮಗಳಿಗೆ ನುಗ್ಗಿ ಪ್ರವಾಹವಾಗುತ್ತಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಭಾಗದ ಹಲವೆಡೆ ಗುಡ್ಡ ಕುಸಿಯುತ್ತಿದ್ದು ಸಂಚಾರ ಮಾರ್ಗ ಬಂದ್ ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿದಿದ್ದು ರಸ್ತೆ ಬಂದ್ ಮಾಡಲಾಗಿದೆ.

ಚಿಕ್ಕಮಗಳೂರು: ಮತ್ತೆ ಗುಡ್ಡ ಕುಸಿತ, ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್
ಚಾರ್ಮಾಡಿ ಘಾಟ್
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು

Updated on: Jul 30, 2024 | 9:09 AM

ಚಿಕ್ಕಮಗಳೂರು, ಜುಲೈ.30: ವಾಹನ ಸವಾರರಿಗೆ ಥ್ರಿಲ್ ನೀಡುವ ಚಾರ್ಮಾಡಿ ಘಾಟ್​ನಲ್ಲಿ (Charmadi Ghat) ಪ್ರತಿ ವರ್ಷವೂ ಮಳೆಯಾದಾಗ ಗುಡ್ಡ ಕುಸಿತ ಆಗುತ್ತಲೇ ಇರುತ್ತದೆ. ಇದೀಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.

ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಕೊಟ್ಟಿಗೆಹಾರ, ಬೆಳ್ತಂಗಡಿ ಬಳಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಚಾರ್ಮಾಡಿ ಘಾಟಿಗೆ ತೆರಳದಂತೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದೆ. ಕಿರಿದಾದ ಅಪಾಯಕಾರಿ ರಸ್ತೆಯಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿದೆ.

ಭದ್ರಾ ಆರ್ಭಟಕ್ಕೆ ಸೇತುವೆ ಸಂಪೂರ್ಣ ಮುಳುಗಡೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಬಾಳೆಹೊನ್ನೂರು-ಕಳಸ‌ ಸಂಪರ್ಕಿಸುವ ಮಹಲ್ಗೋಡು ಸೇತುವೆ ಮುಳುಗಿದೆ. ಭದ್ರಾ ಆರ್ಭಟಕ್ಕೆ ಸೇತುವೆ ಸಂಪೂರ್ಣ ಮುಳುಗಿದೆ. ಮಾಗುಂಡಿ ಗ್ರಾಮ ದ್ವೀಪದಂತಾಗಿದೆ. ಮಾಗುಂಡಿಯಿಂದ ಹುಯಿಗೆರೆ, ಬಿಕ್ಕರಣೆ, ಮಣಬೂರು, ಸಾರಗೋಡು, ಕರಗಣೆ ಸಂಪರ್ಕ ಬಂದ್ ಆಗಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಬೆಂಗಳೂರಿನಿಂದ ಮಡಗಾಂವ್​, ಕಾರವಾರಕ್ಕೆ ವಿಶೇಷ ರೈಲು

ಹಟ್ಟಿಹಾಡಿ ರಾಜ್ಯ ಹೆದ್ದಾರಿಯಲ್ಲಿ ಕುಸಿಯುತ್ತಿರುವ ಬೃಹತ್ ಗುಡ್ಡ

ಇನ್ನು ಮತ್ತೊಂದೆಡೆ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹಟ್ಟಿಹಾಡಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗುಡ್ಡ ಕುಸಿಯುತ್ತಿದೆ. ಗುಡ್ಡ ಕುಸಿತ ಹಿನ್ನೆಲೆ ಮನೆ ತೊರೆಯಲು ನಿವಾಸಿಗಳಿಗೆ ಮಾದಾಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

70ಕ್ಕೂ ಹೆಚ್ಚು ಮನೆಗಳು ಮುಳುಗಡೆ

ಮಹಾರಾಷ್ಟ್ರದ ಮಹಾಮಳೆಗೆ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ, ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಪರಿಣಾಮ ಮಿರ್ಜಿ ಗ್ರಾಮದ 70ಕ್ಕೂ ಹೆಚ್ಚು ಮನೆಗಳೂ ಜಲಾವೃತವಾಗಿವೆ. ಇಡೀ ಗ್ರಾಮವೇ ಕೆರೆಯಂತಾಗಿ ಬದಲಾಗಿದ್ದು, ಕೆರೆಯಂತಾದ ನೀರಿನಲ್ಲೇ ಜನ ಜೀವ ಕೈಯಲ್ಲಿಡಿದು ಬದುಕು ಸಾಗಿಸುತ್ತಿದ್ದಾರೆ.

ಪ್ರತಿ ಬಾರಿ ಮಳೆ ಬಂದಾಗಲೂ ಈ ಗ್ರಾಮಸ್ಥರಿಗೆ ಇದೇ ಗೋಳು. ತಮ್ಮ ಕಷ್ಟ ನೆನೆದು ಗ್ರಾಮಸ್ಥರು ಕಣ್ಣೀರಾಕುತ್ತಿದ್ದು, ನಮ್ಮ ಕಷ್ಟ ಯಾರಿಗೂ ಬೇಡ ಅಂತಿದ್ದಾರೆ. ನಾವು ಮತ್ತೊಬ್ಬರಿಗೆ ಅನ್ನ ನೀಡುವ ರೈತರು. ಅನ್ನ ನೀಡುವ ರೈತರೇ ಕಾಳಜಿ ಕೇಂದ್ರದಲ್ಲಿ ತುತ್ತು ಅನ್ನಕ್ಕಾಗಿ ಮತ್ತೊಬ್ಬರ ಬಳಿ ಕೈಚಾಚುವಂತಾಗಿದೆ. ಹೀಗೆ ಬಕುವುದಕ್ಕಿಂತ ಜೀವನವೇ ಸಾಕು ಸಾಕಾಗಿ ಹೋಗಿದೆ ಅಂತಾ ರೈತ ಮಹಿಳೆ ಕಣ್ಣೀರಿಟ್ಟಿದ್ದಾರೆ. ಅಲ್ಲದೆ, ಈ ಊರಿನ ಸಹವಾಸವೇ ಬೇಡ, ಈ ಊರು ಬಿಟ್ಟು ಹೋಗಿಬಿಡಬೇಕೆಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಕಲೇಶಪುರ ಬಳಿ ಗುಡ್ಡ ಕುಸಿತ

ಹಾಸನ ಜಿಲ್ಲೆ ಸಕಲೇಶಪುರದ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ ತೆರವು ಕಾರ್ಯಾಚರಣೆ ನಿನ್ನೆಯೂ ಮುಂದುವರಿಯಿತು. ಬಾರಿ ಮಳೆಯ ನಡುವೆಯೂ 400ಕ್ಕೂ ಹೆಚ್ಚು ಕಾರ್ಮಿಕರಿಂದ ಕಾರ್ಯಾಚರಣೆ ನಡೆಯುತ್ತಿದ್ದು, 15 ದಿನಗಳ ಕಾಲ ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗ ಬಂದ್ ಮಾಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ