AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಮತ ಎಣಿಕೆಯ ವಿಡಿಯೋ ಲಭ್ಯವಿಲ್ಲ ಎಂದ ಚುನಾವಣಾ ಆಯೋಗವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ದಾಖಲೆಗಳನ್ನು ಎಷ್ಟು ಕಾಲ ಸಂರಕ್ಷಿಸಲಾಗುತ್ತದೆ, ವಿಡಿಯೋ ರೆಕಾರ್ಡಿಂಗ್ ಅನ್ನು ಯಾವಾಗ ಅಳಿಸಲಾಯಿತು, ಅದಕ್ಕೆ ಯಾರು ಅನುಮತಿ ನೀಡಿದರು ಹಾಗೂ ಬ್ಯಾಕಪ್ ಪ್ರತಿ ಇದೆಯೇ ಎಂಬುದನ್ನು ವಿವರಿಸಿ ಎರಡು ವಾರಗಳೊಳಗೆ ಹೊಸ ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ
ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ Image Credit source: PTI
ಪ್ರಸನ್ನ ಹೆಗಡೆ
|

Updated on: Oct 15, 2026 | 9:30 AM

Share

ನವದೆಹಲಿ/ಶೃಂಗೇರಿ, ಅಕ್ಟೋಬರ್​​ 15: ಕರ್ನಾಟಕದ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ 2023ರ ಚುನಾವಣೆಯ ಮತ ಎಣಿಕೆಯ ವಿಡಿಯೋ ರೆಕಾರ್ಡಿಂಗ್ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿರುವ ಭಾರತೀಯ ಚುನಾವಣಾ ಆಯೋಗವನ್ನು (ECI) ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಚುನಾವಣಾ ದಾಖಲೆಗಳನ್ನು ಸಂರಕ್ಷಿಸುವುದು ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗದ ಕರ್ತವ್ಯ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಹೇಳಿದೆ. ಈ ಕ್ಷೇತ್ರದಲ್ಲಿ ಗೆಲುವಿನ ಅಂತರ ಕೇವಲ 201 ಮತಗಳಾಗಿತ್ತು ಎಂಬುದಿಲ್ಲಿ ಗಮನಾರ್ಹ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವ್‌ರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ವ್‌ರಾಜ್ ಅವರು 201 ಮತಗಳ ಅಂತರದಿಂದ ಸೋತಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮಗಳು ನಡೆದಿವೆ ಮತ್ತು ಮತ ಎಣಿಕೆಯ ವಿಡಿಯೋಗ್ರಫಿ ಸಮರ್ಪಕವಾಗಿ ನಡೆದಿಲ್ಲ ಎಂದು ಅವರು ಆರೋಪಿಸಿದ್ದ. ಮತ ಎಣಿಕೆ ಕೇಂದ್ರದ ವಿಡಿಯೋ ರೆಕಾರ್ಡಿಂಗ್ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕೋರಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಶೃಂಗೇರಿ ಅಂಚೆ ಮತ ವಿವಾದ: ಮರಳಿ ಶಾಸಕ ಸ್ಥಾನ ದೊರೆತಿರುವುದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್

‘ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಹೇಗೆ ಹೇಳುತ್ತೀರಿ?’

ಶೃಂಗೇರಿ ಕ್ಷೇತ್ರದ ಮತ ಎಣಿಕೆಯ ವಿಡಿಯೋ ರೆಕಾರ್ಡಿಂಗ್ ಎರಡು ವರ್ಷಗಳಿಗೂ ಹೆಚ್ಚು ಕಾಲ ಕಳೆದಿರುವುದರಿಂದ ಪತ್ತೆಯಾಗುತ್ತಿಲ್ಲ ಮತ್ತು ಅದರ ಮೇಲೆ ಹೊಸ ದಾಖಲೆಗಳನ್ನು ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ಅಫಿಡವಿಟ್ ಸಲ್ಲಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಹೇಗೆ ಹೇಳುತ್ತೀರಿ? ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗ ನೀವು ಅದನ್ನು ಸಂರಕ್ಷಿಸಬೇಕಿತ್ತು ಎಂದಿದೆ. ಚುನಾವಣಾ ಅರ್ಜಿಗಳ ಇತ್ಯರ್ಥವಾಗುವವರೆಗೆ ಮತ ಎಣಿಕೆಯ ವಿಡಿಯೋಗಳನ್ನು ಸಂರಕ್ಷಿಸಬೇಕು ಎಂದು ಚುನಾವಣಾ ಆಯೋಗದ ಸೂಚನೆಗಳಲ್ಲೇ ಉಲ್ಲೇಖಿಸಲಾಗಿದೆ ಎಂಬುದನ್ನೂ ನ್ಯಾಯಾಲಯ ಗಮನಿಸಿದೆ.

ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂಕೋರ್ಟ್​​ ಸೂಚನೆ

ಚುನಾವಣಾ ಆಯೋಗದ ಈ ಹೇಳಿಕೆಯು ಪಾರದರ್ಶಕತೆಯ ಬಗ್ಗೆ ಗಂಭೀರ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ. ಒಟ್ಟು 1,247 ಅಂಚೆ ಮತಗಳಿದ್ದು, 201 ಮತಗಳ ಅಲ್ಪ ಗೆಲುವಿನ ಅಂತರದ ಮೇಲೆ ಅಕ್ರಮಗಳು ಪರಿಣಾಮ ಬೀರಿರುವ ಸಾಧ್ಯತೆಯಿದೆ ಎಂದು ಅರ್ಜಿದಾರರು ವಾದಿಸಿದ್ದರು. ಮತ ಎಣಿಕೆಯ ಸಂಪೂರ್ಣ ದಾಖಲೆಗಳು, ಸಿಸಿಟಿವಿ ದೃಶ್ಯಾವಳಿಗಳು, ನಮೂನೆ 20 (Form 20) ಮತ್ತು ಅಂಚೆ ಮತಗಳ ಲೆಕ್ಕಪತ್ರಗಳನ್ನು ಸಲ್ಲಿಸುವಂತೆ ಅವರು ಕೋರಿದ್ದರು. ಈ ಹಿನ್ನೆಲೆಯಲ್ಲಿ, ದಾಖಲೆಗಳನ್ನು ಎಷ್ಟು ಕಾಲ ಸಂರಕ್ಷಿಸಲಾಗುತ್ತದೆ, ವಿಡಿಯೋ ರೆಕಾರ್ಡಿಂಗ್ ಅನ್ನು ಯಾವಾಗ ಅಳಿಸಲಾಯಿತು, ಅದಕ್ಕೆ ಯಾರು ಅನುಮತಿ ನೀಡಿದರು ಹಾಗೂ ಬ್ಯಾಕಪ್ ಪ್ರತಿ ಇದೆಯೇ ಎಂಬುದನ್ನು ವಿವರಿಸಿ ಎರಡು ವಾರಗಳೊಳಗೆ ಹೊಸ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಚುನಾವಣಾ ಅರ್ಜಿ ಸಲ್ಲಿಕೆಯಾದ ಬಳಿಕ ದಾಖಲೆಗಳನ್ನು ಸಂರಕ್ಷಿಸಲು ಕೈಗೊಂಡ ಕ್ರಮಗಳ ಕುರಿತು ವಿವರವಾದ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೂ ನ್ಯಾಯಪೀಠ ಸೂಚಿಸಿದೆ.

ದಾಖಲೆಗಳ ಸಂರಕ್ಷಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಎರಡು ವಾರಗಳ ಬಳಿಕ ನಡೆಸಲು ನಿಗದಿಪಡಿಸಲಾಗಿದೆ. ಶೃಂಗೇರಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ಕರ್ನಾಟಕ ಹೈಕೋರ್ಟ್‌ನಲ್ಲಿ ಬಾಕಿ ಇದ್ದು, ದಾಖಲೆಗಳ ಸಂರಕ್ಷಣೆಯ ವಿಚಾರವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡುತ್ತಿದೆ ಎಂದು ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಅಗ್ನಿ ಪರೀಕ್ಷೆಗೆ 18 ಕಿಲೋಮೀಟರ್ ನಡೆದುಕೊಂಡು ಹೋಗಿದ್ದೆ: ಕಷ್ಟ ನೆನೆದ ಮಂಜ
ಅಗ್ನಿ ಪರೀಕ್ಷೆಗೆ 18 ಕಿಲೋಮೀಟರ್ ನಡೆದುಕೊಂಡು ಹೋಗಿದ್ದೆ: ಕಷ್ಟ ನೆನೆದ ಮಂಜ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ