AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರಿದ ಮಾನವ-ವನ್ಯಜೀವಿ ಸಂಘರ್ಷ: ಹಾಸನ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲೂ ಕಾಡಾನೆ ದಾಳಿಗೆ ರೈತ ಬಲಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಎನ್.ಆರ್.ಪುರ ತಾಲ್ಲೂಕಿನ ಹೆನ್ನಂಗಿ ಗ್ರಾಮದಲ್ಲಿ ರೈತ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಮತ್ತೊಂದೆಡೆ ಚಿಕ್ಕಮಗಳೂರು ನಗರದ ಸುತ್ತಮುತ್ತಲ ಗ್ರಾಮಗಳಲ್ಲಿ ಒಂಟಿ ಸಲಗ ಸಂಚರಿಸುತ್ತಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗ್ರಾಮಸ್ಥರು ಆತಂಕಗೊಂಡಿದ್ದು, ಆನೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ಮುಂದುವರಿದ ಮಾನವ-ವನ್ಯಜೀವಿ ಸಂಘರ್ಷ: ಹಾಸನ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲೂ ಕಾಡಾನೆ ದಾಳಿಗೆ ರೈತ ಬಲಿ
ಕಾಡಾನೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Nov 18, 2026 | 7:17 PM

Share

ಮುಖ್ಯಾಂಶಗಳು

  • ರಾಜ್ಯದಲ್ಲಿ ಮುಂದುವರಿದ ಕಾಡಾನೆಗಳ ದಾಳಿ ಪ್ರಕರಣ
  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ರೈತ ಬಲಿ
  • ಚಿಕ್ಕಮಗಳೂರು ನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಂಟಿ‌ ಸಲಗ ಓಡಾಟ

ಚಿಕ್ಕಮಗಳೂರು, ನವೆಂಬರ್​​ 18: ರಾಜ್ಯದಲ್ಲಿ ಕಾಡಾನೆ ದಾಳಿ ಪ್ರಕರಣಗಳು ಮುಂದುವರಿದಿವೆ. ಇತ್ತೀಚೆಗೆ ಹಾಸನ ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಜನಾಕ್ರೋಶ ವ್ಯಕ್ತವಾಗಿತ್ತು. ಬಳಿಕ ಕಾಡಾನೆಗಳನ್ನ ಸೆರೆ ಹಿಡಿಯಲು ಸ್ಥಳಾಂತರಕ್ಕೆ ಆದೇಶಿಸಲಾಗಿತ್ತು. ಇದೀಗ ಇತ್ತ ಚಿಕ್ಕಮಗಳೂರು ಜಿಲ್ಲೆಯ N.R.ಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಓರ್ವ ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ.

ತೋಟದಿಂದ ಬರುವಾಗ ಏಕಾಏಕಿ ದಾಳಿ ಮಾಡಿದ ಕಾಡಾನೆ 

ಕಾಡಾನೆ ದಾಳಿಗೆ ಕೃಷ್ಣಮೂರ್ತಿ(45) ಸಾವನ್ನಪ್ಪಿದ್ದಾರೆ. ರೈತ ಕೃಷ್ಣಮೂರ್ತಿ ತೋಟದಿಂದ ಮನೆಗೆ ಬರುತ್ತಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ದಾಳಿ ಮಾಡಿದೆ. ದಾಳಿಯ ತೀವ್ರತೆಗೆ ಕೃಷ್ಣಮೂರ್ತಿ ಮೃತಪಟ್ಟಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ಮಾಡಿದ್ದಾರೆ.

ಚಿಕ್ಕಮಗಳೂರು ನಗರ ಸುತ್ತಮುತ್ತ ಒಂಟಿ ಸಲಗ ಸಂಚಾರ

ಇನ್ನೊಂದೆಡೆ, ಚಿಕ್ಕಮಗಳೂರು ನಗರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಒಂಟಿ ಸಲಗದ ಓಡಾಟದಿಂದ ಜನರಲ್ಲಿ ಆತಂಕ ಮನೆಮಾಡಿದೆ. ಬೇಲೂರು ಮಾರ್ಗವಾಗಿ ಬಂದಿರುವ ಕಾಡಾನೆ ಸದ್ಯ ಮತ್ತಾವರ ಗ್ರಾಮದ ಬಳಿ ಸಂಚರಿಸುತ್ತಿವೆ. ಮತ್ತಾವರ, ಇಂದಾವರ, ಆಲದಗುಡ್ಡೆ, ದಂಬದಹಳ್ಳಿ, ಬಾಚಿಗನಹಳ್ಳಿ, ದಿಣ್ಣೆಕೆರೆ ಹಾಗೂ ನೆಲ್ಲೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಓಡಾಟ ನಡೆಸಿದೆ. ನಗರ ಪ್ರದೇಶದ ಸುತ್ತಮುತ್ತಲಿನ ಗ್ರಾಮಗಳಲ್ಲೇ ಕಾಡಾನೆ ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.

LIVE TV

ಕಾಡಾನೆ ಸೆರೆಹಿಡಿಯಲು ಗ್ರಾಮಸ್ಥರ ಒತ್ತಾಯ

ಮಂಗಳವಾರ ಇಂದಾವರ ಗ್ರಾಮದ ಮನೆಯೊಂದರ ಬಳಿ ಒಂಟಿ ಸಲಗ ಕಾಣಿಸಿಕೊಂಡಿತ್ತು. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಸದ್ಯ ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿ ಕಾಡಾನೆ ಸಂಚರಿಸುತ್ತಿದ್ದು, ಅದನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಆನೆ ದಾಳಿಗೆ ಹಾಸನದಲ್ಲಿ ಸರಣಿ ಬಲಿ ಬಳಿಕ ಎಚ್ಚೆತ್ತ ಸರ್ಕಾರ: 10 ಸಲಗಗಳ ಸೆರೆ ಹಿಡಿದು ಸ್ಥಳಾಂತರಕ್ಕೆ ಆದೇಶ

ಒಂದೆಡೆ ಎನ್.ಆರ್.ಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿಯಾಗಿದ್ದರೆ, ಮತ್ತೊಂದೆಡೆ ಚಿಕ್ಕಮಗಳೂರು ನಗರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಓಡಾಟ ಜನರಲ್ಲಿ ಭೀತಿ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
‘ಆಯುಷ್’ ಸಿನಿಮಾ ವಿವಾದ, ಸಂಧಾನ ಸಭೆ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು
‘ಆಯುಷ್’ ಸಿನಿಮಾ ವಿವಾದ, ಸಂಧಾನ ಸಭೆ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು
ಬಾಳಾಸಾಹೇಬ್ ಠಾಕ್ರೆ ಫೋಟೋ ಹರಿದ ಶಿವಸೇನೆ ನಾಯಕಿ; ಭುಗಿಲೆದ್ದ ವಿವಾದ
ಬಾಳಾಸಾಹೇಬ್ ಠಾಕ್ರೆ ಫೋಟೋ ಹರಿದ ಶಿವಸೇನೆ ನಾಯಕಿ; ಭುಗಿಲೆದ್ದ ವಿವಾದ
ತಾವೇ ಖುದ್ದಾಗಿ ತೆರಳಿ ಟ್ರಂಪ್​ಗೆ ಅದ್ದೂರಿ ಸ್ವಾಗತ ಕೋರಿದ ಚೀನಾ ಅಧ್ಯಕ್ಷ
ತಾವೇ ಖುದ್ದಾಗಿ ತೆರಳಿ ಟ್ರಂಪ್​ಗೆ ಅದ್ದೂರಿ ಸ್ವಾಗತ ಕೋರಿದ ಚೀನಾ ಅಧ್ಯಕ್ಷ
ಜಕ್ಕೂರು-ಯಲಹಂಕ ಜನರ ಕನಸು ನನಸು: ಜಕ್ಕೂರು ಫ್ಲೈಓವರ್ ಉದ್ಘಾಟಿಸಿದ ಸಿಎಂ
ಜಕ್ಕೂರು-ಯಲಹಂಕ ಜನರ ಕನಸು ನನಸು: ಜಕ್ಕೂರು ಫ್ಲೈಓವರ್ ಉದ್ಘಾಟಿಸಿದ ಸಿಎಂ
ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿಯಲ್ಲಿ ಕಬ್ಬು ಬೆಳೆಗಾರರಿಗೆ ಬಂಪರ್
ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿಯಲ್ಲಿ ಕಬ್ಬು ಬೆಳೆಗಾರರಿಗೆ ಬಂಪರ್
ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ, ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಶಾ
ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ, ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಶಾ
"ಬಿಜೆಪಿ ಸರ್ಕಾರವಿದ್ದಾಗಲೇ ಪರಿಹಾರ ಕೊಡದವರು ಈಗ ಕೊಡ್ತಾರಾ?"
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್