ನಾನು ಕೊತ್ವಾಲ್ ರಾಮಚಂದ್ರ​​, ಜಯರಾಜ್​ನ ಶಿಷ್ಯನಲ್ಲ; ಕಾಂಗ್ರೆಸ್​​ ಟ್ವೀಟ್​ಗೆ ಸಿ.ಟಿ.ರವಿ ತಿರುಗೇಟು

ಇತ್ತೀಚೆಗೆ ಸಿ.ಟಿ.ರವಿ ಮಾಜಿ ರೌಡಿಶೀಟರ್​​ ಎಂದು ಕೂಡ ಕಾಂಗ್ರೆಸ್​ ಟ್ವೀಟ್​​ ಮಾಡಿತ್ತು. ಸದ್ಯ ಈ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.

ನಾನು ಕೊತ್ವಾಲ್ ರಾಮಚಂದ್ರ​​, ಜಯರಾಜ್​ನ ಶಿಷ್ಯನಲ್ಲ; ಕಾಂಗ್ರೆಸ್​​ ಟ್ವೀಟ್​ಗೆ ಸಿ.ಟಿ.ರವಿ ತಿರುಗೇಟು
ಬಿಜೆಪಿ ನಾಯಕ ಸಿ.ಟಿ.ರವಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 05, 2022 | 3:55 PM

ಚಿಕ್ಕಮಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಅನೇಕರು ಸೇರ್ಪಡೆಗೊಳ್ಳುತ್ತಿದ್ದಾರೆ. ಅದರಲ್ಲಿಯೂ ರೌಡಿಶೀಟರ್ (Rowdysheeter) ​ಗಳು ಬಿಜೆಪಿ ಸೇರುತ್ತಿದ್ದಾರೆ ಎಂದು ಕಾಂಗ್ರೆಸ್​​ ಬಿಜೆಪಿ ವಿರುದ್ಧ ಲೇವಡಿ ಮಾಡಿದೆ. ಇತ್ತೀಚೆಗೆ ಸಿ.ಟಿ.ರವಿ ಮಾಜಿ ರೌಡಿಶೀಟರ್​​ ಎಂದು ಕೂಡ ಕಾಂಗ್ರೆಸ್​ ಟ್ವೀಟ್​​ ಮಾಡಿತ್ತು. ಸದ್ಯ ಈ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ರಾಜಕೀಯ ಕಾರಣಕ್ಕಾಗಿ ನನ್ನ ಮೇಲೆ ರೌಡಿಶೀಟರ್​ ಹಾಕಲಾಗಿತ್ತು. ನಾನು ಯಾವುದೇ ಗೂಂಡಾಗಿರಿ ಮಾಡಿರಲಿಲ್ಲ. ನನ್ನ ಮೇಲೆ ಇರುವುದೆಲ್ಲಾ ಸಾರ್ವಜನಿಕ ಹೋರಾಟದ ಕೇಸ್​ಗಳು. ನಾನು ಕೊತ್ವಾಲ್ ರಾಮಚಂದ್ರ​​, ಜಯರಾಜ್​ನ ಶಿಷ್ಯನಲ್ಲ. ನಾನು ಅವರ ಶಿಷ್ಯ ಎಂದು ಹೇಳಿ ಹೆಮ್ಮೆಪಡುವ ರಾಜಕೀಯ ನೇತಾರನೂ ನಾನಲ್ಲ ಎಂದು ಸಿ.ಟಿ.ರವಿ ಕಾಂಗ್ರೆಸ್​ ಟ್ವೀಟ್ ವಿಚಾರಕ್ಕೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​​ ಅಧ್ಯಕ್ಷ ಡಿಕೆ ಶಿವಕುಮಾರ್ ​ರೌಡಿ ಕೊತ್ವಾಲ್ ರಾಮಚಂದ್ರನ ಶಿಷ್ಯ: ರೇಣುಕಾಚಾರ್ಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಗರಡಿಯಲ್ಲಿ ಬೆಳೆದವನು ನಾನು

ಎಲ್ಲಾ ರೌಡಿಶೀಟರ್​ಗಳು ರೌಡಿಗಳಲ್ಲ ಅಂತಾ ಹೇಳಿದ್ದೆ. ರೌಡಿಶೀಟರ್​​ನಲ್ಲಿರೋ ಎಲ್ಲರಿಗೂ ಕ್ಲೀನ್ ಚಿಟ್ ನಾನು ಕೊಟ್ಟಿಲ್ಲ. ನಿಮ್ಮ ಪಕ್ಷದ ಆರ್.ವಿ ದೇವರಾಜ್, ಹರಿಪ್ರಸಾದ್ ಬಗ್ಗೆ ಕಾಂಗ್ರೆಸ್ ಅವಲೋಕನ ಮಾಡಿಕೊಳ್ಳಲಿ ಎಂದು ಕಿಡಿಕಾರಿದರು. ಈ ಹಿಂದೆ ನನ್ನನ್ನು ಕುಡುಕ ಅಂತಾ ಹೇಳಿದ್ರು. ಕುಡಿದು, ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ ಒಂದು ಉದಾಹರಣೆ ಇದ್ಯಾ ಎಂದು ಪ್ರಶ್ನಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಗರಡಿಯಲ್ಲಿ ಬೆಳೆದವನು ನಾನು. ಇದು ಕಾಂಗ್ರೆಸ್​ನ ಮನಸ್ಥಿತಿಯನ್ನ ತೋರಿಸುತ್ತೆ. ಬೆಳಗ್ಗೆ 5 ಗಂಟೆಯಿಂದ ರಾತ್ರಿ 11ಗಂಟೆ ತನಕ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ರೌಡಿ ಮೋರ್ಚಾ ಸೇರಲು ಬೇಡಿಕೆ ಹೆಚ್ಚುತ್ತಿದೆಯಂತೆ! ಬಿಜೆಪಿ ವಿರುದ್ಧ ಟ್ವೀಟ್ ದಾಳಿ ಮುಂದುವರೆಸಿದ ಕಾಂಗ್ರೆಸ್

ಬಿಜೆಪಿ ಹಿಂದಿನ ಎಲ್ಲಾ ದಾಖಲೆ ಧೂಳೀಪಟ ಮಾಡಿ ಅಧಿಕಾರಕ್ಕೆ ಬರುತ್ತೆ

ಗುಜರಾತ್​ನಲ್ಲಿ ಮತ್ತೆ ಬಿಜೆಪಿ ಅಧಿಕಾರ ಹಿಡಿಯಲಿದೆ. ಹಿಂದಿನ ಎಲ್ಲಾ ದಾಖಲೆ ಧೂಳೀಪಟ ಮಾಡಿ ಅಧಿಕಾರಕ್ಕೆ ಬರುತ್ತೆ. ಹಿಂದಿನ ಚುನಾವಣೆಯಲ್ಲಿ ಗೆದ್ದ ಸ್ಥಾನಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲಿದೆ. ಹೆಸರು, ಕೆಲಸದ ಆಧಾರದಲ್ಲಿ ಜನ ಬಿಜೆಪಿಗೆ ವೋಟ್ ಹಾಕುತ್ತಾರೆ. ಮೋದಿ, ಗುಜರಾತ್ ಸರ್ಕಾರದ ಸಾಧನೆಗೆ ಜನ ವೋಟ್ ಹಾಕ್ತಾರೆ. ಫಲಿತಾಂಶದಿಂದ ರಾವಣ ಯಾರು, ರಾಮ ಯಾರೆಂದು ಗೊತ್ತಾಗುತ್ತೆ. ರಾಮ ಮತ್ತೆ ಗೆದ್ದು ಬರ್ತಾನೆ, ರಾವಣ ಶಕ್ತಿಗಳು ನಾಶವಾಗುತ್ತದೆ. ರಾಮನನ್ನು ಹಿಂಬಾಲಿಸುವ ಪಕ್ಷ ಚುನಾವಣೆಯಲ್ಲಿ ಮತ್ತೆ ಗೆದ್ದು ಬರುತ್ತೆ. ಮಲ್ಲಿಕಾರ್ಜುನ ಖರ್ಗೆಗೆ ಚಿಂತೆ ಬೇಡ, ರಾವಣನ ನಾಶ ಶತಸಿದ್ಧ ಎಂದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲ ಇಲ್ಲಿ ಕ್ಲಿಕ್ ಮಾಡಿ.

ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್