Chikkamagaluru: ಕುಡಿದ ಮತ್ತಿನಲ್ಲಿ ಯುವಕರ ಪುಂಡಾಟ; ಸರ್ಕಾರಿ ಬಸ್ಸಿನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ
ಎಣ್ಣೆ ಮತ್ತಿನಲ್ಲಿ ಯುವಕರ ಪುಂಡಾಟ ಮೆರೆದಿದ್ದು, ಕೆಎಸ್ಆರ್ಟಿಸಿ(KSRTC) ಬಸ್ಸಿನ ಗ್ಲಾಸ್ ಒಡೆದು, ಬಸ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಡೂರು ತಾಲೂಕಿನ ಬೀರೂರು ಸಮೀಪದ ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದೆ.
ಚಿಕ್ಕಮಗಳೂರು: ಎಣ್ಣೆ ಮತ್ತಿನಲ್ಲಿ ಯುವಕರ ಪುಂಡಾಟ ಮೆರೆದಿದ್ದು, ಕೆಎಸ್ಆರ್ಟಿಸಿ(KSRTC) ಬಸ್ಸಿನ ಗ್ಲಾಸ್ ಒಡೆದು, ಬಸ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಡೂರು(Kaduru) ತಾಲೂಕಿನ ಬೀರೂರು ಸಮೀಪದ ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದೆ. ನಿನ್ನೆ(ಜು.7) ಸಂಜೆ ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿನಿಂದ ಗಾಜಿನ ಮದ್ಯದ ಬಾಟಲಿಯನ್ನ ಎಸೆದಿದ್ದಾರೆ. ಇದು ಬಸ್ಸಿನ ಮುಂಭಾಗದ ಗ್ಲಾಸಿಗೆ ತಗುಲಿ ಗಾಜು ಪುಡಿಯಾಗಿದೆ. ಈ ವೇಳೆ ಕಡೂರು KSRTC ವಿಭಾಗದ ಚಾಲಕ ಸತೀಶ್, ಕಾರಿನಲ್ಲಿದ್ದವರನ್ನ ಪ್ರಶ್ನೆ ಮಾಡಿದ್ದಾರೆ. ಇಷ್ಟಕ್ಕೇ ಕೋಪಗೊಂಡ ಯುವಕರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ.
ನಾಲ್ವರು ಪುಂಡರ ವಿರುದ್ಧ ಪ್ರಕರಣ ದಾಖಲು
ಇನ್ನು ಘಟನೆ ವೇಳೆ ನಾಲ್ವರು ಮಧ್ಯ ಸೇವಿಸಿದ್ದು, ಅದರ ಅಮಲಿನಲ್ಲಿದ್ದ ಪುಂಡರು ಬಸ್ಸಿನ ಗ್ಲಾಸ್ ಒಡೆಯುವುದರ ಜೊತೆಗೆ ಪ್ರಶ್ನೆ ಮಾಡಿದ ಕೆಎಸ್ಆರ್ಟಿಸಿ ಬಸ್ ಚಾಲಕನ ಮೇಲೂ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಚಾಲಕನನ್ನ ಬೀರೂರು ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಚಲಿಸುತ್ತಿದ್ದ ಬಸ್ಸಿನ ಮೇಲೆ ಗಾಜಿನ ಬಾಟಲಿ ಎಸೆದ ನಾಲ್ವರ ವಿರುದ್ದ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ ಕಿರಣ್, ಸತೀಶ್, ಸಚಿನ್, ಸುಪ್ರೀತ್ ಎಂಬುವವರನ್ನ ಬಂಧಿಸಲಾಗಿದೆ. ಇನ್ನು ಹಲ್ಲೆ ಮಾಡುತ್ತಿರುವ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಪುಂಡರ ಅಟ್ಟಹಾಸ; ಬಿಬಿಎಂಪಿ ಕಸದ ಆಟೋ ಚಾಲಕನ ಮೇಲೆ ಮನಸೋ ಇಚ್ಚೆ ಥಳಿಸಿ ಹಲ್ಲೆ
ಮೂರು ದಿನದಿಂದ ನಿರಂತರ ಮಳೆ; ಮನೆಯ ಮುಂದೆ ನಿರ್ಮಿಸಿದ್ದ ತಡೆಗೋಡೆ ಕುಸಿತ
ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮೂರು ದಿನದಿಂದ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ, ಇಂದು ಕೊಂಚ ಬಿಡುವು ನೀಡಿದೆ. ಆದರೆ, ಅವಾಂತರಗಳು ಮುಂದುವರಿದೆ. ಹೌದು ಕೊಪ್ಪ ತಾಲೂಕಿನ ಹೊಸಮನೆ ಕೆಸವೆ ಗ್ರಾಮದಲ್ಲಿ ಮನೆಯ ಮುಂದೆ ನಿರ್ಮಿಸಿದ್ದ ತಡೆಗೋಡೆ ನಿರಂತರ ಮಳೆಗೆ ಕುಸಿದಿರುವ ಘಟನೆ ನಡೆದಿದೆ.
ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ