AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ಅಯ್ಯನಕೆರೆಯಲ್ಲಿ ವೃದ್ಧೆಯ ಶವ ಪತ್ತೆ, ವಿಜಯಪುರ ಕಡಣಿ ಗ್ರಾಮದಲ್ಲಿ ಯುವ ರೈತ ಆತ್ಮಹತ್ಯೆ

ಆಲಮೇಲ ಕಡಣಿ ರಸ್ತೆಯಲ್ಲಿರುವ ಜಮೀನಿನಲ್ಲಿನ ಮರಕ್ಕೆ ಪುಂಡಲಿಂಗ ಜೀರಟಗಿ (22) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿದ್ದ ಬೆಳೆ ಹಾಳಾಗಿದ್ದು, ಜಮೀನಿನ‌ ಲೀಸ್ ಹಣ ಕೊಡಲಾಗದೆ ಯುವ ರೈತ ನೇಣಿಗೆ ಶರಣಾಗಿದ್ದಾರೆ.

ಚಿಕ್ಕಮಗಳೂರು ಅಯ್ಯನಕೆರೆಯಲ್ಲಿ ವೃದ್ಧೆಯ ಶವ ಪತ್ತೆ, ವಿಜಯಪುರ ಕಡಣಿ ಗ್ರಾಮದಲ್ಲಿ ಯುವ ರೈತ ಆತ್ಮಹತ್ಯೆ
ಚಿಕ್ಕಮಗಳೂರಿನ ವೃದ್ಧೆ ಮತ್ತು ವಿಜಯಪುರದ ಪುಂಡಲಿಂಗ ಜೀರಟಗಿ
preethi shettigar
| Updated By: ಸಾಧು ಶ್ರೀನಾಥ್​|

Updated on: Feb 13, 2021 | 12:13 PM

Share

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಅಯ್ಯನಕೆರೆಯಲ್ಲಿ 60 ವರ್ಷದ ಅಪರಿಚಿತ ವೃದ್ಧೆಯ ಶವ ಪತ್ತೆಯಾಗಿದ್ದು, ಈ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಮಾರು 55 ರಿಂದ 60 ವಯಸ್ಸಿನ ವೃದ್ಧೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಇದು ಮೇಲುನೋಟಕ್ಕೆ ಆತ್ಮಹತ್ಯೆಯಂತೆ ಕಾಣುತ್ತಿದೆ ಎಂದು ಮೂಲಗಳು ತಿಳಿಸಿವೆ. ಕಡೂರಿನಿಂದ ಸಖರಾಯಪಟ್ಟಣಕ್ಕೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ವೃದ್ಧೆ ಬಂದಿದ್ದಾರೆ ಎಂದು ಪರ್ಸ್​ನಲ್ಲಿ ಸಿಕ್ಕಿರುವ ಟಿಕೆಟ್​ನಿಂದ ತಿಳಿದುಬಂದಿದೆ.

ವಿಜಯಪುರ ಜಿಲ್ಲೆಯಲ್ಲಿ ಯುವ ರೈತ ಆತ್ಮಹತ್ಯೆ: ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಡಣಿ ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಪ್ರಕರಣ ಅಲಮೇಲ‌‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಆಲಮೇಲ ಕಡಣಿ ರಸ್ತೆಯಲ್ಲಿರುವ ಜಮೀನಿನಲ್ಲಿನ ಮರಕ್ಕೆ ಪುಂಡಲಿಂಗ ಜೀರಟಗಿ (22) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿದ್ದ ಬೆಳೆ ಹಾಳಾಗಿದ್ದು, ಜಮೀನಿನ‌ ಲೀಸ್ ಹಣ ಕೊಡಲಾಗದೆ ಹಾಗೂ‌ ಖಾಸಗಿಯಾಗಿ ಮಾಡಿದ ಸಾಲ‌ ಮರು ಪಾವತಿ ಮಾಡಲಾರದೆ ನೇಣಿಗೆ ಪುಂಡಲಿಂಗ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: DySP Lakshmi Suicide Case.. 50 ದಿನ ಕಳೆದ್ರೂ ಪತ್ತೆಯಾಗಿಲ್ಲ ಲಕ್ಷ್ಮೀ ಬಳಸ್ತಿದ್ದ ಮೊಬೈಲ್

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್