ಕಾರ್ಮಿಕನನ್ನ ಕೊಂದಿದ್ದ ಕಾಡಾನೆ ಅನುಮಾನಾಸ್ಪದವಾಗಿ ಸಾವು; ತನಿಖೆಗೆ ಪರಿಸರವಾದಿಗಳ ಆಗ್ರಹ

ಚಿಕ್ಕಮಗಳೂರು ತಾಲೂಕಿನ ಕೆರೆಹಕ್ಲು ಗ್ರಾಮದಲ್ಲಿ ಕಾರ್ಮಿಕನನ್ನ ಕೊಂದಿದ್ದ ಕಾಡಾನೆ(wild elephant) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ವಾರದ ಹಿಂದೆ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿದ್ದ. ಇದಾದ ಬಳಿಕ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದರು. ಇದರ ಬೆನ್ನಲ್ಲೇ ಕಾಡಾನೆ ಅನುಮಾನಾಸ್ಪದವಾಗಿ ಮೃತಪಟ್ಟಿದೆ.

ಕಾರ್ಮಿಕನನ್ನ ಕೊಂದಿದ್ದ ಕಾಡಾನೆ ಅನುಮಾನಾಸ್ಪದವಾಗಿ ಸಾವು; ತನಿಖೆಗೆ ಪರಿಸರವಾದಿಗಳ ಆಗ್ರಹ
ಕಾಡಾನೆ ಸಾವು
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:May 12, 2024 | 9:48 PM

ಚಿಕ್ಕಮಗಳೂರು, ಮೇ.12: ಕಾರ್ಮಿಕನನ್ನ ಕೊಂದಿದ್ದ ಕಾಡಾನೆ(wild elephant) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು(chikkamagaluru) ತಾಲೂಕಿನ ಕೆರೆಹಕ್ಲು ಗ್ರಾಮದಲ್ಲಿ ನಡೆದಿದೆ.  35 ವರ್ಷದ ಕಾಡಾನೆ ಇದಾಗಿದ್ದು, ಮೃತಪಟ್ಟ ಸ್ಥಳದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಅದನ್ನೇ ತುಳಿದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಾರದ ಹಿಂದೆ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿದ್ದ. ಇದಾದ ಬಳಿಕ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದರು. ಇದರ ಬೆನ್ನಲ್ಲೇ ಕಾಡಾನೆ ಅನುಮಾನಾಸ್ಪದವಾಗಿ ಮೃತಪಟ್ಟಿದೆ. ಈ ಹಿನ್ನಲೆ ಕಾಡಾನೆ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಲು ಪರಿಸರವಾದಿಗಳು ಆಗ್ರಹಿಸಿದ್ದಾರೆ.

ಕಳೆದ ಮಾರ್ಚ್​​ 25 ರಂದು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಓರ್ವ ಕಾರ್ಮಿಕ ಮೃತಪಟ್ಟಿದ್ದ. ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮದ ಟಿಂಬರ್ ಕಾರ್ಮಿಕ ಅಕ್ಬರ್(35) ಮೃತ ವ್ಯಕ್ತಿ. ತೋಟದಲ್ಲಿ ಆನೆ ಓಡಿಸುವಾಗ ಏಕಾಏಕಿ ಆನೆ ನುಗ್ಗಿ ಬಂದಿದೆ. ಈ ವೇಳೆ ನೆಲಕ್ಕೆ ಬಿದ್ದ ಅಕ್ಬರ್ ಮೇಲೆ ಕಾಡಾನೆ ಕಾಲಿಟ್ಟು ಕೊಂದಿದೆ. ಈ ಹಿನ್ನಲೆ ರೊಚ್ಚಿಗೆದ್ದಿದ್ದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುವ ಭಕ್ತರೇ ಎಚ್ಚರ, ಕಾಡಾನೆ ದಾಳಿಗೆ ಮಹಿಳೆ ಸಾವು

ಮಳೆ, ಗಾಳಿಗೆ ನೆಲಕ್ಕೆ ಬಾಗಿದ ನೂರಾರು ಎಕರೆ ಬಾಳೆ ಬೆಳೆ

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಬೇರೆ ಬೇರೆ ಭಾಗದಲ್ಲಿ ಬಿರುಗಾಳಿ ಸಹಿತ ಭರ್ಜರಿ ಮಳೆಯಾಗಿದ್ದು, ಹೊಸೂರು, ಮಾಗಾಣಿ, ನಾಗೇನಹಳ್ಳಿ, ಚಿತ್ತವಾಡ್ಗಿ, ಹಾನಗಲ್, ಇಪ್ಪತೇರಿ, ಕರೆಕಲ್, ನರಸಾಪುರ ಸೇರಿದಂತೆ ಹಲವೆಡೆ ನೂರಾರು ಎಕರೆ ಬಾಳೆ ಬೆಳೆಗಳು ನಾಶವಾಗಿದ್ದು, ಲಕ್ಷಾಂತರ ಮೌಲ್ಯದ ಬೆಳೆ ಹಾನಿಯಾಗಿದೆ. ಈ ಹಿನ್ನೆಲೆ ರೈತರು ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 pm, Sun, 12 May 24

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು