AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಪಾಲು!

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ಭದ್ರಾ ನದಿಯಲ್ಲಿ ಬೆಂಗಳೂರಿನ ಐಟಿ ಉದ್ಯೋಗಿ ಅಭಿಷೇಕ್ ಮುಳುಗಿ ಸಾವನ್ನಪ್ಪಿದ್ದಾರೆ. ಸ್ನೇಹಿತನ ಮದುವೆಗೆ ಬಂದಿದ್ದ ಅವರು, ಈಜಲು ತೆರಳಿದಾಗ ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ. ಹಲವು ಗಂಟೆಗಳ ಶೋಧದ ನಂತರ ಮೃತದೇಹ ಪತ್ತೆಯಾಗಿದ್ದು, ಮದುವೆ ಸಂಭ್ರಮದಲ್ಲಿದ್ದ ಕುಟುಂಬ ಮತ್ತು ಸ್ನೇಹಿತರಲ್ಲಿ ತೀವ್ರ ಶೋಕ ಆವರಿಸಿದೆ. ಬಾಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಪಾಲು!
ಅಭಿಷೇಕ್ (27)Image Credit source: Tv9 kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Apr 06, 2026 | 10:38 AM

Share

ಚಿಕ್ಕಮಗಳೂರು, ಏ.6: ಜಿಲ್ಲೆಯ ನರಸಿಂಹರಾಜಪುರ (ಎನ್.ಆರ್.ಪುರ) ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (27) ಎಂದು ಗುರುತಿಸಲಾಗಿದೆ.

ಅಭಿಷೇಕ್ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಸ್ನೇಹಿತರ ಜತೆ ಸೇರಿ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು. ಸ್ನೇಹಿತರೊಂದಿಗೆ ಸ್ಥಳೀಯ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಇವರು, ಇಂದು ಬೆಳಿಗ್ಗೆ ಭದ್ರಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಅಭಿಷೇಕ್ ನಾಪತ್ತೆಯಾಗಿದ್ದರು.

ಇದನ್ನೂ ಓದಿ: ಸಿಗರೇಟ್ ವಿಚಾರವಾಗಿ ಎರಡು ಗುಂಪಿನ ನಡುವೆ ಹೊಡೆದಾಟ! ಓರ್ವ ಸಾವು

ಯುವಕ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ನಂತರ, ಬನ್ನೂರು ಗ್ರಾಮದ ಸಮೀಪದ ನದಿಯಲ್ಲೇ ಅಭಿಷೇಕ್ ಅವರ ಮೃತದೇಹ ಪತ್ತೆಯಾಗಿದೆ. ಮದುವೆ ಸಂಭ್ರಮದಲ್ಲಿದ್ದ ಸ್ನೇಹಿತರು ಮತ್ತು ಕುಟುಂಬದವರಲ್ಲಿ ಈ ಘಟನೆ ತೀವ್ರ ಶೋಕವನ್ನುಂಟು ಮಾಡಿದೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ