AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಮಾಲೆ ಧರಿಸುವವರ ಬಗ್ಗೆ ಕೀಳಾಗಿ ಮಾತನಾಡಿದ್ದ ಕುಮಾರಸ್ವಾಮಿ ವಿಡಿಯೋ ವೈರಲ್

ದತ್ತಮಾಲೆ ಯಾಕೆ ಹಾಕಬಾರದು? ದೇವರ ಕಾರ್ಯಕ್ರಮ ಹಾಕುವ ಸಮಯ ಬಂದರೇ ದತ್ತಮಾಲೆ ಹಾಕುತ್ತೇನೆ. ನಮ್ಮ ಧರ್ಮದ ಧರ್ಮಾಬೀಮಾನಕ್ಕೆ ನಾನು ಭಯ ಪಡುತ್ತೀನಾ? ಎಂದು ಹೆಚ್​ಡಿ ಕುಮಾರಸ್ವಾಮಿ ಇತ್ತೀಚಿಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಹೆಚ್​​ಡಿ ಕುಮಾರಸ್ವಾಮಿ ಅವರು ದತ್ತಮಾಲಾಧಾರಿಗಳ ಬಗ್ಗೆ ಕೀಳಾಗಿ ಮಾತನಾಡಿರುವ ವಿಡಿಯೋ ವೈರಲ್​ ಆಗುತ್ತಿದೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ|

Updated on: Nov 21, 2023 | 10:03 AM

Share

ಚಿಕ್ಕಮಗಳೂರು ನ.21: ಬಿಜೆಪಿ (BJP) ಜೊತೆಗಿನ ಮೈತ್ರಿ ನಿರ್ಧಾರ ಕೈಗೊಂಡ ಬಳಿಕ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿಯವರ (HD Kumaraswamy) ನಿಲುವುಗಳು ಬದಲಾಗಿವೆ. ಬಲಪಂಥೀಯ ನಿಲುವುಗಳನ್ನು ವಿರೋಧ ಮಾಡುತ್ತಾ ಬಂದಿದ್ದ ಹೆಚ್​ಡಿ ಕುಮಾರಸ್ವಾಮಿ ಅವರು ಬಜೆಟ್​ ಅಧಿವೇಶನದಲ್ಲಿ ಹಿಂದುತ್ವಪರ ಮಾತನಾಡುವ ಮೂಲಕ ಅಚ್ಚರಿ ಮೂಡಿಸಿದ್ದರು. ಇದೀಗ ಸಮಯ ಬಂದರೇ ದತ್ತಮಾಲೆ (Dattamale) ಹಾಕುತ್ತೇನೆ ಎಂದು ಹೇಳಿದ್ದರು. ಆದರೆ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​​ಡಿ ಕುಮಾರಸ್ವಾಮಿಯವರು ಈ ಹಿಂದೆ 2018ರ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಮೂಡಿಗೆರೆ ಕ್ಷೇತ್ರದಲ್ಲಿ ದತ್ತಮಾಲೆಯನ್ನು ವಿರೋಧಿಸಿ ಹೇಳಿಕೆ ನೀಡಿದ್ದರು. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

2018ರ ಫೆಬ್ರವರಿಯಲ್ಲಿ ಚುನಾವಣಾ ಪ್ರಚಾರದ ಸಂಬಂಧ ಮೂಡಿಗೆರೆ ಪಟ್ಟಣದ ಅಡಂತ್ಯಾಯ ರಂಗ ಮಂದಿರದಲ್ಲಿ ನಡೆದಿದ್ದ ಜೆಡಿಎಸ್ ಸಮಾವೇಶ ಮಾತನಾಡಿದ್ದ ಅವರು “ಇವತ್ತು ಇವರು ಶ್ರೀ ರಾಮನ ಹೆಸರಿನಲ್ಲಿ ಪ್ರತಿ ವರ್ಷ ಮಾಲೆ ಬೇರೆ ಹಾಕುತ್ತಾರೆ. ಮಾಲೆ ಹಾಕಿಕೊಂಡು ತಾಳ ಬಡಿದುಕೊಂಡು ಚಿಕ್ಕಮಗಳೂರಿನ ಬೀದಿಯಲ್ಲಿ ಹೋಗುತ್ತಾರೆ. ಅದನ್ನ ನೀವು ಮೆಚ್ಚಿಕೊಳ್ಳುತ್ತೀರಾ? ಭಿಕ್ಷೆ ಬೇರೆ ಬೇಡುತ್ತಾರೆ. ಅದೆಂತದೋ ದತ್ತಮಾಲೆ ಹಾಕೊಂಡು ಮನೆಮನೆಗೆ ಹೋಗಿ ಭಿಕ್ಷೆ ಬೇರೆ ಬೇಡುತ್ತಾರಂತೆ. ದೇವರೇ ಕಾಪಾಡಬೇಕು ಕೈಜೋಡಿಸಿ ಮನವಿ ಮಾಡುತ್ತೇನೆ ಇದೆಲ್ಲ ಬೇಡ ನಮಗೆ. ಮೊದಲು ನೀವು ಉಳಿದರೇ ತಾನೇ ದೇವರನ್ನ ಉಳಿಸಲು ಸಾಧ್ಯ” ಎಂದು ಹೇಳಿದ್ದರು.

ಇದನ್ನೂ ಓದಿ: ದತ್ತಮಾಲೆ ಹಾಕುವೆ ಎಂದ ಕುಮಾರಸ್ವಾಮಿಯ ನಡೆಯನ್ನು ಸ್ವಾಗತಿಸಿದ ಹಿಂದೂ ಸಂಘಟನೆಗಳು

ಹೆಚ್​ಡಿ ಕುಮಾರಸ್ವಾಮಿ ಅವರ ಹೇಳಿಕೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಹಿಂದೂ ಸಂಘಟನೆ ಕಾರ್ಯಕರ್ತರು ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದರು. ಇವರ ಹೇಳಿಕೆ ಮೂಡಿಗೆರೆ ಕ್ಷೇತ್ರದ ಅಂದಿನ ಹಾಲಿ ಜೆಡಿಎಸ್ ಶಾಸಕರ ಸೋಲಿಗೆ ಕಾರಣವಾಗಿತ್ತು.

ಬದಲಾದ ನಿಲುವು

ದತ್ತಮಾಲೆ ಯಾಕೆ ಹಾಕಬಾರದು? ದೇವರ ಕಾರ್ಯಕ್ರಮ ಹಾಕುವ ಸಮಯ ಬಂದರೇ ದತ್ತಮಾಲೆ ಹಾಕುತ್ತೇನೆ. ನಮ್ಮ ಧರ್ಮದ ಧರ್ಮಾಬೀಮಾನಕ್ಕೆ ನಾನು ಭಯ ಪಡುತ್ತೀನಾ? ಎಂದು ಹೆಚ್​ಡಿ ಕುಮಾರಸ್ವಾಮಿ ಇತ್ತೀಚಿಗೆ ಹೇಳಿಕೆ ನೀಡಿದ್ದರು.

ಏನಿದು ದತ್ತಮಾಲೆ

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಬಾಬಾಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠವನ್ನು ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಪ್ರತಿ ವರ್ಷ ಭಜರಂಗದಳ ಮತ್ತು ವಿಹೆಚ್​​ಪಿ ಕಾರ್ಯಕರ್ತರು ದತ್ತಮಾಲೆ ಧರಿಸುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ