ಚಿಕ್ಕಮಗಳೂರು: ಕಡೂರು ಜೆಡಿಎಸ್ ಅಭ್ಯರ್ಥಿ ಕಾರಿನಲ್ಲಿ ಕಂತೆ ಕಂತೆ ಹಣ ಪತ್ತೆ
ಚುನಾವಣಾ ಅಕ್ರಮ ತಡೆಯಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚೆಕ್ಪೋಸ್ಟ್ಗಳನ್ನ ನಿರ್ಮಿಸಿದೆ. ಅದರಂತೆ ಇದೀಗ ಕಡೂರು ಜೆ.ಡಿ.ಎಸ್ ಅಭ್ಯರ್ಥಿ ಧನಂಜಯ ಅವರಿಗೆ ಸೇರಿದ ಕಾರಿನಲ್ಲಿದ್ದ 9ಲಕ್ಷ ರೂಪಾಯಿ ಹಣವನ್ನ ತಾಲೂಕಿನ ಬಸವನಹಳ್ಳಿ ದಿಬ್ಬದ ಚೆಕ್ ಪೋಸ್ಟ್ನಲ್ಲಿ ವಶಕ್ಕೆ ಪಡೆಯಲಾಗಿದೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ(Karntaka Assembly Election 2023) ದಿನಾಂಕ ನಿಗದಿಯಾಗಿದ್ದು, ನೀತಿ ಸಂಹಿತೆ ಚಾರಿಯಲ್ಲಿದೆ. ಈ ಹಿನ್ನಲೆ ಚುನಾವಣಾ ಅಕ್ರಮ ತಡೆಯಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚೆಕ್ಪೋಸ್ಟ್ಗಳನ್ನ ನಿರ್ಮಿಸಿದೆ. ಅದರಂತೆ ಇದೀಗ ಕಡೂರು ಜೆ.ಡಿ.ಎಸ್ ಅಭ್ಯರ್ಥಿ ಧನಂಜಯ ಅವರಿಗೆ ಸೇರಿದ ಕಾರಿನಲ್ಲಿದ್ದ 9ಲಕ್ಷ ರೂಪಾಯಿ ಹಣವನ್ನ ತಾಲೂಕಿನ ಬಸವನಹಳ್ಳಿ ದಿಬ್ಬದ ಚೆಕ್ ಪೋಸ್ಟ್ನಲ್ಲಿ ವಶಕ್ಕೆ ಪಡೆಯಲಾಗಿದೆ. ಹೌದು ಚುನಾವಣೆಗೆ ಬಳಸಲು ಕೊಂಡೊಯ್ಯುತ್ತಿದ್ದ ದಾಖಲೆ ಇಲ್ಲದ 9 ಲಕ್ಷ ಅಕ್ರಮ ಹಣವನ್ನ ವಶಕ್ಕೆ ಪಡೆಯಲಾಗಿದ್ದು, ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚುನಾವಣಾ ಕಣದಲ್ಲಿ ಗಿಫ್ಟ್ ಪಾಲಿಟಿಕ್ಸ್, ಲಕ್ಷಾಂತರ ಮೌಲ್ಯದ ದ್ವಿಚಕ್ರ ವಾಹನಗಳು ಜಪ್ತಿ
ಚಿಕ್ಕಮಗಳೂರು: ಚುನಾವಣಾ ಕಣದಲ್ಲಿ ಗಿಫ್ಟ್ ಪಾಲಿಟಿಕ್ಸ್ ಜೋರಾಗಿದ್ದು, ಕಡೂರು ತಾಲೂಕಿನ ಬೀರೂರು ಪಟ್ಟಣದ ಗೋದಾಮಿನಲ್ಲಿ ಇಟ್ಟಿದ್ದ150,000 ಮೌಲ್ಯದ ಫ್ಯಾನ್, ಕುಕ್ಕರ್ ಮಿಕ್ಸರ್ನ್ನು ಸೀಜ್ ಮಾಡಲಾಗಿದೆ. ಇನ್ನುಬ ಇದೇ ಸಂದರ್ಭದಲ್ಲಿ ಜಿಲ್ಲೆಯ ಚೌಳಿ ಹಿರಿಯೂರು ಚೆಕ್ ಪೋಸ್ಟ್ ಬಳಿ ಗೂಡ್ಸ್ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ17.94ಲಕ್ಷ ಮೌಲ್ಯದ 50 ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದ್ದು, ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:V Somanna: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುವಂತೆ ಸಚಿವ ವಿ ಸೋಮಣ್ಣಗೆ ಬಿಜೆಪಿ ಹೈಕಮಾಂಡ್ ಸೂಚನೆ
ಮಾ.29ರಿಂದ ರಾಜ್ಯದಲ್ಲಿ ಈವರೆಗೆ 126.14 ಕೋಟಿ ರೂ. ಹಣ, ವಸ್ತು ಜಪ್ತಿ: ಬೆಂಗಳೂರು ಪಾಲೆಷ್ಟು? ಇಲ್ಲಿದೆ ಅಂಕಿ ಅಂಶ
ಬೆಂಗಳೂರು: ಚುನಾವಣೆ ಸಮಯದಲ್ಲಿ ಹಣ, ಹೆಂಡ ಮತ್ತು ಉಡುಗೊರೆಗಳನ್ನು ಮತದಾರರಿಗೆ ಹಂಚಲಾಗುತ್ತದೆ. ಇದಕ್ಕೆ ಬ್ರೇಕ್ ಹಾಕಲೆಂದು ಚುನಾವಣಾ ಆಯೋಗ ಮುಂದಾಗಿದ್ದು, ಕಳೆದ 24 ಗಂಟೆಗಳಲ್ಲಿ ಚುನಾವಣಾ ಆಯೋಗ 17.36 ಕೋಟಿ ರೂ. ಹಣ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದೆ. ಮಾರ್ಚ್.29 ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ ಆಯೋಗ 126.14 ಕೋಟಿ ರೂ. ಹಣ ಮತ್ತು ವಸ್ತುಗಳನ್ನು ಜಪ್ತಿ ಮಾಡಿದೆ.
ಮುಖ್ಯ ಚುನಾವಣಾಧಿಕಾರಿ ನೀಡಿರುವ ಅಂಕಿಅಂಶಗಳ ಪ್ರಕಾರ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅತಿ ಹೆಚ್ಚು ಜಪ್ತಿಯಾಗಿದ್ದು, ಫ್ಲೈಯಿಂಗ್ ಸ್ಕ್ವಾಡ್ ತಂಡ 2.4 ಕೋಟಿ ರೂ. ಮೌಲ್ಯದ 9.56 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ. ಇದರ ಬೆನ್ನಲ್ಲೇ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕ್ಷೇತ್ರದಲ್ಲಿ 2.10 ಕೋಟಿ ರೂ., ಕೊಪ್ಪಳ ಕ್ಷೇತ್ರದಲ್ಲಿ 1.66 ಕೋಟಿ ರೂ., ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದಲ್ಲಿ 1.42 ಕೋಟಿ ರೂ. ನಗದನ್ನು ಚುನಾವಣಾ ಅಧಿಕಾರಿಗಳು ಕಬ್ಜ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಒಟ್ಟೊಟ್ಟಿಗೇ ಸುತ್ತಾಡಿ ಪಕ್ಷ ಕಟ್ಟಿ, ಜತೆಯಾಗಿಯೇ ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಯಡಿಯೂರಪ್ಪ, ಈಶ್ವರಪ್ಪ
ಚುನಾವಣೆ ಸಮೀಪಿಸುತ್ತಿದ್ದಂತೆ ಅಕ್ರಮ ಹೆಚ್ಚುತ್ತಿದ್ದು, ದಿನಕ್ಕೆ ಸರಾಸರಿ ವಶಪಡಿಸಿಕೊಳ್ಳುವಿಕೆಯು ಇಲ್ಲಿಯವರೆಗೆ ಸುಮಾರು 10 ಕೋಟಿ ರೂ. ಏರಿಕೆ ಕಂಡಿದೆ. ನಿನ್ನೆ (ಏ.11)ರ ಅಂಕಿಅಂಶಗಳ ಪ್ರಕಾರ ಒಟ್ಟು 9.77 ಕೋಟಿ ರೂ. ನಗದು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ 2.47 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ, 2.10 ಕೋಟಿ ರೂ. ಮೌಲ್ಯದ ಮದ್ಯ ಮತ್ತು ಉಡುಗೊರೆ ಹಾಗೂ 1.63 ಕೋಟಿ ರೂ. ಹಣ ಪತ್ತೆಯಾಗಿದೆ.
ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ