2019ರ ಮಹಾಮಳೆಗೆ ಮನೆ, ಜಮೀನು ಕಳೆದುಕೊಂಡವರಿಗೆ ಇನ್ನೂ ಪರ್ಯಾಯ ವ್ಯವಸ್ಥೆ ಸಿಕ್ಕಿಲ್ಲ; 3ನೇ ದಿನಕ್ಕೆ ಕಾಲಿಟ್ಟ ಕಳಸ ಸಂತ್ರಸ್ತರ ಪ್ರತಿಭಟನೆ

ಸರ್ಕಾರ, ಜಿಲ್ಲಾಡಳಿತದ ಧೋರಣೆ ವಿರೋಧಿಸಿ ಸಂತ್ರಸ್ತರು ಧರಣಿ ನಡೆಸಿದ್ದಾರೆ. ಬದುಕಲು ಬಿಡಿ ಇಲ್ಲಾ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಸಂತ್ರಸ್ತರು ಪಟ್ಟು ಹಿಡಿದಿದ್ದಾರೆ. ಸಂತ್ರಸ್ತರ ಹಿತಕಾಯಲು ಜನಪ್ರತಿನಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆ.

2019ರ ಮಹಾಮಳೆಗೆ ಮನೆ, ಜಮೀನು ಕಳೆದುಕೊಂಡವರಿಗೆ ಇನ್ನೂ ಪರ್ಯಾಯ ವ್ಯವಸ್ಥೆ ಸಿಕ್ಕಿಲ್ಲ; 3ನೇ ದಿನಕ್ಕೆ ಕಾಲಿಟ್ಟ ಕಳಸ ಸಂತ್ರಸ್ತರ ಪ್ರತಿಭಟನೆ
3ನೇ ದಿನಕ್ಕೆ ಕಾಲಿಟ್ಟ ಕಳಸ ಸಂತ್ರಸ್ತರ ಪ್ರತಿಭಟನೆ
Follow us
TV9 Web
| Updated By: ganapathi bhat

Updated on: Mar 04, 2022 | 11:18 AM

ಚಿಕ್ಕಮಗಳೂರು: ಜಿಲ್ಲೆಯ ಕಳಸ ಸಂತ್ರಸ್ತರ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗಿದೆ. 2019 ರ ಮಹಾಮಳೆಯಲ್ಲಿ ಮನೆ, ಜಮೀನು ಕಳೆದುಕೊಂಡಿದ್ದ ಜನರಿಗೆ ಈವರೆಗೂ ಪರ್ಯಾಯ ವ್ಯವಸ್ಥೆ ಸಿಕ್ಕಿಲ್ಲ. ಮನೆ, ಜಮೀನು ಕಳೆದುಕೊಂಡ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ. ಅಷ್ಟೇ ಅಲ್ಲದೆ, ಬಾಡಿಗೆ ಮನೆಯಲ್ಲಿ ವಾಸವಿದ್ದರೂ ಜಿಲ್ಲಾಡಳಿತ ಬಾಡಿಗೆ ಹಣ ನೀಡಿಲ್ಲ. ಸರ್ಕಾರ, ಜಿಲ್ಲಾಡಳಿತದ ಧೋರಣೆ ವಿರೋಧಿಸಿ ಸಂತ್ರಸ್ತರು ಧರಣಿ ನಡೆಸಿದ್ದಾರೆ. ಬದುಕಲು ಬಿಡಿ ಇಲ್ಲಾ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಸಂತ್ರಸ್ತರು ಪಟ್ಟು ಹಿಡಿದಿದ್ದಾರೆ. ಸಂತ್ರಸ್ತರ ಹಿತಕಾಯಲು ಜನಪ್ರತಿನಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆ.

ಇಂದು ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಆದರೆ ಹಲವು ಕಡೆ ಸಾಲು ಸಾಲು ಪ್ರತಿಭಟನೆ ನಡೆಯುತ್ತಿವೆ. ಇತ್ತ ಬೆಂಗಳೂರಿನಲ್ಲಿ ಕೂಡ ಇಂದು ಪ್ರತಿಭಟನೆಗಳು ನಡೆಯುತ್ತಿವೆ. ಪೊಲೀಸರಿಗೆ (Police) ನ್ಯಾಯ ಕೊಡಿಸುವಂತೆ ಒತ್ತಾಯಿಸಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮನೆ ಮುಂದೆ ವಂದೇಮಾತರಂ ಸಮಾಜಸೇವೆ ಸಂಘಟನೆ ಪ್ರತಿಭಟನೆ ಮಾಡುತ್ತಿದೆ. ಪ್ರಮೋಷನ್ ವಿಳಂಬದ ಬಗ್ಗೆ ಮತ್ತು ಸಂಬಳ ತಾರತಮ್ಯ ಕುರಿತು ಪೊಲೀಸರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ವಂದೇಮಾತರಂ ಸಮಾಜಸೇವೆ ಸಂಘಟನೆ ಬೆಂಗಳೂರಿನ ಆರ್​ಟಿ ನಗರದ ಸಿಎಂ ನಿವಾಸದ ಬಳಿ ಧರಣಿ ಮಾಡುತ್ತಿದ್ದಾರೆ. ಪೊಲೀಸರಿಗೆ ಅನೇಕ ವರ್ಷಗಳಿಂದ ಪ್ರೊಮೋಷನ್ ಆಗಿಲ್ಲ. ಸಂಬಳದಲ್ಲೂ ಅನ್ಯಾಯ ಆಗಿದೆ. ಬಜೆಟ್ನಲ್ಲಿ ಇದನ್ನ ಸರಿಪಡಿಸುವಂತೆ ಅಧ್ಯಕ್ಷ ಶಿವಕುಮಾರ್ ಸಿಎಂಗೆ ಮನವಿ ಮಾಡಿದ್ದಾರೆ.

ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸಲು ಆಗ್ರಹ:

ಫ್ರೀಡ್ಂ ಪಾರ್ಕ್​ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಶನ್ ನಿಂದ ಪ್ರತಿಭಟನೆ ನಡೆಯುತ್ತಿದೆ. ಸೇವಾ ಹಿರಿತನದ ಆಧಾರದ ಮೇಲೆ ಗೌರವಧನವನ್ನು ಹೆಚ್ಚಳಕ್ಕೆ ಆಗ್ರಹಿಸಿ ಧರಣಿ ನಡೆಸುತ್ತಿರುವ ಕಾರ್ಯಕರ್ತೆಯರು ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಆಗ್ರಹಿಸಿದ್ದಾರೆ. ಪ್ರತಿಭಟನೆಗೆ ರಾಜ್ಯದ ಮೂಲೆಮೂಲೆಗಳಿಂದ ಅಂಗನವಾಡಿ ಕಾರ್ಯೆಕರ್ತೆಯರು ಬಂದು ಭಾಗಿಯಾಗಿದ್ದಾರೆ.

ಇದನ್ನೂ ಓದಿ: Karnataka Budget 2022: ಇಂದು ಚೊಚ್ಚಲ ಬಜೆಟ್‌ ಮಂಡಿಸಲಿದ್ದಾರೆ ಸಿಎಂ ಬೊಮ್ಮಾಯಿ; ನಿರೀಕ್ಷೆ ಹೆಚ್ಚಳ

ಇದನ್ನೂ ಓದಿ: ದಾವಣಗೆರೆ: ರಾತ್ರೋರಾತ್ರಿ ಗುಡಿಸಲು ತೆರವುಗೊಳಿಸಿದ ಜಿಲ್ಲಾಡಳಿತ; ಸ್ಥಳೀಯರ ತೀವ್ರ ಆಕ್ರೋಶ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್