AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Protest For Dalit CM: ಚಿಕ್ಕಮಗಳೂರು; ಕಾಫಿನಾಡಲ್ಲಿ ಹೆಚ್ಚಾದ ದಲಿತ ಸಿಎಂ ಕೂಗು

ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ನಡೆಯುತ್ತಿರುವ ಮಧ್ಯೆಯೇ ದಲಿತ ಸಿಎಂ ಕೂಗು ಕೂಡ ಎದ್ದಿದೆ. ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರನಲ್ಲಿ ದಲಿತ ಸಮುದಾಯದವರು ಪ್ರತಿಭಟನೆ ನಡೆಸಿದರು.

Protest For Dalit CM: ಚಿಕ್ಕಮಗಳೂರು; ಕಾಫಿನಾಡಲ್ಲಿ ಹೆಚ್ಚಾದ ದಲಿತ ಸಿಎಂ ಕೂಗು
ಮಲ್ಲಿಕಾರ್ಜುನ ಖರ್ಗೆ ಮತ್ತು ಜಿ ಪರಮೇಶ್ವರ
Ganapathi Sharma
|

Updated on: May 15, 2023 | 8:10 PM

Share

ಚಿಕ್ಕಮಗಳೂರು: ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ನಡೆಯುತ್ತಿರುವ ಮಧ್ಯೆಯೇ ದಲಿತ ಸಿಎಂ ಕೂಗು ಕೂಡ ಎದ್ದಿದೆ. ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರನಲ್ಲಿ ದಲಿತ ಸಮುದಾಯದವರು ಪ್ರತಿಭಟನೆ ನಡೆಸಿದರು.

ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು. 70 ವರ್ಷದಲ್ಲಿ ಕಾಂಗ್ರೆಸ್ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಿಲ್ಲ. ಈ ಬಾರಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್​​ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಮತ್ತೊಂದೆಡೆ, ದೆಹಲಿಯಲ್ಲಿ ಎಐಸಿಸಿ ವೀಕ್ಷಕರಾದ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್, ಬಬಾರಿಯಾ ಎಐಸಿಸಿ ಅಧ್ಯಕ್ಷ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಶಾಸಕರ ಅಭಿಪ್ರಾಯದ ವರದಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆಯುತ್ತಿರುವ ನಡುವೆ ಡಿಕೆ ಶಿವಕುಮಾರ್ ದಿಢೀರ್ ಆಗಿ ದೆಹಲಿ ಪ್ರವಾಸ ರದ್ದುಗೊಳಿಸಿ ಅಚ್ಚರಿ ಮೂಡಿಸಿದ್ದಾರೆ. ಪೂರ್ವ ನಿಗದಿಯಂತೆ ಅವರು ಕೂಡ ದೆಹಲಿಯಲ್ಲಿ ಹೈಕಮಾಂಡ್ ಸಭೆಯಲ್ಲಿ ಭಾಗಿಯಾಗಬೇಕಿತ್ತು.

ಇದನ್ನೂ ಓದಿ: Who would be CM? ದೆಹಲಿ ತಲುಪಿದ ಬಳಿಕ ಸಿದ್ದರಾಮಯ್ಯ ಸಿಡಿಮಿಡಿತನ ಪ್ರದರ್ಶಿಸಿದ್ದು ಹತಾಶೆಯಿಂದಾಗಿಯೇ?

ದೆಹಲಿ ಪ್ರವಾಸ ರದ್ದು ಬಗ್ಗೆ ಮಾಹಿತಿ ನೀಡಿದ ಡಿಕೆ ಶಿವಕುಮಾರ್, ನನಗೆ ಆರೋಗ್ಯದ ಸಮಸ್ಯೆಯಿದೆ. ವಿಶ್ರಾಂತಿ ಪಡೆಯುವಂತೆ ವೈದ್ಯರು ಹೇಳಿದ್ದಾರೆ. ನನ್ನ ಜೊತೆ ಯಾವ ಶಾಸಕರು ಇಲ್ಲ, ನನಗೆ ಯಾರ ಬೆಂಬಲ ಬೇಡ. ಯಾರು ಯಾರನ್ನು ಬೇಕಾದರೂ ಕರೆದುಕೊಂಡು ಹೋಗಬಹುದು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ