ಚಿಕ್ಕಮಗಳೂರು: ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ನಡೆಯುತ್ತಿರುವ ಮಧ್ಯೆಯೇ ದಲಿತ ಸಿಎಂ ಕೂಗು ಕೂಡ ಎದ್ದಿದೆ. ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರನಲ್ಲಿ ದಲಿತ ಸಮುದಾಯದವರು ಪ್ರತಿಭಟನೆ ನಡೆಸಿದರು.
ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು. 70 ವರ್ಷದಲ್ಲಿ ಕಾಂಗ್ರೆಸ್ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಿಲ್ಲ. ಈ ಬಾರಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಮತ್ತೊಂದೆಡೆ, ದೆಹಲಿಯಲ್ಲಿ ಎಐಸಿಸಿ ವೀಕ್ಷಕರಾದ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್, ಬಬಾರಿಯಾ ಎಐಸಿಸಿ ಅಧ್ಯಕ್ಷ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಶಾಸಕರ ಅಭಿಪ್ರಾಯದ ವರದಿ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆಯುತ್ತಿರುವ ನಡುವೆ ಡಿಕೆ ಶಿವಕುಮಾರ್ ದಿಢೀರ್ ಆಗಿ ದೆಹಲಿ ಪ್ರವಾಸ ರದ್ದುಗೊಳಿಸಿ ಅಚ್ಚರಿ ಮೂಡಿಸಿದ್ದಾರೆ. ಪೂರ್ವ ನಿಗದಿಯಂತೆ ಅವರು ಕೂಡ ದೆಹಲಿಯಲ್ಲಿ ಹೈಕಮಾಂಡ್ ಸಭೆಯಲ್ಲಿ ಭಾಗಿಯಾಗಬೇಕಿತ್ತು.
ಇದನ್ನೂ ಓದಿ: Who would be CM? ದೆಹಲಿ ತಲುಪಿದ ಬಳಿಕ ಸಿದ್ದರಾಮಯ್ಯ ಸಿಡಿಮಿಡಿತನ ಪ್ರದರ್ಶಿಸಿದ್ದು ಹತಾಶೆಯಿಂದಾಗಿಯೇ?
ದೆಹಲಿ ಪ್ರವಾಸ ರದ್ದು ಬಗ್ಗೆ ಮಾಹಿತಿ ನೀಡಿದ ಡಿಕೆ ಶಿವಕುಮಾರ್, ನನಗೆ ಆರೋಗ್ಯದ ಸಮಸ್ಯೆಯಿದೆ. ವಿಶ್ರಾಂತಿ ಪಡೆಯುವಂತೆ ವೈದ್ಯರು ಹೇಳಿದ್ದಾರೆ. ನನ್ನ ಜೊತೆ ಯಾವ ಶಾಸಕರು ಇಲ್ಲ, ನನಗೆ ಯಾರ ಬೆಂಬಲ ಬೇಡ. ಯಾರು ಯಾರನ್ನು ಬೇಕಾದರೂ ಕರೆದುಕೊಂಡು ಹೋಗಬಹುದು ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ