AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಕಷ್ಟ; ಇತ್ತ ಸಂಬಳವೂ ಇಲ್ಲ, ಮೊಟ್ಟೆ, ತರಕಾರಿಗೂ ಸ್ವಂತ ಹಣ ಹಾಕಿ ಕಂಗಾಲು

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಕಷ್ಟ ಹೇಳತ್ತೀರದ್ದಾಗಿದೆ. ಸರ್ಕಾರದಿಂದ ಉತ್ತಮ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿಲ್ಲ. ಜೊತೆ 3-4 ತಿಂಗಳಿಂದ ಕಾರ್ಯಕರ್ತೆಯರಿಗೆ ಸಂಬಳ ಬಂದಿಲ್ಲ. ಮೊಟ್ಟೆ ಖರೀದಿಸಿರುವ ಹಣ ಕೂಡ ಪೆಂಡಿಂಗ್ ಇದೆ. ಇದರ ಜೊತೆಗೆ ಈಗ ತರಕಾರಿಗೂ ತಮ್ಮದೇ ಸ್ವಂತ ಹಣ ಹಾಕಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಸ್ಥಿತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಬಂದಿದೆ.

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಕಷ್ಟ; ಇತ್ತ ಸಂಬಳವೂ ಇಲ್ಲ, ಮೊಟ್ಟೆ, ತರಕಾರಿಗೂ ಸ್ವಂತ ಹಣ ಹಾಕಿ ಕಂಗಾಲು
ಮೊಟ್ಟೆ, ತರಕಾರಿಗೂ ಸ್ವಂತ ಹಣ ಹಾಕುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು|

Updated on: Sep 23, 2024 | 9:19 AM

Share

ಚಿಕ್ಕಮಗಳೂರು, ಸೆ.23: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ (Anganwadi workers) ಸಾಲು ಸಾಲು ಸಂಕಷ್ಟಗಳು ಎದುರಾಗಿವೆ. ಸರ್ಕಾರದಿಂದ (Karnataka Government) ಸಂಬಳವು ಸರಿಯಾಗಿ ಬರ್ತಿಲ್ಲ, ಮೊಟ್ಟೆ ಖರೀದಿಸಿದ ಹಣವು ಬರ್ತಿಲ್ಲ. ಇದರ ನಡುವೆ ಇದೀಗ ಕಾರ್ಯಕರ್ತೆಯರೇ ತಮ್ಮ ಸ್ವಂತ ಹಣದಲ್ಲಿ ತರಕಾರಿ ಖರೀದಿ ಮಾಡಿ ಅಡುಗೆ ಮಾಡಿ ಮಕ್ಕಳಿಗೆ ಬಡಿಸುವ ಸ್ಥಿತಿ ಎದುರಾಗಿದೆ. ಹೀಗಾಗಿ ಅಂಗನವಾಡಿ ಕಾರ್ಯಕರ್ತರು ತಮ್ಮ ಮೇಲಾಗುತ್ತಿರುವ ಧೋರಣೆ ಬಗ್ಗೆ ಅಳಲು ತೋಡಿಕೊಂಡಿದ್ದಾರೆ.

ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಉಪ್ಪಿಟ್ಟಿನ ಪೌಡರ್, ಸಾಂಬಾರ್ ಪೌಡರ್ ವಿತರಣೆ ಮಾಡಲಾಗುತ್ತಿದೆ. ನೀರಿನಲ್ಲಿ ಕಲಸಿ ಅಡುಗೆ ಮಾಡಿ ಕೊಡಿ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಈ ಕಳಪೆ ಗುಣಮಟ್ಟದ ಉಪ್ಪಿಟ್ಟು ತಿನ್ನಲು ಪುಟ್ಟ ಮಕ್ಕಳು ಪರದಾಡುತ್ತಿದ್ದಾರೆ. ಹೀಗಾಗಿ ಮಾನವೀಯತೆ ದೃಷ್ಟಿಯಿಂದ ಸ್ವಂತ ಹಣದಲ್ಲಿ ತರಕಾರಿ ತಂದು ಅಡುಗೆ ಮಾಡುತ್ತಿದ್ದೇವೆ ಎಂದು ಕಾರ್ಯಕರ್ತೆಯರು ತಿಳಿಸಿದ್ದಾರೆ.

ಮೊಟ್ಟೆ, ತರಕಾರಿಗೂ ಸ್ವಂತ ಹಣ ಹಾಕಿ ಕಂಗಾಲು

ಇದನ್ನೂ ಓದಿ: ಟಿವಿ9 ವರದಿ ಫಲಶೃತಿ: ಗೌರಿ ಗಣೇಶ ಹಬ್ಬಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಬಿಡುಗಡೆ

ಈರುಳ್ಳಿ , ಟೊಮೇಟೊ, ಮೆಣಸಿನಕಾಯಿ ಇಲ್ಲದೆ‌ ಉಪ್ಪಿಟ್ಟು, ಸಾಂಬಾರ್ ಮಾಡಿ ಎಂದು ಸರ್ಕಾರ ಹೇಳುತ್ತಿದೆ. ಎರಡು ವರ್ಷಗಳಿಂದ ಅಂಗನವಾಡಿ ಕೇಂದ್ರಗಳಿಗೆ ಸರ್ಕಾರ ತರಕಾರಿ ವಿತರಣೆ ನಿಲ್ಲಿಸಿದೆ. ಕಳಪೆ ಗುಣಮಟ್ಟದ ಆಹಾರ ಸಾಮಗ್ರಿಗಳನ್ನ ವಿತರಣೆ ಮಾಡುತ್ತಿದೆ. ಕಳಪೆ ಗುಣಮಟ್ಟದ ಉಪ್ಪಿಟ್ಟು ತಿನ್ನಲು ಮಕ್ಕಳಿಂದಾಗುತ್ತಿಲ್ಲ. ಹೀಗಾಗಿ ಉತ್ತಮ ಗುಣಮಟ್ಟದ ಆಹಾರ ಸಾಮಗ್ರಿಗಳ ವಿತರಣೆ ಮಾಡುವಂತೆ ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇನ್ನು ಮತ್ತೊಂದೆಡೆ ಸರ್ಕಾರ ಮೇ ವರೆಗೆ ಮಾತ್ರ ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ನೀಡಿದೆ. ಹಾಗೂ ಏಪ್ರಿಲ್ ವರೆಗೆ ಮಾತ್ರ ಮೊಟ್ಟೆ ಖರೀದಿಸಿರುವ ಹಣ ನೀಡಿದೆ. ಇನ್ನೂ ಉಳಿದ ತಿಂಗಳುಗಳ ಹಣ ನೀಡಿಲ್ಲ ಹೀಗಾಗಿ ಹಣ ನೀಡುವಂತೆಯೂ ಅಂಗನವಾಡಿ ಕಾರ್ಯಕರ್ತೆಯರು ಮನವಿ ಮಾಡಿದ್ದಾರೆ.

ಸಿಮ್‌ ರಿಚಾರ್ಜ್‌ಗೆ ಕರೆನ್ಸಿ ಹಾಕುತ್ತಿಲ್ಲ

ಇನ್ನು ಮತ್ತೊಂದೆಡೆ ಅಂಗನವಾಡಿಯಲ್ಲಿ ನಡೆಯುವ ನಿತ್ಯದ ಚಟುವಟಿಕೆಗಳನ್ನು ಮೊಬೈಲ್‌ನಲ್ಲಿ ದಾಖಲಿಸಿ ಇಲಾಖೆಗೆ ವರದಿ ಕಳುಹಿಸಬೇಕೆಂದು ಸರ್ಕಾರದಿಂದಲೇ ಕಾರ್ಯಕರ್ತೆಯರಿಗೆ ಬಿಎಸ್‌ಎನ್‌ಎಲ್‌ ಸಿಮ್‌ ಹಾಗೂ ಮೊಬೈಲ್​ಗಳನ್ನು ವಿತರಿಸಲಾಗಿದೆ. ಆದರೆ ಆ ಸಿಮ್‌ಗಳಿಗೆ ಕಳೆದ ಒಂದು ವರ್ಷದಿಂದ ಕರೆನ್ಸಿ ಹಾಕಿಲ್ಲ. ಕೆಲವೆಡೆ ಬಿಎಸ್‌ಎನ್‌ಎಲ್‌ ನೆಟ್ವರ್ಕ್ ಸಿಗುತ್ತಿಲ್ಲ. ಬೇರೆ ಸಿಮ್‌ ವಿತರಿಸುತ್ತೇವೆ ಎಂದು ಇಲಾಖೆ ಅಧಿಕಾರಿಗಳು ಹೇಳಿದ್ದರೂ ಕಾರ್ಯರೂಪಕ್ಕೆ ಬಂದಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ