ಚಿಕ್ಕಮಗಳೂರು ಅರಣ್ಯ ವಲಯದ ಹೋಂಸ್ಟೇ, ರೆಸಾರ್ಟ್ಗಳಿಗೆ ಅರಣ್ಯ ಇಲಾಖೆ ನೋಟಿಸ್
ಅರಣ್ಯ ಇಲಾಖೆ ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿನ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ಸ್ವಾಮಿ ದರ್ಗಾ, ಚಂದ್ರದ್ರೋಣ ಪರ್ವತದ ಸುತ್ತಮುತ್ತ ನಿರ್ಮಾಣವಾಗಿರುವ ಹೋಂಸ್ಟೇ, ರೆಸಾರ್ಟ್ ಮಾಲಿಕರಿಗೆ ನೋಟಿಸ್ ನೀಡಿದೆ.
ಚಿಕ್ಕಮಗಳೂರು, ಸೆಪ್ಟೆಂಬರ್ 10: ಅಂಕೋಲಾದ ಶಿರೂರು, ಶಿರಾಡಿ ಘಾಟ ಭೂಕುಸಿತ (Shiradi Ghat Landslide) ಹಾಗೂ ವಯನಾಡಿನ ದುರ್ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ (Karnataka Government) ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿರುವ ರೆಸಾರ್ಟ್ ಅಥವಾ ಹೋಂಸ್ಟೇಗಳಿಗೆ ನೋಟಿಸ್ ನೀಡಿದೆ. ಅನಧಿಕೃತವಾಗಿ ನಡೆಯುತ್ತಿರುವ ಹೋಂಸ್ಟೇ ಅಥವಾ ರೆಸಾರ್ಟ್ಗಳನ್ನು ಪತ್ತೆ ಹಚ್ಚಲು ಮುಂದಾಗಿದೆ.
ಚಿಕ್ಕಮಗಳೂರು ಅರಣ್ಯ ವಲಯ (Chikmagalur Forest Zone) ವ್ಯಾಪ್ತಿಯಲ್ಲಿನ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ಸ್ವಾಮಿ ದರ್ಗಾ, ಚಂದ್ರದ್ರೋಣ ಪರ್ವತದ ಸುತ್ತಮುತ್ತ ನಿರ್ಮಾಣವಾಗಿರುವ ಹೋಂಸ್ಟೇ, ರೆಸಾರ್ಟ್ ಮಾಲಿಕರು ತಮ್ಮ ಹೋಂಸ್ಟೇಗೆ ಸಂಬಂಧಿಸಿದ ಕಂದಾಯ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸುವಂತೆ ಡಿಎಫ್ಒ ರಮೇಶ್ ಬಾಬು ಅವರು ನೋಟಿಸ್ ಹೊರಡಿಸಿದ್ದಾರೆ.
ಇದನ್ನೂ ಓದಿ: ಟ್ರೆಕ್ಕಿಂಗ್ ಪ್ರಿಯರಿಗೆ ಅರಣ್ಯ ಇಲಾಖೆಯಿಂದ ಶಾಕ್; ರಾಜ್ಯಾದ್ಯಂತ ತಾತ್ಕಾಲಿಕವಾಗಿ ಚಾರಣಕ್ಕೆ ನಿರ್ಬಂಧ!
ಸಾಲು ಸಾಲು ದುರ್ಘಟನೆ ಬಳಿಕ ಎಚ್ಚತ್ತ ಅರಣ್ಯ ಇಲಾಖೆ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಹೋಂಸ್ಟೇ ಅಥವಾ ರೆಸಾರ್ಟ್ಗಳ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿತ್ತು. ವರದಿ ಸಲ್ಲಿಕೆಯಾದ ಬಳಿಕ ಅರಣ್ಯ ಇಲಾಖೆ 2015ರ ನಂತರ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ಅಥವಾ ಹೋಂಸ್ಟೇ, ತೋಟ, ಬಡವಾಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುವಂತೆ ಸೂಚನೆ ನೀಡಿತ್ತು.
ಇದೀಗ, ಅನಧೀಕೃತವಾಗಿ ನಡೆಯುತ್ತಿರುವ ರೆಸಾರ್ಟ್ ಅಥವಾ ಹೋಂಸ್ಟೇಗಳನ್ನು ಪತ್ತೆಹಚ್ಚಲು ಅರಣ್ಯ ಇಲಾಖೆ ಮುಂದಾಗಿದೆ. ಹೀಗಾಗಿ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಾಣ ಮಾಡಿರುವ ಎಲ್ಲ ಹೋಂಸ್ಟೇ ಮಾಲಿಕರು ಕಂದಾಯ ದಾಖಲಾತಿಗಳನ್ನು ಸಲ್ಲಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:23 am, Tue, 10 September 24