AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Datta peeta: ದತ್ತಪೀಠಕ್ಕೆ ಅರ್ಚಕರನ್ನು ನೇಮಿಸಿದ ರಾಜ್ಯ ಸರ್ಕಾರ; 2018ರ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡ ಬಿಜೆಪಿ

ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಬಾಬಾಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ರಾಜ್ಯ ಸರ್ಕಾರ ಇಬ್ಬರು ಅರ್ಚಕರನ್ನ ನೇಮಕ ಮಾಡಿದೆ.

Datta peeta: ದತ್ತಪೀಠಕ್ಕೆ ಅರ್ಚಕರನ್ನು ನೇಮಿಸಿದ ರಾಜ್ಯ ಸರ್ಕಾರ; 2018ರ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡ ಬಿಜೆಪಿ
ಬಾಬಾಬುಡನ್​ಗಿರಿ ಐಡಿ ಪೀಠದಲ್ಲಿರುವ ಫಲಕ
TV9 Web
| Edited By: ವಿವೇಕ ಬಿರಾದಾರ|

Updated on:Dec 03, 2022 | 9:16 PM

Share

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಬಾಬಾಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ (Bababudangiri Inam Datta Peetha) ರಾಜ್ಯ ಸರ್ಕಾರ ಇಬ್ಬರು ಅರ್ಚಕರನ್ನು (priest) ನೇಮಕ ಮಾಡಿದೆ. ಶೃಂಗೇರಿ ಮೂಲದ ಶ್ರೀಕಾಂತ್, ಚಿಕ್ಕಬಳ್ಳಾಪುರದ ಸಂದೀಪ್ ಇಬ್ಬರು ಅರ್ಚಕರ ನೇಮಿಸಿದೆ. ಅರ್ಚಕರ ನೇಮಕ ಸಂಬಂಧ ರಾಜ್ಯಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿ 8 ಜನರು ಇದ್ದರು. ಅರ್ಚಕರ ನೇಮಿಸುವ ಅಧಿಕಾರ ಆಡಳಿತ ಮಂಡಳಿಗೆ ಇದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿತ್ತು.  ಹೀಗಾಗಿ ಈ ಆಡಳಿತ ಮಂಡಳಿ ಇಬ್ಬರು ಅರ್ಚಕರನ್ನು ನೇಮಿಸಿದೆ.

ಹಿಂದೂ ಅರ್ಚಕರ ನೇಮಕ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ‌ ಸಂಭ್ರಮಿಸಿದ್ದಾರೆ. ಬಿಜೆಪಿ 2018ರ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದೆ.

ಡಿ 6, 7, 8ಕ್ಕೆ ದತ್ತ ಜಯಂತಿ; ಹೈಕೋರ್ಟ್ ಅಸ್ತು

ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ದತ್ತ ಜಯಂತಿ ವಿಚಾರಕ್ಕೆ ಸಂಬಂಧಿಸಿ ವಿವಾದಿತ ಸ್ಥಳದಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ. ಸರ್ಕಾರ ರಚಿಸಿದ ಸಮಿತಿ, ಭಕ್ತರಿಂದ ಪೂಜಾವಿಧಿ ನಡೆಸಲು ದತ್ತ ಪಾದುಕೆ ಪೂಜೆಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ಸರ್ಕಾರ ಈಗಾಗಲೇ ನಿರ್ವಹಣಾ ಸಮಿತಿ ರಚಿಸಿದೆ. ಹಿಂದೂ, ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಮಾಡಲಾಗಿದ್ದು ಪ್ರತಿದಿನ ಎರಡೂ ಸಮುದಾಯದವರೂ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ದತ್ತ ಜಯಂತಿಗೆ ಅನುಮತಿ‌ ನೀಡಲು ಮನವಿ ಸಲ್ಲಿಸಲಾಗಿತ್ತು. ಹೈಕೋರ್ಟ್​ಗೆ ಎಜಿ ಪ್ರಭುಲಿಂಗ್ ನಾವದಗಿ ಮನವಿ ಸಲ್ಲಿಸಿದ್ದರು. ಅದರಂತೆ ಡಿ 6, 7, 8 ಮೂರು ದಿನಗಳ ಕಾಲ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅಸ್ತು ಎಂದಿದೆ.

ಏನಿದು ವಿವಾದ:

ಬಾಬಾಬುಡನ್‌ ಗಿರಿ ಅಥವಾ ಶ್ರೀಗುರುದತ್ತಾತ್ರೇಯ ಯಾರಿಗೆ ಸೇರಿದ್ದು ಎಂಬ ಬಗ್ಗೆ ವಾದ ವಿವಾದಗಳು ನಡೆಯುತ್ತಲೇ ಇವೆ. ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರಿದೆ. ಆದರೆ ಈ ಸ್ಥಳವನ್ನು ಬಾಬಾ ಬುಡನ್‌ ಗಿರಿ ಎಂದೂ ಮತ್ತೆ ಕೆಲವರು ಇನಾಂ ದತ್ತಾತ್ರೇಯ ಪೀಠ ಎಂದೂ ಕರೆಯುತ್ತಾರೆ. ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿದ್ದ ಈ ಧಾರ್ಮಿಕ ಕೇಂದ್ರದ ನಮ್ಮದು ಎಂದು ಎರಡು ಧರ್ಮದವರು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮಂಡಿಸುತ್ತಿದ್ದಾರೆ.

ಹೆಸರಿನ ವಿವಾದ

ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರು. ಆ ಸ್ಥಳವನ್ನು ಇನಾಂ ದತ್ತಾತ್ರೇಯ ಪೀಠ, (ಐಡಿ ಪೀಠ) ಎಂದೂ ಹೆಸರಿಸುತ್ತಾರೆ. ಆದರೆ ಕೆಲವೆಡೆ ‘ಬಾಬಾಬುಡನ್​ಗಿರಿ’ ಎಂದೂ ಇನ್ನೂ ಕೆಲವೆಡೆ ದತ್ತಪೀಠ ಎಂದೂ ಕರೆಯುತ್ತಿದ್ದಾರೆ. ಈ ಹೆಸರಿನ ವಿಚಾರ ಸಣ್ಣದಲ್ಲ. ಯಾವ ಹೆಸರಿನಿಂದ ಕರೆಯಬೇಕು ಎಂಬ ಬಗ್ಗೆ ಹಿಂದೂ-ಮುಸ್ಲಿಂ ಧರ್ಮದ ಅನುಯಾಯಿಗಳ ನಡುವೆ ಹಲವು ದಶಕಗಳಿಂದಲೂ ನಿರಂತರವಾಗಿ ಹೋರಾಟ ನಡೆಯುತ್ತಲೇ ಇದೆ. ಹಿಂದೂ-ಮುಸ್ಲಿಂ ಭಾವೈಕ್ಯತಾ ಕೇಂದ್ರವಾಗಿರುವ ಈ ಸ್ಥಳದ ಉಮೇದುವಾರಿಕೆ ನಮ್ಮದು ಎಂದು ಎರಡು ಧರ್ಮದವರು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮಂಡಿಸುತ್ತಲೇ ಇದ್ದಾರೆ.

ಬಾಬಾಬುಡನ್​ಗಿರಿ ಮತ್ತು ರಾಜಕಾರಣ

ದತ್ತಪೀಠಕ್ಕೆ ಹಿಂದೂ ಮತ್ತು ಮುಸ್ಲಿಮರು ನೂರಾರು ವರ್ಷಗಳಿಂದ ನಡೆದುಕೊಳ್ಳುತ್ತಿದ್ದಾರೆ. ಕ್ಷೇತ್ರದಲ್ಲಿ ಮುಸ್ಲಿಮರ ಪ್ರಭಾವ ಹೆಚ್ಚಾಗುತ್ತಿದೆ ಎಂದು ಆರೋಪಿಸಿದ ಬಿಜೆಪಿ 1998ರಲ್ಲಿ ದತ್ತ ಮಾಲಾ ಅಭಿಯಾನ ಆರಂಭಿಸಿದ ನಂತರ ಕ್ಷೇತ್ರವು ದೇಶವ್ಯಾಪಿ ಗಮನ ಸೆಳೆಯಿತು. ಸಂಘ ಪರಿವಾರದ ಪ್ರಯತ್ನಗಳಿಗೆ ಪ್ರತಿಯಾಗಿ ಕೋಮು ಸೌಹಾರ್ದ ವೇದಿಕೆಯೂ ಚಿಕ್ಕಮಗಳೂರಿನಲ್ಲಿ ಸಮಾವೇಶಗಳನ್ನು ಆಯೋಜಿಸುವ ಮೂಲಕ ಗಮನ ಸೆಳೆಯುತ್ತಿತ್ತು. ಕ್ಷೇತ್ರದಲ್ಲಿದ್ದ ಮುಜಾವವರು ಎರಡೂ ಪದ್ಧತಿಗಳ ಪ್ರಕಾರ ಪೂಜೆ ಮಾಡಿಕೊಡುತ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 9:13 pm, Sat, 3 December 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ