Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು, ಟ್ರ್ಯಾಕ್ಟರ್​​ ಇದ್ದೂ ಬಿಪಿಎಲ್​ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಖಡಕ್​ ಸೂಚನೆ

ಸರ್ಕಾರಿ ವೇತನ, ಕಾರು, ಟ್ಯಾಕ್ಟರ್​ ಇದ್ದೂ ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್​ ಪಡಿತರ ಚೀಟಿ ಪಡೆದವರಿಗೆ ರಾಜ್ಯ ಸರ್ಕಾರ ಶಾಕ್​ ನೀಡಿದೆ. ಸರ್ಕಾರದ ಮಾನದಂಡ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್​ ಪಡಿತರ ಚೀಟಿ ಹೊಂದಿದ್ದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದೆ.

ಕಾರು, ಟ್ರ್ಯಾಕ್ಟರ್​​ ಇದ್ದೂ ಬಿಪಿಎಲ್​ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಖಡಕ್​ ಸೂಚನೆ
ಬಿಪಿಎಲ್​ ಕಾರ್ಡ್​​ (ಪ್ರಾತಿನಿಧಿಕ ಚಿತ್ರ), ಸರ್ಕಾರದ ಆದೇಶ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on: Oct 21, 2024 | 9:16 AM

ಚಿಕ್ಕಮಗಳೂರು, ಅಕ್ಟೋಬರ್​ 21: ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (BPL) ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಒಂದು ವೇಳೆ ವಾಪಸ್ ನೀಡದೆ ಇದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್​ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದೆ. ಇದರ ಭಾಗವಾಗಿ ಅಕ್ರಮವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದವರಿಗೆ ಆಯಾ ತಾಲೂಕುಗಳಲ್ಲಿ ತಹಶಿಲ್ದಾರರು ನೋಟಿಸ್ ‌ಜಾರಿ ಮಾಡಿದ್ದಾರೆ. ಸರ್ಕಾರ ಕಳೆದ ತಿಂಗಳು ಅನರ್ಹ ಪಡಿತರದಾರರ ಪಟ್ಟಿ ಬಿಡುಗಡೆ ಮಾಡಿತ್ತು. ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 52 ಸಾವಿರ ಕಾರ್ಡ್ ರದ್ದಾಗುವ ಸಾಧ್ಯತೆ.

ಇದನ್ನೂ ಓದಿ: ಬಡತನ ರೇಖೆ ಮೇಲಿರುವ 40 ಲಕ್ಷಕ್ಕೂ ಹೆಚ್ಚು ಮಂದಿ ಬಳಿ ಬಿಪಿಎಲ್‌ ಕಾರ್ಡ್​​!

ಪಡಿತರ ಚೀಟಿ ಹೊಂದಲು ಯಾರು ಅನರ್ಹರು

  1. ಸರ್ಕಾರ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳಿಂದ ವೇತನ ಪಡೆಯುತ್ತಿರುವವರು ಪಡಿತರ ಚೀಟಿ ಹೊಂದಲು ಅನರ್ಹರು.
  2. ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವವರು ಪಡಿತರ ಚೀಟಿ ಹೊಂದಲು ಅನರ್ಹರು.
  3. ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹ.
  4. ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್​​, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹ.
  5. ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹ.

ಸರ್ಕಾರ ನಿಗದಿಪಡಿಸಿರುವ ಈ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸುವಂತೆ ಸರ್ಕಾರ ಮಾಧ್ಯಮ ಪ್ರಕಟಣೆ ಹೊಡಿಸಿದೆ.

ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ