Gruha Lakshmi Scheme: ಗೃಹ ಲಕ್ಷ್ಮಿ ಯೋಜನೆ ಜಾರಿಗೂ ಮುನ್ನವೇ ಚಿಕ್ಕಮಗಳೂರಿನಲ್ಲಿ ಅವ್ಯವಹಾರದ ಆರೋಪ

ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಕುರಿತು ತನಿಖೆ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.

Gruha Lakshmi Scheme: ಗೃಹ ಲಕ್ಷ್ಮಿ ಯೋಜನೆ ಜಾರಿಗೂ ಮುನ್ನವೇ ಚಿಕ್ಕಮಗಳೂರಿನಲ್ಲಿ ಅವ್ಯವಹಾರದ ಆರೋಪ
ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದರು.
Follow us
TV9 Web
| Updated By: Ganapathi Sharma

Updated on: Jul 18, 2023 | 4:20 PM

ಚಿಕ್ಕಮಗಳೂರು: ಕರ್ನಾಟಕದಲ್ಲಿ ‘ಗೃಹ ಲಕ್ಷ್ಮಿ’ ಯೋಜನೆ (Gruha Lakshmi Scheme) ಜಾರಿಯಾಗುವ ಮುನ್ನವೇ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ನಕಲಿ ಅರ್ಜಿಗಳು ಮಾರಾಟವಾಗುತ್ತಿವೆ. ಈ ಬಗ್ಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದು, ನಕಲಿ ನೋಂದಣಿ ಪತ್ರ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರವಿರುವ ನಕಲಿ ಅರ್ಜಿಗಳನ್ನು ಶೃಂಗೇರಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೈಬರ್ ಸೆಂಟರ್ ಗಳಲ್ಲಿ 100 ರೂ.ಗೆ ಮಾರಾಟ ಮಾಡಲಾಗುತ್ತಿದೆ.

ನಕಲಿ ಪತ್ರದಲ್ಲಿ ಫಲಾನುಭವಿಗಳ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯ ವಿವರಗಳನ್ನು ಕೇಳಲಾಗಿದೆ.

ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಕುರಿತು ತನಿಖೆ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ ಎಂದು ‘ನ್ಯೂಸ್ 9’ ವರದಿ ಮಾಡಿದೆ.

ಜುಲೈ 19 ರಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಗೃಹ ಲಕ್ಷ್ಮಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ .

ಇದನ್ನೂ ಓದಿ: ನಾಳೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ: ಅರ್ಜಿ ಎಲ್ಲಿ,ಹೇಗೆ ಹಾಕಬೇಕು? ಮಾಹಿತಿ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

ಈ ಯೋಜನೆಗೆ ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ ಮತ್ತು ಫಲಾನುಭವಿಗಳಿಗೆ ನೋಂದಣಿ ದಿನಾಂಕ, ಸಮಯ ಮತ್ತು ಕೇಂದ್ರದ ಬಗ್ಗೆ ಅವರ ಮೊಬೈಲ್ ಸಂಖ್ಯೆಗಳಿಗೆ ಎಸ್‌ಎಂಎಸ್ ಕಳುಹಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ತಮ್ಮ ನೋಂದಣಿ ನೇಮಕಾತಿ ದಿನಾಂಕ ಮತ್ತು ಸಮಯವನ್ನು ತಿಳಿಯಲು ಇಚ್ಛಿಸುವ ಜನರು 8147500500 ಗೆ SMS ಕಳುಹಿಸಬಹುದು. ಯೋಜನೆಗೆ ಸಂಬಂಧಿಸಿದಂತೆ ಸಂದೇಹಗಳಿರುವ ಜನರು 1902 ಗೆ ಕರೆ ಮಾಡಬಹುದು ಎಂದು ಸರ್ಕಾರ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್