AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಹಾಲು ಉತ್ಪಾದಕರ ಮಹಿಳಾ ಸಂಘದ ಕಾರ್ಯದರ್ಶಿ

ಚಿಕ್ಕಮಗಳೂರಿನ ಹಾಲು ಉತ್ಪಾದಕರ ಮಹಿಳಾ ಸಂಘದ ಕಾರ್ಯದರ್ಶಿಯೋರ್ವರು ಹಣ ದುರ್ಬಳಕೆ ಆರೋಪ ಮತ್ತು ಆ ಸಂಬಂಧ ಕಿರುಕುಳ ತಾಳಲಾರದೆ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತಿಯ ದೂರಿನ ಮೇರೆಗೆ, ಕಿರುಕುಳ ನೀಡಿದ 10 ಜನರ ವಿರುದ್ಧ ತರೀಕೆರೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಹಾಲು ಉತ್ಪಾದಕರ ಮಹಿಳಾ ಸಂಘದ ಕಾರ್ಯದರ್ಶಿ
ಮೃತ ಮಹಿಳೆImage Credit source: Tv9 Kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Mar 27, 2026 | 7:12 PM

Share

ಚಿಕ್ಕಮಗಳೂರು, ಮಾರ್ಚ್​​ 27: ಹಾಲು ಉತ್ಪಾದಕರ ಸಂಘದಲ್ಲಿ ಹಣ ದುರ್ಬಳಕೆ ಆರೋಪ ಸಂಬಂಧ ಮನನೊಂದು ಮಹಿಳಾ ಸಂಘದ ಕಾರ್ಯದರ್ಶಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರಿನ ತರೀಕೆರೆಯ ಹೆಚ್​​. ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಉಷಾ (45) ಮೃತ ಮಹಿಳೆಯಾಗಿದ್ದು, ಕಿರುಕುಳ ತಡೆಯಲು ನನ್ನಿಂದ ಆಗುತ್ತಿಲ್ಲ ಎಂದು ಹೇಳಿರುವ ವಿಡಿಯೋ ರೆಕಾರ್ಡ್​​ ಮಾಡಿ ನೇಣಿಗೆ ಶರಣಾಗಿದ್ದಾರೆ. ಲೆಕ್ಕಪತ್ರ ಪುಸ್ತಕ ಕಳೆದುಹೋಗಿರೋದು ತನ್ನಿಂದಾದ ತಪ್ಪು ಎಂದು ವಿಡಿಯೋದಲ್ಲವರು ಅಲವತ್ತುಕೊಂಡಿದ್ದಾರೆ.

ಕಳೆದ 10 ವರ್ಷಗಳಿಂದ ಹಣ ದುರುಪಯೋಗ ಎಂದು ಗ್ರಾಮಸ್ಥರು ಆರೋಪಿಸಿದ್ದು, ಈ ಸಂಬಂಧ ನಡೆದಿದ್ದ ಪಂಚಾಯತಿಯಲ್ಲೂ ಲೆಕ್ಕಪತ್ರ ಮಿಸ್ಸಿಂಗ್​​ ಆಗಿರೋದು ನಿಜ ಎಂದು ಉಷಾ ಒಪ್ಪಿಕೊಂಡಿದ್ದರು. 2010ರಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಆರಂಭವಾಗಿತ್ತು. ಅಲ್ಲಿಂದಲೂ ಉಷಾ ಸಂಘದ ಕಾರ್ಯದರ್ಶಿಯಾಗಿದ್ದರು. ಈ ನಡುವೆ 2025ರಲ್ಲಿ ಸಂಘಕ್ಕೆ ಹೊಸ ಸದಸ್ಯರು ಸೇರ್ಪಡೆಗೊಂಡ ಬಳಿಕ ಎಲ್ಲಾ ಲೆಕ್ಕಪತ್ರ ಕೇಳಲು ಅವರು ಪ್ರಾರಂಭಿಸಿದ್ದರು. ಆ ವೇಳೆ ಉಷಾ ವಿರುದ್ಧ ಹಣ ದುರ್ಬಳಕೆ ಆರೋಪ ಮಾಡಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ವಿಜಯಪುರದಲ್ಲೊಂದು ಮನಕಲಕುವ ಘಟನೆ; ಪುಟ್ಟ ಪುಟ್ಟ 3 ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ದೂರು ದಾಖಲು

ಘಟನೆ ಬಗ್ಗೆ ಮೃತ ಉಷಾ ಅವರ ಪತಿ ಪೊಲೀಸರಿಗೆ ದೂರು ನೀಡಿದ್ದು, ಪತ್ನಿ ಸಾವಿಗೆ ಕೆಲವರ ಕಿರುಕುಳವೇ ಕಾರಣ ಎಂದು ಆರೋಪಿಸಿದ್ದಾರೆ. ಜೊತೆಗೆ ಆಕೆ ಎಲ್ಲ ಲೆಕ್ಕಪತ್ರವನ್ನೂ ನೀಡಿದ್ದಳು. ಹೀಗಿದ್ದರೂ ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಹಾಕಲಾಗಿತ್ತು. ಎಚ್. ಎನ್. ಜಗದೀಶ್ (ದೊಡ್ಡೆರಿ), ದಕ್ಷಿಣ ಮೂರ್ತಿ, ಎಚ್. ಎಂ. ಯತೀಶ, ಲವಕುಮಾರ, ಕುಮಾರಸ್ವಾಮಿ, ವಿನಯ್ ಕುಮಾರ, ದರ್ಶನ್‌ ಕುಮಾರ್ ಎಚ್. ಆರ್., ಮಂಜುನಾಥ, ರಾಜೇಶ್ ಬಿನ್ ಪಾಲಾಕ್ಷಿ ಇವರೇ ತನ್ನ ಪತ್ನಿಯ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಉಷಾ ವಿಡಿಯೋದಲ್ಲಿ 10 ಜನರ ಹೆಸರು ಉಲ್ಲೇಖಿಸಿರುವ ಹಿನ್ನೆಲೆ ಹೆಚ್​​. ಮಲ್ಲೇನಹಳ್ಳಿ ಗ್ರಾಮದ 10 ಜನರ ಮೇಲೆ ತರೀಕೆರೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:08 pm, Fri, 27 March 26

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ