AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರೆದ ನಕ್ಸಲ್​ ಕೂಂಬಿಂಗ್​​: ಶರಣಾಗತಿಗೆ ಸೂಚನೆ, ಪ್ಯಾಕೇಜ್​ ನೀಡುತ್ತೇವೆ ಎಂದ ಪರಮೇಶ್ವರ್​

ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ನಿಗ್ರಹ ಪಡೆ ತೀವ್ರ ಹುಡುಕಾಟ ನಡೆಸುತ್ತಿದೆ. ವನಜಾಕ್ಷಿ ಸೇರಿದಂತೆ ಐವರು ನಕ್ಸಲರು, ಅರಣ್ಯದಲ್ಲಿ ಅಡಗಿರುವ ಶಂಕೆ ಇದೆ. ಸರ್ಕಾರ ಶರಣಾಗುವಂತೆ ಸೂಚನೆ ನೀಡಿದೆ. ಶರಣಾದವರಿಗೆ ಪ್ಯಾಕೇಜ್ ನೀಡುವುದಾಗಿ ಭರವಸೆ ನೀಡಿದೆ.

ಮುಂದುವರೆದ ನಕ್ಸಲ್​ ಕೂಂಬಿಂಗ್​​: ಶರಣಾಗತಿಗೆ ಸೂಚನೆ, ಪ್ಯಾಕೇಜ್​ ನೀಡುತ್ತೇವೆ ಎಂದ ಪರಮೇಶ್ವರ್​
ನಕ್ಸಲರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ವಿವೇಕ ಬಿರಾದಾರ|

Updated on:Nov 30, 2024 | 1:57 PM

Share

ಚಿಕ್ಕಮಗಳೂರು, ನವೆಂಬರ್​ 30: ಪಶ್ಚಿಮಘಟ್ಟ ಪ್ರದೇಶಗಳಲ್ಲಿ ನಕ್ಸಲ್​​ (Naxal) ಚಟುವಟಿಕೆ ಕಂಡು ಬಂದ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ (ANF) ಕೂಂಬಿಂಗ್ ಮುಂದುವರೆದಿದೆ. ​ಕರ್ನಾಟಕದ‌ ಐವರು ನಕ್ಸಲರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸುತ್ತಿನಗುಡ್ಡ, ಕಿಗ್ಗಾ, ಕೆರೆಕಟ್ಟೆ ಅರಣ್ಯದಲ್ಲಿ ಓಡಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ, ಹುಡಕಾಟ ನಡೆದಿದೆ. ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ.

ಅರಣ್ಯದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮುಂಡಗಾರು ಲತಾ, ಕಳಸ‌ ತಾಲೂಕಿನ ಬಾಳೆಹೊಳೆಯ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಗ್ರಾಮದ ಸುಂದರಿ, ರಾಯಚೂರು ಮೂಲದ ‌ಜಯಣ್ಣ ಮತ್ತು ಶೃಂಗೇರಿ ತಾಲೂಕಿನ ಹಿತ್ತಲಮನೆಯ ರವೀಂದ್ರ ಐವರು ನಕ್ಸಲರ ತಂಡ ಕಾಫಿನಾಡಿನ ಕಾಡಿನಲ್ಲಿ ಅಡಗಿರುವ ಸಾಧ್ಯತೆ ಇದೆ.

ಇದನ್ನೂ ಓದಿ: ನಕ್ಸಲ್​ ನಾಯಕ ವಿಕ್ರಂಗೌಡನ ಹೃದಯದಲ್ಲಿ ಅರಳಿತ್ತು ಪ್ರೇಮ, ಪ್ರೇಯಸಿ ಯಾರು, ಮುಂದೇನಾಯ್ತು?

ನಕ್ಸಲ್​ ವನಜಾಕ್ಷಿ (66 ವರ್ಷ) ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾಳೆ. ಈಕೆ ಮೋಸ್ಟ್ ವಾಂಟೆಡ್‌ ನಕ್ಸಲ್ ಅಂಗಡಿ ಸುರೇಶ್ ಪತ್ನಿಯಾಗಿದ್ದಾಳೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್ ಪತ್ನಿ ವನಜಾಕ್ಷಿ ಅನಾರೋಗ್ಯದಿಂದ ಬಳಲುತ್ತಿರುವ ಬಗ್ಗೆ ಕರ್ನಾಟಕದ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಹೀಗಾಗಿ, ಸರ್ಕಾರ ಶರಣಾಗುವಂತೆ ಹೇಳಿದೆ.

ಎಎನ್​ಫ್​ ಅಧಿಕಾರಿಗಳು ಕಳೆದ 4 ದಿನಗಳಿಂದ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಶರಣಾಗುವಂತೆ ಸರ್ಕಾರ ಸೂಚನೆಯಂತೆ ಎಎನ್​ಫ್​ ಶರಣಾಗತಿಗೆ ಮೊದಲ‌ ಆಧ್ಯತೆ ನೀಡಿದೆ. ಶರಣಾಗತಿ ಬಗ್ಗೆ ನಕ್ಸಲ್ ಸಂಬಂಧಿಕರು, ಮಾಜಿ ನಕ್ಸಲರು ಮತ್ತು ಸ್ಥಳೀಯರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಶರಣಾದ ನಕ್ಸಲ್​ರಿಗೆ ಸರ್ಕಾರ ನೀಡುವುದಾಗಿಯೂ ಪೊಲೀಸರು ಮಾಹಿತಿ ನೀಡಿದ್ದಾರೆ. ನಕ್ಸಲ್ ಶರಣಾಗತಿ ಕಮಿಟಿಗೂ ಶರಣಾಗಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಅಂಗಡಿ ಸುರೇಶ್ ಸಿಕ್ಕಿದ್ದು ಹೇಗೆ?

ಇದೇ ವರ್ಷ ಫೆಬ್ರವರಿಯಲ್ಲಿ ಕಣ್ಣೂರು ಅರಣ್ಯದ ನಕ್ಸಲ್ ಕ್ಯಾಂಪ್ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ದಾಳಿಯಿಂದ ನಕ್ಸಲ್ ಸುರೇಶ್ ಗಾಯಗೊಂಡಿದ್ದನು. ಹೀಗಾಗಿ ಸುರೇಶ್​ಗೆ ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ವಿಚಾರ ಇಳಿದು ಆಸ್ಪತ್ರೆಗೆ ತೆರಳಿದ ಕೇರಳ ಪೊಲೀಸರು ಸುರೇಶ್​ನನ್ನು ಬಂಧಿಸಿದ್ದಾರೆ.

ನಕ್ಸಲ್​​ರಿಗೆ ಪ್ಯಾಕೇಜ್​: ಪರಮೇಶ್ವರ್​

ನಕ್ಸಲರಿಗೆ ಶರಣಾಗಲು ಕೇಳುತ್ತಿದ್ದೇವೆ. ಅವರ ಜೊತೆಯಲ್ಲಿ ಇರುವವರಿಗೆ ಶರಣಾಗಲು ಕೇಳುತ್ತಿದ್ದೇವೆ. ನಕ್ಸಲರು ಶರಣಾದರೆ ಪ್ಯಾಕೇಜ್ ನೀಡುತ್ತೇವೆ. ಸಾಮಾನ್ಯ ಜೀವನಕ್ಕೆ ಅನುಕೂಲ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:18 pm, Sat, 30 November 24

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ