ಚಂದ್ರದ್ರೋಣ ಪರ್ವತದ ತಿರುವಿನಲ್ಲಿ100 ಅಡಿ ಕಂದಕಕ್ಕೆ ಉರುಳಿ ಬಿದ್ದ ಪ್ರವಾಸಿ ಬಸ್
ಚಂದ್ರದ್ರೋಣ ಪರ್ವತದ(Chandra Drona Parvatha) ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಪಲ್ಟಿಯಾಗಿ(Bus overturned)100 ಅಡಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ 23 ಜನರಿಗೆ ಸಣ್ಣಪುಟ್ಟ, 6 ಜನರಿಗೆ ಗಂಭೀರ ಗಾಯವಾಗಿದ್ದು, ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿಕ್ಕಮಗಳೂರು, ಏ.28: ತಾಲೂಕಿನ ಚಂದ್ರದ್ರೋಣ ಪರ್ವತದ(Chandra Drona Parvatha) ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಪಲ್ಟಿಯಾಗಿ(Bus overturned)100 ಅಡಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ 23 ಜನರಿಗೆ ಸಣ್ಣಪುಟ್ಟ ಗಾಯವಾದರೆ, 6 ಜನರಿಗೆ ಗಂಭೀರ ಗಾಯವಾಗಿದ್ದು, ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಇವರೆಲ್ಲರೂ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಿಂದ ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ದುರ್ಘಟನೆ ನಡೆದಿದೆ.
ಟಾಟಾಏಸ್ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕುಪ್ಪೂರು ಗ್ರಾಮದ ಬಳಿ ಟಾಟಾಏಸ್ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರು ಗ್ರಾಮದ ನಮನ(12), ಪೇಮಮ್ಮ(50) ಮೃತರು. ಇವರು ಹೊನ್ನವಳ್ಳಿಯ ಕಾಲಭೈರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಗಾಯಾಳು 7 ಜನರನ್ನು ಚಿಕ್ಕನಾಯಕನಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಚಿತ್ರದುರ್ಗ: ಖಾಸಗಿ ಬಸ್ ಪಲ್ಟಿ; ಮೂವರು ಸಾವು, 38ಕ್ಕೂ ಹೆಚ್ಚು ಜನರಿಗೆ ಗಾಯ
ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವು
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:25 pm, Sun, 28 April 24




