ಚಂದ್ರದ್ರೋಣ ಪರ್ವತದ ತಿರುವಿನಲ್ಲಿ100 ಅಡಿ ಕಂದಕಕ್ಕೆ ಉರುಳಿ ಬಿದ್ದ ಪ್ರವಾಸಿ ಬಸ್

ಚಂದ್ರದ್ರೋಣ ಪರ್ವತದ(Chandra Drona Parvatha) ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಪಲ್ಟಿಯಾಗಿ(Bus overturned)100 ಅಡಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ 23 ಜನರಿಗೆ ಸಣ್ಣಪುಟ್ಟ, 6 ಜನರಿಗೆ ಗಂಭೀರ ಗಾಯವಾಗಿದ್ದು, ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಂದ್ರದ್ರೋಣ ಪರ್ವತದ ತಿರುವಿನಲ್ಲಿ100 ಅಡಿ ಕಂದಕಕ್ಕೆ ಉರುಳಿ ಬಿದ್ದ ಪ್ರವಾಸಿ ಬಸ್
ಚಂದ್ರದ್ರೋಣ ಪರ್ವತದ ತಿರುವಿನಲ್ಲಿ100 ಅಡಿ ಕಂದಕಕ್ಕೆ ಉರುಳಿ ಬಿದ್ದ ಪ್ರವಾಸಿ ಬಸ್
Edited By: ಕಿರಣ್ ಹನುಮಂತ್​ ಮಾದಾರ್

Updated on: Apr 28, 2024 | 4:38 PM

ಚಿಕ್ಕಮಗಳೂರು, ಏ.28: ತಾಲೂಕಿನ ಚಂದ್ರದ್ರೋಣ ಪರ್ವತದ(Chandra Drona Parvatha) ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಪಲ್ಟಿಯಾಗಿ(Bus overturned)100 ಅಡಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ 23 ಜನರಿಗೆ ಸಣ್ಣಪುಟ್ಟ ಗಾಯವಾದರೆ, 6 ಜನರಿಗೆ ಗಂಭೀರ ಗಾಯವಾಗಿದ್ದು, ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಇವರೆಲ್ಲರೂ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಿಂದ ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ದುರ್ಘಟನೆ ನಡೆದಿದೆ.

ಟಾಟಾಏಸ್​ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕುಪ್ಪೂರು ಗ್ರಾಮದ ಬಳಿ‌ ಟಾಟಾಏಸ್​ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರು ಗ್ರಾಮದ ನಮನ(12), ಪೇಮಮ್ಮ‌(50) ಮೃತರು. ಇವರು ಹೊನ್ನವಳ್ಳಿಯ ಕಾಲಭೈರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಗಾಯಾಳು 7 ಜನರನ್ನು ಚಿಕ್ಕನಾಯಕನಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಚಿತ್ರದುರ್ಗ: ಖಾಸಗಿ ಬಸ್​​​ ಪಲ್ಟಿ; ಮೂವರು ಸಾವು, 38ಕ್ಕೂ ಹೆಚ್ಚು ಜನರಿಗೆ ಗಾಯ

ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಸಾವು

ಬೆಂಗಳೂರು: ನಗರದ ರಾಜಾಜಿನಗರ 6th ಬ್ಲಾಕ್‌ ನಲ್ಲಿ ಇದೇ ತಿಂಗಳ 22 ರ ಸಂಜೆ 4 ಗಂಟೆ ಸುಮಾರಿಗೆ ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಬೈಕ್‌ ಸವಾರ ಮೋಹನ್ (25) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದ. ಅಡ್ಡ ರಸ್ತೆಯಲ್ಲಿ ಪಾಸ್ ಆಗುವ ವೇಳೆ ವೇಗವಾಗಿ ಬಂದ ಕಾರು ಬೈಕ್​ಗೆ ಗುದ್ದಿತ್ತು. ಕಾರ್ ಗುದ್ದಿದ ರಭಸಕ್ಕೆ ಮೇಲೆ ಹಾರಿ ಮೋಹನ್ ರಸ್ತೆಗೆ ಬಿದ್ದಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಬ್ರೈನ್ ಡೆಡ್​ನಿಂದ ಕೊನೆಯುಸಿರೆಳೆದಿದ್ದ. ಈ ಕುರಿತು ಮಾಗಡಿ ರಸ್ತೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:25 pm, Sun, 28 April 24

Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
Follow Us