Chikmagalur Rains: ಮಳೆಯಿಂದ ಚಿಕ್ಕಮಗಳೂರಿನಲ್ಲಿ ನಾಳೆಯಿಂದ ಹಳದಿ ಅಲರ್ಟ್ ಘೋಷಣೆ; ಶಾಲೆಗಳಿಗೆ ರಜೆ

Karnataka Weather Today: ಫೆಂಗಲ್ ಚಂಡಮಾರುತ ತಮಿಳುನಾಡಿನ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಭಾರೀ ಮಳೆಯಿಂದಾಗಿ ಚೆನ್ನೈ ಅರ್ಧಕ್ಕರ್ಧ ಜಲಾವೃತವಾಗಿದೆ. ಈ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಉಂಟಾಗಿದ್ದು, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಮೈಸೂರು ಭಾಗದಲ್ಲಿ ಮಳೆಯಾಗುತ್ತಿದೆ.

Chikmagalur Rains: ಮಳೆಯಿಂದ ಚಿಕ್ಕಮಗಳೂರಿನಲ್ಲಿ ನಾಳೆಯಿಂದ ಹಳದಿ ಅಲರ್ಟ್ ಘೋಷಣೆ; ಶಾಲೆಗಳಿಗೆ ರಜೆ
ಚಿಕ್ಕಮಗಳೂರು ಮಳೆ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಸುಷ್ಮಾ ಚಕ್ರೆ

Updated on:Dec 02, 2024 | 6:28 PM

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ (ಡಿಸೆಂಬರ್ 3) ಮತ್ತು ಡಿಸೆಂಬರ್ 4ರಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಕಂಟ್ರೋಲ್ ರೂಂ ತೆರೆದಿದೆ. ಸಹಾಯಕ್ಕಾಗಿ ಕಂಟ್ರೋಲ್ ರೂಂ ನಂಬರ್ ‌08262 238950ಗೆ ಕರೆ ಮಾಡುವಂತೆ ಸೂಚನೆ ನೀಡಲಾಗಿದೆ.

ಕಾಫಿನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಒಂದು ದಿನ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಡಿಸೆಂಬರ್ 3ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನದಿ, ತಗ್ಗು ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಗುಡ್ಡ, ಇಳಿಜಾರು ಪ್ರದೇಶಗಳ ಜನರು ಜಾಗೃತರಾಗಿರುವಂತೆ ಸೂಚನೆ ನೀಡಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಿಪರೀತ ಚಳಿ ಉಂಟಾಗಿದ್ದು, ತುಂತುರು ಮಳೆಯಾಗುತ್ತಿದೆ. ವಿಪರೀತ ಚಳಿಗೆ ಚಿಕ್ಕಮಗಳೂರಿನ ಜನ ಕಂಗಾಲಾಗಿದ್ದಾರೆ.

ಇದನ್ನೂ ಓದಿ: Mangaluru Rains: ಫೆಂಗಲ್ ಚಂಡಮಾರುತದ ಆರ್ಭಟ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಚಂಡಮಾರುತದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮಾತ್ರವಲ್ಲದೆ ಹಾಸನ, ದಕ್ಷಿಣ ಕನ್ನಡ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೊಡಗಿನಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಉಡುಪಿ, ದಕ್ಷಿಣ ಕನ್ನಡದಲ್ಲಿ ಆರೆಂಜ್​ ಅಲರ್ಟ್​ ನೀಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:27 pm, Mon, 2 December 24

ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸಿದ್ದರಾಮಯ್ಯ, ಮೋದಿ ಹಣ ಹಾಕ್ತಾರೆಂದು ಅಂಚೆ ಕಚೇರಿಯಲ್ಲಿ ಜನವೋ ಜನ..!
ಸಿದ್ದರಾಮಯ್ಯ, ಮೋದಿ ಹಣ ಹಾಕ್ತಾರೆಂದು ಅಂಚೆ ಕಚೇರಿಯಲ್ಲಿ ಜನವೋ ಜನ..!
ರಸ್ತೆಯಲ್ಲೇ ಲೇಡಿ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ
ರಸ್ತೆಯಲ್ಲೇ ಲೇಡಿ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ
ಮುಡಾ ಹಗರಣದ ತನಿಖೆ ಚುರುಕು: ವಿಧಾನಸೌಧ ತಲುಪಿದ ಇಡಿ ತನಿಖೆ!
ಮುಡಾ ಹಗರಣದ ತನಿಖೆ ಚುರುಕು: ವಿಧಾನಸೌಧ ತಲುಪಿದ ಇಡಿ ತನಿಖೆ!
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು
‘ಚೈತ್ರಾ ಯಾರಿಗೆ ಹಾಲು ಕೊಡ್ತಾರೆ ಅಂತ ಗೊತ್ತಾಗಲ್ಲ’: ಐಶ್ವರ್ಯಾ ನೇರ ಮಾತು
‘ಚೈತ್ರಾ ಯಾರಿಗೆ ಹಾಲು ಕೊಡ್ತಾರೆ ಅಂತ ಗೊತ್ತಾಗಲ್ಲ’: ಐಶ್ವರ್ಯಾ ನೇರ ಮಾತು
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ CM ಶಂಕುಸ್ಥಾಪನೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ CM ಶಂಕುಸ್ಥಾಪನೆ